ಕೋಲಾರ

11ರಂದು ಚಿಕ್ಕಬಳ್ಳಾಪುರದಲ್ಲಿ ಸಾಕ್ಷರತಾ ದಿನಾಚರಣೆ

Published On :


ಕ.ಪ್ರ.ವಾರ್ತೆ   ಚಿಕ್ಕಬಳ್ಳಾಪುರ   ಸೆ.8
ನಗರದ ಭಾರತರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಸೆ.11 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಮಟ್ಟದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಅಕ್ಷರ ನಂದಿ ಜಿಲ್ಲಾ ಸಾಕ್ಷರತಾ ಸಮಿತಿ, ಜಿಲ್ಲಾ ಮತ್ತು ತಾಲೂಕು ಲೋಕ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ನಡೆಯಲಿರುವ ಧ್ವಜಾರೋಹಣವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್.ಎನ್. ಚಿನ್ನಪ್ಪ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಡಾ. ಕೆ. ಸುಧಾಕರ್ ವಹಿಸಲಿದ್ದಾರೆ.
ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ಡಾ. ಎಂ.ವೀರಪ್ಪ ಮೊಯ್ಲಿ ಹಾಗೂ ಕೇಂದ್ರ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಸ್ವತಂತ್ರ ಖಾತೆ ಸಚಿವ ಕೆ.ಎಚ್. ಮುನಿಯಪ್ಪ, ವಿಧಾನಸಭೆ ಉಪಸಭಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ, ಶಾಸಕರಾದ ಎಂ. ರಾಜಣ್ಣ,  ಎಸ್.ಎನ್. ಸುಬ್ಬಾರೆಡ್ಡಿ, ಎಂ.ಕೃಷ್ಣಾರೆಡ್ಡಿ, ವಿಧಾನಪರಿಷತ್ ಮುಖ್ಯ ಸಚೇತಕ  ಡಾ. ಎ.ಎಚ್. ಶಿವಯೋಗಿಸ್ವಾವು, ವಿಧಾನಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ನಸೀರ್ಅಹಮದ್, ಡಿ.ಎಸ್. ವೀರಯ್ಯ, ಡಾ. ಮಮ್ತತಾಜ್ ಆಲಿಖಾನ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಪಿ.ವಿ.ರಾಘವೇಂದ್ರ ಹನುಮಾನ್, ತಾಲೂಕು ಪಂಚಾಯಿತಿ ಅಧ್ಯಕ್ಷ ಓಬಳೇಶಪ್ಪ, ಉಪಾಧ್ಯಕ್ಷೆ ಭಾರತಿ ಎನ್.ಮೂರ್ತಿ, ನಗರಸಭೆ ಪೌರಾಯುಕ್ತ ಬಿ.ಕೆ.ರುದ್ರಮುನಿ ಮುಂತಾದವರು ಭಾಗವಹಿಸಲಿದ್ದಾರೆ. ರಾಜ್ಯ ಸಂಪನ್ಮೂಲ ವ್ಯಕ್ತಿ ಡಾ.ಕೋಡಿರಂಗಪ್ಪ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಕುರಿತು ಉಪನ್ಯಾಸ ನೀಡಲಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.