ಪರಮಶಿವಯ್ಯ ವರದಿ ಜಾರಿಗೆ ಮೊಯ್ಲಿಗೆ ಆಸಕ್ತಿ ಇಲ್ಲ: ಶ್ರೀರಾಮರೆಡ್ಡಿ
ಗೌರಿಬಿದನೂರು: ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ಡಾ. ಪರಮಶಿವಯ್ಯ ವರದಿ ಜಾರಿಗೆ ತರಲು ಕೇಂದ್ರ ಪೆಟ್ರೋಲಿಯಂ ಸಚಿವ ವೀರಪ್ಪ ಮೊಯ್ಲಿ ಅವರಿಗೆ ಯಾವುದೇ ಆಸಕ್ತಿ ಇಲ್ಲ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ, ಜಿ.ವಿ. ಶ್ರೀರಾಮರೆಡ್ಡಿ ಆರೋಪಿಸಿದರು.
ಪಟ್ಟಣದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಏರ್ಪಡಿಸಿದ್ದ ತಾಲೂಕು ಮಟ್ಟದ ಸಮಾವೇಶದಲ್ಲಿ ಮಾತನಾಡಿ, ಕಳೆದ ಬಜೆಟ್ನಲ್ಲಿ 1800ಕೋಟಿ ಹಣ ಎತ್ತಿನ ಹೊಳೆ ಯೋಜನೆಗೆ ಮೀಸಲಿಟ್ಟಿದ್ದಾರೆ ಎನ್ನುತ್ತಿದ್ದಾರೆ. ಇದುವರೆವಿಗೂ ಪರಮಶಿವಯ್ಯ ವರದಿ ಬಗ್ಗೆ ಡಿಪಿಆರ್ ಆಗಿಲ್ಲ. ಕೇವಲ ಜನರನ್ನು ಮರುಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎತ್ತಿನಹೊಳೆ ಯೋಜನೆ ಜಾರಿ ಬಗ್ಗೆ ಮಾತನಾಡುತ್ತಿದ್ದಾರೆ. ಇದರಿಂದ ಕುಡಿಯಲು ನೀರು ಸಿಗುವುದಿಲ್ಲ ಜನರು ತಮ್ತಮ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಮನೆಗೊಬ್ಬರಂತೆ ಶಾಶ್ವತ ನೀರಾವರಿಗಾಗಿ ಹೋರಾಟಕ್ಕೆ ದುಮುಕುವುದು ಅನಿವಾರ್ಯ ಎಂದರು.
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳೂ ಸೇರಿದಂತೆ ಬಯಲು ಸೀಮೆಯ 8ಜಿಲ್ಲೆಗಳು ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿದೆ.
ಕೊಳವೆ ಬಾವಿಗಳು ಸಂಪೂರ್ಣ ಬತ್ತಿಹೋಗಿದ್ದು ಕೆಲವೇ ದಿನಗಳಲ್ಲಿ ನಮ್ಮ ಜಿಲ್ಲೆಗಳು ಬರಡು ಭೂಮಿಯಾಗಲಿದೆ ಜನ ಮತ್ತು ಜಾನುವಾರುಗಳು ಉಳಿಯಬೇಕಾದರೆ ಜಿ.ಎಸ್. ಪರಮಶಿವಯ್ಯ ಅವರ ವರದಿಯಂತೆ ಬಯಲು ಸೀಮೆ ಜಿಲ್ಲೆಗಳಿಗೆ 240ಟಿಎಂಸಿ ನೀರು ಹರಿಸುವಂತಹ ಶಾಶ್ವತ ನೀರಾವರಿ ಜಾರಿಯಾಗಲೇಬೇಕಿದೆ ಎಂದರು.
ಪರಿಸರವಾದಿ ಚೌಡಪ್ಪ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸಿದ್ದಗಂಗಪ್ಪ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನಿವೆಂಕಟಪ್ಪ ಮಾತನಾಡಿದರು. ಪ್ರಾಂತ ರೈತಸಂಘದ ತಾಲೂಕು ಕಾರ್ಯದರ್ಶಿ ಎನ್.ಆರ್. ರವಿಚಂದ್ರಾರೆಡ್ಡಿ, ತಾಲೂಕು ಕೃಷಿ ಕೂಲಿಕಾರ್ಮಿಕರ ಸಂಘದ ಅಧ್ಯಕ್ಷ ಸಿ.ಸಿ. ಅಶ್ವತ್ಥಪ್ಪ, ಚನ್ನರಾಯಪ್ಪ. ಆನೂಡಿನಾಗರಾಜ್, ಅನ್ವರ್ಬಾಷಾ, ಚಿಕ್ಕಕುರುಗೋಡು ರಾಮಕೃಷ್ಣಾರೆಡ್ಡಿ, ಮುನಿವೆಂಕಟಪ್ಪ, ಎಸ್.ಎಸ್.ರೆಡ್ಡಿ, ಹಿಂದೂಪುರ ರೈತ ಮುಖಂಡ ವೆಂಕಟರಾಮರೆಡ್ಡಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

