ಬಸ್ ಸೌಕರ್ಯಕ್ಕಾಗಿ ಪ್ರತಿಭಟನೆ
ಕ.ಪ್ರ.ವಾರ್ತೆ ಚಿಂತಾಮಣಿ ಸೆ. 13
ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸಂಪರ್ಕ ಕಲ್ಪಿಸುವಲ್ಲಿ ವಿಫಲಗೊಂಡಿರುವ ಸಾರಿಗೆ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ನೂರಾರು ವಿದ್ಯಾರ್ಥಿಗಳು ಶುಕ್ರವಾರ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೈವಾರ ಕ್ರಾಸ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಚಿಂತಾಮಣಿ- ಬೆಂಗಳೂರು ಮಾರ್ಗವಾಗಿ ಬಂದು ಹೋಗುವ ಕೆಂಪು ಬಸ್ಸುಗಳು ಸಮಯಕ್ಕೆ ಸರಿಯಾಗಿ ಬಾರದೆ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಈ ಬಗ್ಗೆ ಕೆಎಸ್ಸಾರ್ಟಿಸಿ ಘಟಕದ ವ್ಯವಸ್ಥಾಪಕರಿಗೆ ದೂರು ನೀಡಿದರೂ ಪ್ರಯೋಜನವಿಲ್ಲದ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಶುಕ್ರವಾರ ಬೆಳಗ್ಗೆ ಏಕಾಏಕಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ಸುಮಾರು 1 ಗಂಟೆಗೂ ಹೆಚ್ಚು ಕಾಲ ವಿದ್ಯಾರ್ಥಿಗಳು ರಸ್ತೆಯಲ್ಲಿ ಕುಳಿತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ರಾಘವೇಂದ್ರ ಹಾಗೂ ಕೆಎಸ್ಸಾರ್ಟಿಸಿ ಘಟಕದ ವ್ಯವಸ್ಥಾಪಕ ವೆಂಕಟೇಶ್ ಭೇಟಿ ನೀಡಿ ಪ್ರತಿಭಟನೆ ಕೈಬಿಟ್ಟು ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ವಿದ್ಯಾರ್ಥಿಗಳು ಸಹಕರಿಸಬೇಕೆಂದು ಮನವಿ ಮಾಡಿದರು. ಅಲ್ಲದೆ, ನಿಗದಿತ ಸಮಯಕ್ಕೆ ಸರಿಯಾಗಿ ಬಸ್ ಸಂಪರ್ಕ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.
ಟ್ರಾಫಿಕ್ ಜಾಮ್: ಕೈವಾರ ಸುತ್ತಮುತ್ತಲಿನ ನೂರಾರು ವಿದ್ಯಾರ್ಥಿಗಳು ಏಕಾಏಕಿ ಚಿಂತಾಮಣಿ ಬೆಂಗಳೂರು ಮುಖ್ಯ ರಸ್ತೆಯ ಕೈವಾರ ಕ್ರಾಸ್ ಬಳಿ ಪ್ರತಿಭಟನೆ ನಡೆಸಿದ ಪರಿಣಾಮ ಸಂಚಾರಕ್ಕೆ ಅಡೆತಡೆ ಉಂಟಾಗಿತ್ತು. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

