ಉಚಿತ ನೋಟ್ ಪುಸ್ತಕ ವಿತರಣೆ
ಕೆಜಿಎಫ್: ಕರ್ನಾಟಕ ರಕ್ಷಣಾ ವೇದಿಕೆ ಸುಮಾರು 20 ವರ್ಷಗಳಿಂದ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಾಗೂ ಕನ್ನಡಪರ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿದ್ದು ಸಂಘವು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಹೊಂದಲು ಕಾರ್ಯಕರ್ತರು ಶ್ರಮ ವಹಿಸಿ ಕೆಲಸ ಮಾಡಬೇಕಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ ತಿಳಿಸಿದರು. ಕನ್ನಡ ಸಂಘದ ಆವರಣದಲ್ಲಿ ಆಯೋಜಿಸಲಾಗಿದ್ದ ಬಡ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅದೇ ರೀತಿ ಕರವೇ ಬಡ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ, ತಟ್ಟೆ ಲೋಟ, ಸೇರಿದಂತೆ ಇತರೆ ಸಾಮಗ್ರಿಗಳನ್ನು ನೀಡುವ ಕಾರ್ಯಕ್ಕೆ ಚಾಲನೆ ನೀಡಿದೆ ಎಂದು ತಿಳಿಸಿದರು. ರಾಬರ್ಟ್ಸನ್ಪೇಟೆ ಪೊಲೀಸ್ ಠಾಣಾ ಪಿಎಸ್ಐ ರಂಗಶಾಮಯ್ಯ ಮಾತನಾಡಿ ಕರವೇ ವತಿಯಿಂದ ಬಡ ಶಾಲಾ ಮಕ್ಕಳನ್ನು ಗುರುತಿಸಿ ಇಂತಹ ಉತ್ತಮ ಕೆಲಸವನ್ನು ಮಾಡುತ್ತಿರುವುದು ಸ್ವಾಗತಾರ್ಹವಾಗಿದ್ದು ಬಡ ಶಾಲಾ ಮಕ್ಕಳು ನೋಟ್ ಪುಸ್ತಕ ಹಾಗೂ ಇತರೆ ವಸ್ತುಗಳನ್ನು ಸರಿಯಾದ ರೀತಿಯಲ್ಲಿ ಅದನ್ನು ಉಪಯೋಗಿಸಬೇಕು ಎಂದು ತಿಳಿಸಿದರು. ಈ ವೇಳೆ ಕರವೇ ತಾಲೂಕು ಅಧ್ಯಕ್ಷ ನಂಜುಂಡಪ್ಪ, ನಗರ ಘಟಕದ ಅಧ್ಯಕ್ಷ ಸುಬ್ರಮಣಿ, ತಾಲೂಕು ಮಹಿಳಾ ಅಧ್ಯಕ್ಷೆ ಕೆ. ಪಲ್ಲವಿ, ಜಿಲ್ಲಾ ಗೌರವಾಧ್ಯಕ್ಷ ಎಸ್.ಮದಿರಪ್ಪ, ತಾಲೂಕು ಕಾರ್ಯದರ್ಶಿ ತುಕಾರಾಮ್, ಜಿಲ್ಲಾ ಉಪಾಧ್ಯಕ್ಷ ವಿ.ಎಸ್. ಪ್ರಕಾಶ್, ಮಾಲೂರು ಘಟಕದ ಮಹಿಳಾ ಅಧ್ಯಕ್ಷೆ ಲತಾ, ನಾರಾಯಣಸ್ವಾಮಿ, ತಿಮ್ಮರಾಜು, ವೆಂಕಟೇಶಪ್ಪ, ಬಾಬು, ನಾಗರಾಜ್, ಪ್ರಭಾಕರ್, ಮಸ್ಕಂ ಸರ್ಕಾರಿ ಶಾಲಾ ಶಿಕ್ಷಕಿ ಎ. ಸುಮತಿ ಸೇರಿದಂತೆ ಇತರೆ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

