ಕೋಲಾರ

ಸುದ್ದಿ ಸಂಕ್ಷೇಪ

Published On :

ಇಂದು ಕೆಜಿಎಫ್ನಲ್ಲಿ ಉದ್ಯೋಗ ಮೇಳ
ಕೆಜಿಎಫ್: ಮಾಜಿ ಸೈನಿಕರ ಸಂಘದ ವತಿಯಿಂದ ಕೆಜಿಎಫ್ನ ಬೆಮೆಲ್ ನಗರದ ಬೆಮೆಲ್ ಕಾರ್ಖಾನೆಯ ಮುಂಭಾಗದಲ್ಲಿ ಸೇನೆಯಿಂದ ನಿವೃತ್ತಿ ಹೊಂದಿದವರಿಗೆ ಸೆ. 13ರಂದು ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಶುಕ್ರವಾರ ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಿ ಸಾಯಂಕಾಲ 4ರ ತನಕ ನಡೆಯುವ ಈ ಉದ್ಯೋಗ ಮೇಳದಲ್ಲಿ ಇತ್ತೀಚೆಗೆ ಸೇನೆಯಿಂದ ಮಾಜಿ ಸೈನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೆಜಿಎಫ್ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳಾದ ಪ್ರೇಮ್ಕುಮಾರ್, ವಿಜಯಕುಮಾರ್ ತಿಳಿಸಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಕೆಜಿಎಫ್: ಮನೆಯ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು ಬೀರುವಿನಲ್ಲಿಟ್ಟಿದ್ದ ಚಿನ್ನ- ಬೆಳ್ಳಿಯ ಒಡವೆ ಕಳವು ಮಾಡಿಕೊಂಡು ಹೋಗಿರುವ ಘಟನೆ ನಗರದಲ್ಲಿ ನಡೆದಿದೆ.  ರಾಬರ್ಟ್ಸನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪೈಪ್ಲೈನ್ ನಿವಾಸಿ ಮುನಿಸ್ವಾಮಿ ಪತ್ನಿ ಉಷಾಲಕ್ಷ್ಮೀ ಅವರು ಬುಧವಾರ ಬೆಳಗ್ಗೆ ತಮ್ಮ ಕುಟುಂಬ ಸಮೇತ ಬೆಂಗಳೂರಿಗೆ ಹೊಗಿದ್ದು, ಗುರುವಾರ ಸಂಜೆ ಮನೆಗೆ ಹಿಂತಿರುಗಿ ಬಂದು ನೋಡಿದಾಗ ಕಳವು ಆಗಿರುವುದು ಗೊತ್ತಾಗಿದೆ. 125 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ಕಳ್ಳತನವಾಗಿದೆ ಎಂದು ಮುನಿಸ್ವಾಮಿ ರಾಬರ್ಟ್ಸನ್ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ವೃತ್ತ ನಿರೀಕ್ಷಕ ಟಿ.ಸಿ. ವೆಂಕಟೇಶ್, ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ನಾಳೆ  ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಕೋಲಾರ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸುವ ಸಲುವಾಗಿ ಕೋಲಾರ ಲೋಕಸಭಾ ವ್ಯಾಪ್ತಿಗೆ ಬರುವ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯನ್ನು ಸೆ.14 ರಂದು ಬೆಳಿಗ್ಗೆ 10 ಗಂಟೆಗೆ ಚಿಂತಾಮಣಿ ತಾಲೂಕಿನ ಭೂರಗಮಾಕಲಹಳ್ಳಿಯ ಸಂಜೀವ ಸಮುದಾಯ ಭವನದಲ್ಲಿ ಹಾಗೂ ಮಧ್ಯಾಹ್ನ 2 ಗಂಟೆಗೆ ಬಂಗಾರಪೇಟೆಯ ಎಸ್.ಎನ್. ರೆಸಾರ್ಟ್ನಲ್ಲಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಂಖಂಡರ ಮತ್ತು ಕಾರ್ಯಕರ್ತರ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಲ್. ಅನಿಲ್ಕುಮಾರ್ ತಿಳಿಸಿದ್ದಾರೆ.
ಈ ಸಭೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಡಾ. ಚೆಲ್ಲಾಕುಮಾರ್ ಆಗಮಿಸಲಿದ್ದಾರೆ. ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ, ವಿಧಾನಪರಿಷತ್ ಸದಸ್ಯ ನಜೀರ್ ಅಹ್ಮದ್, ಬಂಗಾರಪೇಟೆ ಶಾಸಕ ಕೆ.ಎಂ.ನಾರಾಯಣಸ್ವಾಮಿ, ಚಿಂತಾಮಣಿ ಕ್ಷೇತ್ರದ ಮುಖಂಡರಾದ ವಾಣಿ ಕೃಷ್ಣಾರೆಡ್ಡಿ, ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಎನ್.ಎಸ್. ಬಿಸ್ಸೇಗೌಡ, ಮತ್ತು ಎರಡು ಜಿಲ್ಲೆಯ ಕೆಪಿಸಿಸಿಯ ಉಸ್ತುವಾರಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.