ಜೂಜೂಕೋರರ ಬಂಧನ
ಚಿಂತಾಮಣಿ: ಅಂದರ್ ಬಾಹರ್ ಆಡುತ್ತಿದ್ದ ಗುಂಪಿನ ಮೇಲೆ ಪೊಲೀಸರು ಏಕಾಏಕಿ ದಾಳಿ ನಡೆಸಿ ನಾಲ್ಕು ಜನರನ್ನು ಬಂಧಿಸಿ ಅವರಿಂದ ಸಾವಿರಾರು ರು. ನಗದು ಮತ್ತು ಬೆಲೆಬಾಳುವ ಮೊಬೈಲ್ಗಳನ್ನು ವಶಪಡಿಸಿಕೊಂಡಿರುವ ಘಟನೆ ಸೋಮವಾರ ಸಂಜೆ ದಿಗವಕೋಟೆ ಕೆರೆ ಅಂಗಳದಲ್ಲಿ ನಡೆದಿದೆ. ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ದಿಗವಕೋಟೆ ಗ್ರಾಮದ ಹೊರವಲಯದ ಕೆರೆ ಅಂಗಳದ ಬಳಿ ಅಂದರ್- ಬಾಹರ್ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಬ್ ಇನ್ಸ್ಪೆಕ್ಟರ್ ಪ್ರವೀಣ್ಕುಮಾರ್ ಹಾಗೂ ಸಿಬ್ಬಂದಿ ಏಕಾಏಕಿ ದಾಳಿ ನಡೆಸಿದ ಪರಿಣಾಮ ಶ್ರೀನಿವಾಸ್, ವೆಂಕಟರವಣಪ್ಪ, ರಾಮಕೃಷ್ಣ, ಶ್ರೀನಿವಾಸ್ ಎಂಬವರನ್ನು ಬಂಧಿಸಿ 32,620 ನಗದು ವಶಪಡಿಸಿಕೊಂಡಿದ್ದಾರೆ. ಪಟ್ಟಣ ಠಾಣೆಯ ಪೊಲೀಸರು ಕೇಸು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆಕಸ್ಮಿಕ ಬೆಂಕಿ: ಗೋದಾಮು ಭಸ್ಮ
ಗೌರಿಬಿದನೂರು: ಸೋಮವಾರ ಪಟ್ಟಣದ ಜನತೆ ವಿನಾಯಕ ಚತುರ್ಥಿ ಹಬ್ಬದ ಸಡಗರದಲ್ಲಿದ್ದಾಗ ಮುಂಜಾನೆ ಸುಮಾರು 6ಗಂಟಿಗೆ ಪಟ್ಟಣದ ಹೃದಯ ಭಾಗದಲ್ಲಿರುವ ಕೊಲಿಮಿಗಲ್ಲಿಯಲ್ಲಿನ ನಾರಾಯಣಪ್ಪನವರ ಮಗನಾದ ಸಂತೋಷ್ಗೆ ಸೇರಿದ ಕಟ್ಟಡದಲ್ಲಿ ಬಾಡಿಗೆಗೆ ಇದ್ದ ಪ್ಲೇಉಡ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿ ಕೊಂಡು ಸುಮಾರು 20ಲಕ್ಷಕ್ಕೂ ಮೇಲ್ಪಟ್ಟು ಸಾಮಾನುಗಳು ಸುಟ್ಟು ಭಸ್ಮವಾಗಿದೆ. ವಿದ್ಯುತ್ಶಾರ್ಟ್ ಸರ್ಕಿಟ್ನಿಂದ ಅಗ್ನಿ ಅನಾಹುತವಾಗಿರ ಬಹುದೆಂದು ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ್ ತಿಳಿಸಿರುತ್ತಾರೆ. ಸ್ಥಳೀಯ ಅಗ್ನಿಶಾಮಕ ಠಾಣೆಯ 3 ಯಂತ್ರಗಳು ಅಗ್ನಿ ನಂದಿಸಲು ಸುಮಾರು 2ಗಂಟೆಗೂ ಹೆಚ್ಚುಕಾಲ ಶ್ರಮಿಸಬೇಕಾಗಿ ಬಂತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

