ಕೋಲಾರ

ದೈಹಿಕ ಶಿಕ್ಷಕ ಕೃಷ್ಣಪ್ಪಗೆ ಸನ್ಮಾನ

Published On :

ಚಿಂತಾಮಣಿ: ಕ್ರೀಡಾಪಟುಗಳನ್ನು ತಯಾರಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಲು ತರಬೇತಿ ನೀಡುತ್ತಾ 2 ದಶಕಗಳಿಗಿಂತ ಹೆಚ್ಚು ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದೈಹಿಕ ಶಿಕ್ಷಕ ಬಿ.ಎಂ. ಕೃಷ್ಣಪ್ಪ ಅತ್ಯುತ್ತಮ ಸೇವೆಯೆಂದು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಹೇಳಿದರು.
ಪಟ್ಟಣದಲ್ಲಿನ ಎಸ್.ಎಫ್.ಎಸ್ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಹಾಗೂ ಜಿಲ್ಲಾ ಮಟ್ಟದ ಥ್ರೋಬಾಲ್ ಕ್ರೀಡಾಕೂಟವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಿಶೋರ್ ವಿದ್ಯಾಭವನ ದೈಹಿಕ ಶಿಕ್ಷಣ ಶಿಕ್ಷಕ ಬಿ.ಎಂ. ಕೃಷ್ಣ ಅವರ 27 ವರ್ಷಗಳ ಸುದೀರ್ಘ ಸೇವೆಯಲ್ಲಿ ನೂರಾರು ಕ್ರೀಡಾಪಟುಗಳನ್ನು ತಯಾರಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸುವಂತೆ ಮಾಡಿದಂತಹ ಸೇವೆಯನ್ನು ಪರಿಗಣಿಸಿ ಶಾಸಕರು ಸನ್ಮಾನಿಸಿ ನಂತರ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರದ ಶಿಕ್ಷಣಾಧಿಕಾರಿ ಕೆ.ಜಿ. ರಂಗಯ್ಯ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಜನಾರ್ದನ ರೆಡ್ಡಿ ಮಾತನಾಡಿದರು.   ನಗರಸಭಾ ಸದಸ್ಯರಾದ ಅಬ್ಬುಗುಂಡು ಶ್ರೀನಿವಾಸರೆಡ್ಡಿ, ಡಿ. ಸಾದಪ್ಪ, ದೈಹಿಕ ಶಿಕ್ಷಣ ಸಂಯೋಜಕರಾದ ನಾಗರಾಜ್, ಶಿಕ್ಷಕರಾದ ಬೈರಾರೆಡ್ಡಿ, ಮಂಜುನಾಥೆ ಸೇರಿದಂತೆ ಶಾಲೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕರು ಮತ್ತು ಪೋಷಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.