ಕೋಲಾರ

ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

Published On :

ಕ.ಪ್ರ. ವಾರ್ತೆ   ಮಾಲೂರು   ಸೆ.10
ಅವ್ಯವಸ್ಥೆ ಆಗರವಾಗಿದ್ದ ಬೆಂಗಳೂರು ಕಡೆಯ ಬಸ್ ಸಂಚಾರ ಕೂಡಲೇ ಸರಿಪಡಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಮಂಗಳವಾರ ಬಸ್ ನಿಲ್ದಾಣದಲ್ಲಿ ದಿಢೀರ್ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಕಳೆದ 15 ದಿನಗಳಿಂದ ಬೆಂಗಳೂರು ಕಡೆ ಸಂಚರಿಸುವ ಬಸ್ಗಳು ನಿಗದಿತ ವೇಳೆಯಲ್ಲಿ ಬಾರದೆ, ವಿದ್ಯಾರ್ಥಿಗಳು ಸಕಾಲದಲ್ಲಿ ಕಾಲೇಜು ತಲುಪಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಕಳೆದ ವಾರದಿಂದ ಮೂರು ಬಾರಿ ಬಸ್ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದರೂ ಪ್ರಯೋಜನವಾಗುತ್ತಿಲ್ಲ. ಈ ಬಗ್ಗೆ ಶಾಸಕರು ಸ್ಪಂದಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು.
ವಿದ್ಯಾರ್ಥಿಗಳು ಗ್ರಾಮಾಂತರ ಪ್ರದೇಶಗಳಿಂದ ಬೆಂಗಳೂರಿಗೆ ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ಸಂಚರಿಸುತ್ತಿದ್ದು, ಪ್ರತಿನಿತ್ಯ ಬಸ್ ತೊಂದರೆಯಿಂದ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಬೆಂಗಳೂರಿನಲ್ಲಿ ಉನ್ನತ್ತ ಶಿಕ್ಷಣಕ್ಕಾಗಿ ಹೋಗಬೇಕಾಗಿರುವ ನಾವೂ ಬೆಳಗ್ಗಿನ ಜಾವವೇ ಗ್ರಾಮ ಬಿಟ್ಟು ಮಾಲೂರಿಗೆ ಬಂದರೂ ಸಕಾಲದಲ್ಲಿ ಬಸ್ ಸಿಗದೆ ಕಾಲೇಜಿಗೆ ಹೋಗಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬೆಳಗ್ಗೆ 7.30ರಿಂದ ಪ್ರಾರಂಭವಾದ ಪ್ರತಿಭಟನೆಯಿಂದ ಬೆಂಗಳೂರು-ಹೊಸೂರು ರಸ್ತೆಗಳಲ್ಲಿ ಸಂಚಾರ ಅಸ್ತವಸ್ಯಸ್ತಗೊಂಡಿತ್ತು. ಪ್ರಯಾಣಿಕರು ಬಸ್ ಸಂಚಾರವಿಲ್ಲದೇ ಬಹಳ ತೊಂದರೆ ಅನುಭವಿಸಬೇಕಾಯಿತು. ಬಸ್ ಡಿಪೋ ವ್ಯವಸ್ಥಾಪಕರು ಸ್ಥಳಕ್ಕೆ ಬರಬೇಕೆಂಬ ವಿದ್ಯಾರ್ಥಿಗಳ ಒತ್ತಾಯದಿಂದ ಪ್ರತಿಭಟನೆ ಬೆಳಗ್ಗೆ 9.30 ರವರೆಗೆ ನಡೆಯಿತು.
ಡಿಪೋ ವ್ಯವಸ್ಥಾಪಕರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಸಹಕಾರದಲ್ಲಿ ಸ್ಥಳದಲ್ಲಿದ್ದ ಬಸ್ ನಿಲ್ದಾಣದ ನಿಂಯತ್ರಣ ಅಧಿಕಾರಿ ಮಾತನಾಡಿ, ಹಬ್ಬದ ಕಾರಣ ಸಂಚಾರ ವ್ಯತ್ಯಯವಾಗಿದ್ದು, ನಾಳೆಯಿಂದಲೆ ಬಸ್ ನಿಗದಿತ ವೇಳೆಯಲ್ಲಿ ಸಂಚಾರವಾಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದ ಮೇಲೆ ಪ್ರತಿಭಟನೆ ಕೈಬಿಟ್ಟ ವಿದ್ಯಾರ್ಥಿಗಳು ಬುಧವಾರ ನಂತರ ಪರಿಸ್ಥಿತಿ ಸುಧಾರಿಸದಿದ್ದರೆ ಹೋರಾಟವನ್ನು ಉಗ್ರ ರೀತಿಯಲ್ಲಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.