ಕೋಲಾರ

ಕೊಳವೆಬಾವಿಗಳ ಸುಸ್ಥಿತಿ ಬಗ್ಗೆ 3 ದಿನದಲ್ಲಿ ವರದಿ ನೀಡಿ

Published On :

ಬಾಗೇಪಲ್ಲಿ: ಅಕ್ರಮ ಗಣಿಗಾರಿಕೆ ಬಗ್ಗೆ ಯಾವುದೇ ದೂರುಗಳು ಬರಬಾರದು. ಪೊಲೀಸ್ ಇಲಾಖೆ ಈ ಬಗ್ಗೆ ತೀವ್ರ ನಿಗಾ ವಹಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಶುಕ್ರವಾರ ತಾ.ಪಂ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಬಾಗೇಪಲ್ಲಿಯಲ್ಲಿ ಒಟ್ಟು 68 ಕೊಳವೆಬಾವಿಗಳನ್ನು ಕೊರೆಯಲಾಗಿದ್ದು, ಅವುಗಳಲ್ಲಿ 38 ನಿಂತು ಹೋಗಿದ್ದು, ಇದಕ್ಕೆ ವಿದ್ಯುತ್ ಪೂರೈಕೆ ಮಾಡಲು ಬೆಸ್ಕಾಂ ಮುಂದಾಗಬೇಕು. ಅಧಿಕಾರಿಗಳು ಶೀಘ್ರದಲ್ಲಿಯೇ ಕೊಳವೆಬಾವಿಗಳ ಸ್ಥಿತಿಗತಿಗಳ ಬಗ್ಗೆ 3 ದಿನಗಳಲ್ಲಿ ವರದಿ ನೀಡಬೇಕೆಂದು ಸಚಿವರು ಅಧಿಕಾರಿಗೆ ತಾಕೀತು ಮಾಡಿದರು.
ತಾಲೂಕಿನಲ್ಲಿ ಸ್ಮಶಾನ, ಹಾಸ್ಟೆಲ್, ಜನರ ವಸತಿ ಹಾಗೂ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಬೇಕೆಂದು ಸೂಚಿಸಿದ ಸಚಿವರು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಖಾಲಿ ಇರುವ ಶಿಕ್ಷಕರ ಹುದ್ದೆ ಸಮಸ್ಯೆಯನ್ನು ಬಗೆಹರಿಸಲಾಗುವುದು. ಈಗಾಗಲೇ ಕ್ಷೀರ ಭಾಗ್ಯ ಎಲ್ಲೆಡೆ ಅನುಷ್ಠಾನ ಆಗಿದೆ. ಜತೆಗೆ ಶಾಲೆಗಳು ಮತ್ತು ಹಾಸ್ಟೆಲ್‌ಗಳಿಗೆ ಫಿಲ್ಟರ್ ನೀರನ್ನು ಪೂರೈಸಲಾಗುತ್ತಿದೆ. ಎಲ್ಲ ಮಕ್ಕಳಿಗೂ ಸಮವಸ್ತ್ರ, ಪುಸ್ತಕ ವಿತರಣೆಯಾಗಿದೆ. 8 ಶಾಲೆಗಳಲ್ಲಿ ಅಡುಗೆ ಕೋಣೆಗಳು ನಿರ್ಮಾಣಗೊಂಡಿಲ್ಲ. ಒಂದು ಅಡುಗೆ ಕೋಣೆ ನಿರ್ಮಿಸಲು 3.10 ಲಕ್ಷ ಹಣ ಬೇಕಿದ್ದು, ಇದನ್ನು ಕಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖಾ ಅಧಿಕಾರಿಗಳು ತಿಳಿಸಿದರು.
 ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ 14 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಿಪಿಎಲ್ ಕಾರ್ಡಿಗೆ ಬಂದಿದ್ದು, ಸುಮಾರು 4778 ಕಾರ್ಡುಗಳು ವಿತರಣೆಯಾಗಿವೆ ಎಂದು ಇಲಾಖಾ ಅಧಿಕಾರಿಗಳು ತಿಳಿಸಿದರು.
ಯೋಜನೆ ತಯಾರು: ಜಿಲ್ಲಾಧಿಕಾರಿ ವಿಶಾಲ್ ಮಾತನಾಡಿ, ಪುರಸಭೆಯಿಂದ 5 ಕೋಟಿ ರು.ಗಳ ನಗರೋತ್ಥಾನ ಕಾಮಗಾರಿ ಕೆಲಸ ಕೈಗೊಂಡಿದ್ದು ಟೆಂಡರ್ ಕರೆಯಲಾಗಿದೆ. ವಸತಿ ಯೋಜನೆಯಡಿ ಲೇಔಟ್ ನಿರ್ಮಾಣಕ್ಕೆ 3.32 ಗುಂಟೆ ಪ್ರದೇಶ ಗುರುತಿಸಲಾಗಿದೆ. ಅರ್ಬನ್ ನೀರು ಸರಬರಾಜಿಗೆ 17 ಕೋಟಿ 79 ಲಕ್ಷ ಹಣ ಮಂಜೂರು ಮಾಡಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ 720 ಲಕ್ಷ ರು. ಯೋಜನೆ ತಯಾರಾಗಿದೆ ಎಂದು ಇಲಾಖಾ ಅಧಿಕಾರಿಗಳು ತಿಳಿಸಿದರು. ಕಂದಾಯ ಇಲಾಖೆಯು ಮನಸ್ವಿನಿ ಮೈತ್ರಿ ಯೋಜನೆಗಳು ಫಲಾನುಭವಿಗಳಿಗೆ ಹಣ ನೀಡಲಾಗುತ್ತಿದೆ ಎಂದು  ತಿಳಿಸಿದರು.
ಸಭೆಯಲ್ಲಿ ಶಾಸಕ ಸುಬ್ಬಾರೆಡ್ಡಿ, ಜಿ.ಪಂ. ಅಧ್ಯಕ್ಷ ಚಿನ್ನಪ್ಪ, ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ತಾ.ಪಂ. ಅಧ್ಯಕ್ಷೆ ಮುನಿರತ್ಮಮ್ಮ, ಉಪಾಧ್ಯಕ್ಷ ಶಂಕರರೆಡ್ಡಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾಮಂಜುನಾಥ್, ಜಿ.ಪಂ. ಸದಸ್ಯೆ ಸಾವಿತ್ರಮ್ಮ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.