ಕೋಲಾರ

ಭಾವಚಿತ್ರ ತೆಗೆಯುವ ಕಾರ್ಯಕ್ಕೆ ಚಾಲನೆ

Published On :

ಕೋಲಾರ: ನಗರದ ಜಯನಗರ ಬಡಾವಣೆಯಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿಗಾಗಿ ಭಾವಚಿತ್ರ ತೆಗೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೋಲಾರ ನಗರದ ಜಯನಗರ ಬಡಾವಣೆಯ ಪಿ.ಸಿ ಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಗರಸಭಾ ಆಯುಕ್ತ ಕೆ.ಎನ್. ಜಗದೀಶ್ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟ್ರೀಯ ಜನಸಂಖ್ಯಾ ನೋಂದಣಿಗಾಗಿ ಕಾರ್ಯಕ್ರಮ ರಾಷ್ಟ್ರೀಯ ಕಾರ್ಯಕ್ರಮವಾಗಿದೆ, ಪತಿಯೊಬ್ಬ ಪ್ರಜೆ ನೋಂದಣಿ ಮಾಡಿಸುವುದು ಮೂಲ ಕರ್ತವ್ಯವಾಗಿದೆ ಎಂದು ತಿಳಿಸಿದರು. ನಗರಸಭೆ ಸದಸ್ಯ ಮುರಳಿ ಗೌಡ ಮಾತನಾಡಿ ಕೋಲಾರ ನಗರದಲ್ಲಿ ಪ್ರತಿಯೊಂದು ವಾರ್ಡಲ್ಲೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ನಡೆಸಲಾಗುತ್ತದೆ. ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಡಿಯಲ್ಲಿ ಪ್ರತಿಯೊಬ್ಬರು ನೋಂದಣಿ ಮಾಡಿಸಿಕೊಳ್ಳುವುದು ಹಕ್ಕು ಮತ್ತು ಕರ್ತವ್ಯವಾಗಿದೆ ಹಾಗೂ ಪ್ರತಿಯೊಬ್ಬರು ನೋಂದಣಿ ಮಾಡಿಸಿಕೊಳ್ಳಲು ತಿಳಿಸಿದರು. ಕಾರ್ಯಕ್ರಮದಲ್ಲಿ ಸಿ.ಇ.ಓ ಜೆ. ಶಿವಪ್ರಕಾಶ್, ಮುಖಂಡರಾದ ಎಸ್. ಸುರೇಶ್, ಹಾರೋಹಳ್ಳಿ ವಿಜಯಕುಮಾರ್, ಕೆ. ನಟರಾಜ್, ಕಾರ್ತಿಕ್ ರೆಡ್ಡಿ, ರಮೇಶ್, ಎಂ. ಮಂಜುನಾಥ್, ಕೆ. ರಾಜು, ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮೇಲ್ವಿಚಾರಕರಾದ ಹೆಚ್. ಎನ್. ನಾರಾಯಣ ಸ್ವಾಮಿ, ಕಂಪ್ಯೂಟರ್ ಅಪರೇಟರ್ಗಳಾದ ಕೃಷ್ಣಪ್ಪ, ಮಹೇಶ್, ಮಂಜು, ರಾಘವೇಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.