ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರ್ ಕಚೇರಿಗೆ ರೈತರ ಮುತ್ತಿಗೆ
ಕನ್ನಡಪ್ರಭ ವಾರ್ತೆ, ಮಾಲೂರು, ಸೆ.12
ತಾಲೂಕು ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುವಾರ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ನಾರಾಯಣಗೌಡ ತಾಲೂಕಿನಲ್ಲಿ ಸರ್ಕಾರಿ ಅಧಿಕಾರಿಗಳಿಂದ ರೈತರು ನಿತ್ಯ ಶೋಷಣೆಗೆ ಒಳಗಾಗುತ್ತಿದ್ದಾರೆ. ಪಹಣಿ-ಜಾತಿ-ಆದಾಯ ಪತ್ರ ಬೇಕಾದರೆ ಗ್ರಾಮ ಲೆಕ್ಕಿಗ ಸಿಗದೆ ಬ್ರೋಕರ್ ಮೂಲಕ ಹಣ ಕೊಟ್ಟು ಕೆಲಸ ಮಾಡಿಸಿಕೊಳ್ಳಬೇಕಾಗಿದೆ. ಸರ್ಕಾರದ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿದರು.
ತಾಲೂಕಿನಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ ಬಂದು 30ಕ್ಕ್ತೂ ಹೆಚ್ಚು ಹಸುಗಳು ಸಾವನ್ನಪ್ಪಿದ್ದು, ಪಶು ಸಂಗೋಪನೆ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂಜು ದೂರಿದ ನಾರಾಯಣಗೌಡ ಉಚಿತವಾಗಿ ರಾಸುಗಳಿಗೆ ನೀಡಿಬೇಕಾಗಿದ್ದ ಕಾಲುಬಾಯಿ ಜ್ವರದ ಔಷಧಿಗಳಿಗೆ ರೈತರಿಂದ ತಲಾ 500 ರು. ವಸೂಲಿ ಮಾಡಲಾಗುತ್ತಿದೆ ಎಂದು ದೂರಿದರು.
ತಾಲೂಕಿನಲ್ಲಿ ಕೃಷಿಗೆ ಮಾರಕವಾಗಿರುವ ಬಯೋ-ಕೆಮಿಕಲ್ ಕೀಟನಾಶಕ ಮಾರಾಟ ಮಾಡುತ್ತಿದ್ದು, ಸರ್ಕಾರವು ನಿಷೇಧಿಸಿದರೂ ಇಲ್ಲಿನ ಇಲಾಖೆ ಅಧಿಕಾರಿಗಳ ಜಾಣಕುರುಡುತನದಿಂದ ಅಕ್ರಮವಾರಿ ಔಷಧಿಗಳು ಮಾರಾಟವಾಗುತ್ತಿದೆ. ಇದನ್ನು ತಪ್ಪಿಸಬೇಕು ಎಂದು ಅವರು ಒತ್ತಾಯಿಸಿದರು.
ತಾಲೂಕು ಅಧ್ಯಕ್ಷ ಮಂಜುನಾಥ್ ಬಾಬು ಮಾತನಾಡಿ ತಾಲೂಕಿನಲ್ಲಿ ಕೆರೆಗಳನ್ನು ಒತ್ತುವರಿ ಮಾಡಿ ಫಿಲ್ಟರ್ ಮಾಫಿಯಾ ನಡೆಯುತ್ತಿದ್ದು, ಅವುಗಳನ್ನು ತಡೆಗಟ್ಟಬೇಕೆಂದು ಮನವಿ ಮಾಡಿದರು. ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಡಾ. ಸುಧಾ ಜಿಲ್ಲಾಧಿಕಾರಿಗಳ ಆದೇಶದಂತೆ ಪ್ರತಿ ತಿಂಗಳು ಕನಿಷ್ಠ 15-20 ಕೆರೆಗಳ ಸರ್ವೆ ಮಾಡುವಂತೆ ಸರ್ವೆ ಅಧಿಕಾರಿಗಳಿಗೆ ತಿಳಿಸಿದ್ದು, ಈಗಾಗಲೇ ತಾಲೂಕಿನಲ್ಲಿ 6 ಕೆರೆಗಳ ಸರ್ವೆ ಕಾರ್ಯ ಮುಗಿದಿದೆ ಎಂದ ತಹಸೀಲ್ದಾರ್ ಕಾಲುಬಾಯಿ ಜ್ವರಕ್ಕೆ ತುತ್ತಾಗಿರುವ ಹಸುಗಳ ಚಿಕಿತ್ಸೆಗೆ ಹಣ ವಸೂಲಾತಿ ಮಾಡುತ್ತಿರುವ ಬಗ್ಗೆ ವರದಿ ನೀಡುವಂತೆ ಪಶು ಇಲಾಖೆಗೆ ಸೂಚಿಸಲಾಗುವುದು ಎಂದರು.
ಗ್ರಾಮ ಲೆಕ್ಕಿಗರಿಗೆ ರೈತರಿಗೆ ಸಹಕರಿಯಾಗುವಂತೆ ಸರ್ಕಾರದ ಮೊಬೈಲ್ ನೀಡಬೇಕೆಂಬ ಮನವಿಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡುವುದಾಗಿ ತಿಳಿಸಿದರು.
ಜಿಲ್ಲಾ ಸಂಚಾಲಕ ಹೂವಳ್ಳಿ ನಾಗರಾಜ್, ತಿಪ್ಪಸಂದ್ರ ಶ್ರೀನಿವಾಸ್, ಟೇಕಲ್ ಪ್ರಕಾಶ್, ವಾಲೆ ಶ್ರೀನಿವಾಸ್, ಕೃಷ್ಣಮೂರ್ತಿ, ಪುರುಷೋತ್ತಮ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

