ಕ್ರೀಡೆಯಿಂದ ದೈಹಿಕ, ಮಾನಸಿಕ ಸಾಮರ್ಥ್ಯ ವೃದ್ಧಿ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಸೆ. 13
ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ಕೆ.ವಿ. ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಆರ್. ವೆಂಕಟೇಶ್ ಅಭಿಪ್ರಾಯಪಟ್ಟರು.
ನಗರದ ಸರ್ ಎಂ.ವಿ. ಕ್ರೀಡಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ ಎಂ.ವಿ. ಪದವಿಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 2013-14ನೇ ಸಾಲಿನ ಚಿಕ್ಕಬಳ್ಳಾಪುರ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಕ್ರೀಡಾಪಟುಗಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ ಹಾಗೂ ಮನರಂಜನೆ ಪಡೆಯಬಹುದೆಂದರು.
ಕ್ರೀಡಾಪಟುಗಳು ಶಿಸ್ತು ಮತ್ತು ಸಂಯಮವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಹೆಚ್ಚಿನ ಪರಿಶ್ರಮದಿಂದ ಕ್ರೀಡಾ ಚಟುವಟಿಕೆ ಅಭ್ಯಾಸ ಮಾಡಿದ್ದೇ ಆದರೆ ಕ್ರೀಡೆಗಳಲ್ಲಿ ಉತ್ತಮ ಫಲಿತಾಂಶ ಪಡೆಯಬಹುದೆಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಸರ್ ಎಂ.ವಿ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ವಿ. ಬೈರೇಗೌಡ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ಪಠ್ಯ ಪ್ರವಚನಗಳು ಎಷ್ಟು ಮುಖ್ಯವೋ ಕ್ರೀಡೆಗಳು ಅಷ್ಟೇ ಮುಖ್ಯ. ಇಲ್ಲಿ ಹೆಚ್ಚು ದೈಹಿಕ ಶ್ರಮವನ್ನು ವ್ಯಯ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದೆಂದರು.
ಕ್ರೀಡೆಗಳಲ್ಲಿ ಸೋಲು- ಗೆಲವು ಮುಖ್ಯವಲ್ಲ. ಕ್ರೀಡಾ ಮನೋಭಾವನೆಯಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡೆಗಳ ಹಿರಿಮೆ ಎತ್ತಿಹಿಡಿಯಬೇಕೆಂದರು.
ಜಿಲ್ಲಾ ಪ್ರಭಾರಿ ದೈಹಿಕ ಶಿಕ್ಷಣ ಅಧೀಕ್ಷಕ ಪಿ.ಮುನಿಸ್ವಾಮಿ, ಸರ್ ಎಂ.ವಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್, ಕೆ.ವಿ. ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಜಿ. ಅಶ್ವತ್ಥಪ್ಪ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಮಂಜುನಾಥ್ ಉಪಸ್ಥಿತರಿದ್ದರು. ಸರ್ ಎಂ.ವಿ. ಪ್ರೌಢಶಾಲೆಯ ದೈಹಿಕ ಶಿಕ್ಷಕ ಲಿಂಗೇಶ್ ಸ್ವಾಗತಿಸಿದರೆ, ಗಿಡ್ನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಮಾರುತಿ ವಂದಿಸಿ, ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

