ಕೋಲಾರ

ಅಕ್ರಮ ಮರಳು ಲಾರಿ ವಶ

Published On :

ಮುಳಬಾಗಲು: ತಾಲೂಕಿನ ತಿಮ್ಮರಾಜಪಲ್ಲಿ ಗ್ರಾಮದ ಬಳಿ ಬುಧವಾರ ಬೆಳಗ್ಗೆ ಗ್ರಾಮಸ್ಥರು ತಮ್ಮ ಗ್ರಾಮದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮರಳು ಲಾರಿಯನ್ನು ವಶಪಡಿಸಿಕೊಂಡು ಗಾಲಿಯ ಗಾಳಿ ಬಿಟ್ಟು ಪ್ರತಿಭಟಿಸಿದರು. ಗ್ರಾಮದ ಭೈರವಿ ನದಿಯ ದಡದಿಂದ ಮರಳು ಸಾಗಿಸುತ್ತಿದ್ದ ಲಾರಿ ವಶಪಡಿಸಿಕೊಂಡ ಗ್ರಾಮಸ್ಥರು, ಬಳಿಕ ವಿಷಯವನ್ನು ತಹಸೀಲ್ದಾರ್ ಗಮನಕ್ಕೆ ತಂದರು.  ತಕ್ಷಣ ತಹಸೀಲ್ದಾರ್ ಡಿ.ವಿ. ರಾಮಮೂರ್ತಿ, ಕಂದಾಯ ನಿರೀಕ್ಷಕ ಬಿ.ಆರ್. ರೆಡ್ಡೆಪ್ಪ ಗುಪ್ತ, ನರೇಶ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಲಾರಿ ವಶಪಡಿಸಿಕೊಂಡ ಕಾರಣ ಸಂಚಾರಕ್ಕೆ ಅಡಚಣೆಯಾಗಿದ್ದ ಇತರೆ ವಾಹನಗಳನ್ನು ತೆರವುಗೊಳಿಸಲಾಯಿತು. ಅಕ್ರಮ ಮರಳು ಲಾರಿಯನ್ನು ಹಿಡಿದುಕೊಟ್ಟ ಗ್ರಾಮಸ್ಥರನ್ನು ತಹಸೀಲ್ದಾರ್ ಅಭಿನಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.