ಗ್ರಾಮಗಳ ಅಭಿವೃದ್ಧಿಗೆ ಜನತೆ ಸಹಕಾರ ಅಗತ್ಯ
ಕ.ಪ್ರ.ವಾರ್ತೆ ಕೋಲಾರ ಸೆ. 13
ತಾಲೂಕಿನ ಶಾಪುರ್ ಗ್ರಾಮ ಪಂಚಾಯಿತಿಗೆ ಒಳಪಡುವ ಗ್ರಾಮಗಳು ಅಭಿವೃದ್ಧಿಯಾಗಬೇಕಾದರೆ ಗ್ರಾಮ ಪಂಚಾಯಿತಿ ಸದಸ್ಯರ ಮತ್ತು ಗ್ರಾಮಸ್ಥರು ಸಹಕಾರ ಅತಿಮುಖ್ಯವೆಂದು ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಕರೆ ನೀಡಿದರು.
ತಾಲೂಕಿನ ಶಾಪುರ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ರಾಮಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಹೊಲ ನಮ್ಮ ದಾರಿ ಯೋಜನೆ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳನ್ನು ಜಾರಿಗೆ ತರಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು, ಜನತೆಯ ಸಹಕಾರದೊಂದಿಗೆ ಕೆರೆಗಳ ಪುನಶ್ಚೇತನ, ವಯುಕ್ತಿಕ ಶೌಚಾಲಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರ ಜಮೀನು ಅಭಿವೃದ್ಧಿ, ನಿರ್ಮಲ ಭಾರತ ಯೋಜನೆ ಹಾಗೂ ವಸತಿ ಯೋಜನೆಯಲ್ಲಿ ಪ್ರಗತಿ ಸಾಧಿಸಬೇಕೆಂದರು.
ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಮಾತನಾಡಿ ಗ್ರಾಮಗಳು ಅಭಿವೃದ್ಧಿಗೊಸ್ಕರ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ, ಅದನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಸ್. ಸತ್ಯನಾರಾಯಣ ರೆಡ್ಡಿ ಪಂಚಾಯಿತಿ ಅಭಿವೃದ್ಧಿ ಬಗ್ಗೆ ಪ್ರಸ್ತಾವಿಕವಾಗಿ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಮಾಜಿ ಉಪಾಧ್ಯಕ್ಷ ಡಿ.ವಿ. ಹರೀಶ್ ಮಾತನಾಡಿ ಪಂಚಾಯಿತಿಯ ಅಭಿವೃದ್ಧಿಗಾಗಿ ಜಿಲ್ಲಾ ಪಂಚಾತಿಯಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು, ಉಪಾಧ್ಯಕ್ಷ ಎಂ. ನಾಗರಾಜು, ನಾರು ಮಂಡಳಿ ನಿರ್ದೇಶಕ ಹೊಳಲಿ ಪ್ರಕಾಶ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್. ಭಟ್, ಸಹಯಾಕ ಕಾರ್ಯಪಾಲಕ ಅಭಿಯಂತರ ಎಂ. ಮಂಜುನಾಥ್, ನೋಡಲ್ ಅಧಿಕಾರಿ ಬಿಂದು, ರೇಷ್ಮೆ ಉಪನಿರ್ದೇಶಕ ಕೃಷ್ಣಪ್ಪ, ಮುಖಂಡ ಸೊಣ್ಣೇಗೌಡ, ಎ.ಪಿ.ಎಂ.ಸಿ ಉಪಾಧ್ಯಕ್ಷ ರಾಮು, ಗ್ರಾಮ ಪಂಚಾಯಿತಿ ಸದಸ್ಯರಾದ ಒಳಂಬಳ್ಳಿ ಮುನಿವೆಂಕಟಪ್ಪ, ವೆಂಕಟಮುನಿಯಪ್ಪ, ದೊಡ್ನಹಳ್ಳಿ ಚೌಡಪ್ಪ, ಅಬ್ಬಣಿ ಸುಬ್ರಮಣಿ, ರೆಡ್ಡಮ್ಮ, ನೀಲಮ್ಮ, ಅಬ್ಬಣಿ ಚಂದ್ರೇಗೌಡ, ನೀಲಕಂಠಪುರ ನಾರಾಯಣಸ್ವಾಮಿ, ಬೆಳಗಾನಹಳ್ಳಿ ಮುನಿವೆಂಕಟಪ್ಪ ಮುಂತಾದವರು ಇದ್ದರು. ಅಬ್ಬಣಿ ನಾಗರಾಜ್ ಸ್ವಾಗತಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

