ಕೋಲಾರ

ವಿವೇಕಾನಂದ ಜನ್ಮದಿನಾಚರಣೆ ಪ್ರಯುಕ್ತ ದೇಶಾದ್ಯಂತ ಭಾರತಕ್ಕಾಗಿ ಓಟ

Published On :

ಕೆಜಿಎಫ್: ಸ್ವಾಮಿ ವಿವೇಕಾನಂದ 150ನೇ ಜನ್ಮದಿನಾಚರಣೆ ಅಂಗವಾಗಿ ದೇಶಾದ್ಯಂತ ಭಾರತಕ್ಕಾಗಿ ಓಟ ಎಂಬ ಕಾರ್ಯಕ್ರಮವನ್ನು ನಗರದ ಸ್ವಾಮಿ ವಿವೇಕಾನಂದ ಸೇವಾ ಸಮಿತಿ ವತಿಯಿಂದ ಆಯೋಜಿಸಲಾಗಿತ್ತು. ನಗರಸಭೆ ಮೈದಾನದಿಂದ ಭಾರತಕ್ಕಾಗಿ ಓಟಕ್ಕೆ ಚಾಲನೆ ನೀಡಿದ ಕಾರ್ಯಕ್ರಮಕ್ಕೆ ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ ಸ್ವಾಮಿ ವಿವೇಕಾನಂದರ ಆದರ್ಶಗಳ ಬಗ್ಗೆ ಘೋಷಣೆಗಳನ್ನು ಕೂಗುತ್ತ ನಗರದ ಗೀತಾ ರಸ್ತೆ, ಪ್ರಿಚರ್ಡ್ ರಸ್ತೆ, ಸೂರಜ್ಮುಲ್ ವೃತ್ತ, ಗಾಂಧಿ ವೃತ್ತ, ಉರಿಗಾಂ ರೈಲ್ವೆ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.
ದೇಶ್ಪಾಂಡೆ ಮಾತನಾಡಿ, ಸ್ವಾಮಿ ವಿವೇಕಾನಂದರು ದೇಶಕ್ಕಾಗಿ ವಿವಿಧ ರೀತಿಯ ಹೋರಾಟಗಳನ್ನು ಮಾಡಿ ಯುವ ಸಮಾಜಕ್ಕೆ ದಾರಿದೀಪವಾಗಿ ಅವರ ತತ್ವ ಸಿದ್ಧಾಂತಗಳನ್ನು ಯುವಕರು ಮತ್ತು ವಿದ್ಯಾರ್ಥಿಗಳು ಪಾಲಿಸಲು ಮುಂದಾಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ್ರಾಜ್ ಸಿಂಧೆ, ಮುಂಖಂಡರಾದ ವೆಂಕಟೇಶ್, ನಾಗರಾಜ್, ಮದನ್ಗೋಪಾಲ್, ಗಣೇಶ್, ಸುಬ್ರಮಣಿ ಪಂಡಿತ್, ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ವೀರವೆಂಕಟಪ್ಪ, ರಾಮಕೃಷ್ಣ ಸೇರಿದಂತೆ ಇತರೆ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.