ಕೋಲಾರ

ಕಸಾಪದಿಂದ ನಾಳೆ ಶಿಕ್ಷಕರ ದಿನಾಚರಣೆ

Published On :

ಕೋಲಾರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲೂಕಿನ ರಾಜಕಲ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ರಾಜಕಲ್ಲಹಳ್ಳಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸೆ. 13 ರಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಶಿಕ್ಷಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಮದನಹಳ್ಳಿ ಕ್ರಾಸ್ನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಜಿ.ಆರ್. ಶಂಕರೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೋಲಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಅಧ್ಯಕ್ಷ ನಾರಾಯಣಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಹೊಸಕೋಟೆ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎನ್.ಎಸ್. ಮಂಜುನಾಥ್, ಮತ್ತು ಮುಖ್ಯ ಅತಿಥಿಗಳಾಗಿ ರಾಜಕಲ್ಲಹಳ್ಳಿ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಸರ್ವಮಂಗಳ, ಪ್ರಾಥಮಿಕ ಪ್ರೌಢಶಾಲೆಯ ಅಧ್ಯಕ್ಷ ಕೆ.ಎನ್. ವೆಂಕಟೇಶ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೆ.ವಿ.ವೆಂಕಟೇಶ್ಬಾಬು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಷ್ಟ್ರ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬಿ.ಎಂ. ಹನುಮಂತಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ಕಸಾಪ ತಾಲೂಕು ಅಧ್ಯಕ್ಷ ನಾರಾಯಣಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.