ತೊಟ್ಟಿಯಲ್ಲಿ ಬಿದ್ದು ಬಾಲಕ ಸಾವು
ಕೆಜಿಎಫ್: ಶೌಚಾಲಯಕ್ಕಾಗಿ ನಿರ್ಮಿಸಿದ್ದ 5ಅಡಿ ಎತ್ತರದ ತೆರೆದ ತೊಟ್ಟಿಯಲ್ಲಿ 4 ವರ್ಷದ ಬಾಲಕ ಆಟವಾಡಲು ಹೋಗಿ ಬಿದ್ದು ಸಾವನ್ನಪ್ಪಿರುವ ಘಟನೆ ನಗರದಲ್ಲಿ ಶುಕ್ರವಾರ 12 ಗಂಟೆಯಲ್ಲಿ ನಡೆದಿದೆ.
ಚಾಂಪಿಯನ್ರೀಫ್ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎನ್ಜಿಎಸ್ ಬ್ಲಾಕ್ ನಿವಾಸಿ ರಾಮನ್ ಎಂಬುವರ ಮಗನಾದ ಸ್ಟೀಫನ್ರಾಜ್(4) ತೊಟ್ಟಿಯಲ್ಲಿ ಮುಳುಗಿ ಮೃತಪಟ್ಟ ಬಾಲಕ. ಚಾಂಪಿಯನ್ರೀಫ್ನ ಕೆಎನ್ಜಿಎಸ್ ಬ್ಲಾಕ್ ವ್ಯಾಪ್ತಿಯ ಬಿಜಿಎಂಎಲ್ ಚಿನ್ನದ ಗಣಿ ಪ್ರದೇಶಗಳಲ್ಲಿ ಮೂರು ವರ್ಷಗಳಿಂದ ವಿಶೇಷ ಅನುದಾನ ಯೋಜನೆಯಡಿ ಶೌಚಾಲಯ ಹಾಗೂ ತೊಟ್ಟಿ ನಿರ್ಮಿಸಲಾಗುತ್ತಿದೆ. ಕಾಮಗಾರಿ ಇನ್ನೂ ಪೂರ್ಣಗೊಳ್ಳದೆ ತೊಟ್ಟಿ ಮುಚ್ಚಿರದ ಕಾರಣ ಕಳೆದ ಮೂರು ದಿನಗಳಿಂದ ಬಿದ್ದ ಮಳೆಯಿಂದ ತೊಟ್ಟಿಯಲ್ಲಿ ಸುಮಾರು 3 ಅಡಿ ನೀರು ತುಂಬಿಕೊಂಡಿತ್ತು ಎನ್ನಲಾಗಿದೆ.
ಬಾಲಕನು ಅಂಗನವಾಡಿ ಕೇಂದ್ರದಲ್ಲಿ ಓದುತ್ತಿದ್ದು, ತಂದೆ ರಾಮನ್ ಹಾಗೂ ತಾಯಿ ಚಂದನ ಇಬ್ಬರೂ ಕೂಲಿ ಕಾರ್ಮಿಕರಾಗಿದ್ದು ಎಂದಿನಂತೆ ಕೆಲಸಕ್ಕೆ ಹೋಗಿದ್ದಾಗ ಬಾಲಕ ಆಟವಾಡಲು ಹೊಗಿ ತೊಟ್ಟಿಯಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಚಾಂಪಿಯನ್ರೀಫ್ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ, ಪಿಎಸ್ಐ ಮಧುಸೂದನ್ ಸೇರಿದಂತೆ ಇತರರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

