ಕೋಲಾರ

'ಮೋದಿಯಿಂದ ದೇಶಕ್ಕೆ ಸಮರ್ಥ ನಾಯಕತ್ವ'

Published On :

ಗೌರಿಬಿದನೂರು: ನರೇಂದ್ರ ಮೋದಿ ಅವರು ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದು ದೇಶಕ್ಕೆ ಸಮರ್ಥ ನಾಯಕತ್ವ ಸಿಗಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಂ. ರವಿನಾರಾಯಣರೆಡ್ಡಿ ತಿಳಿಸಿದರು.
ಮೋದಿ ಅವರನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದಕ್ಕೆ ಪಟ್ಟಣದ ಗಾಂಧಿವೃತ್ತದಲ್ಲಿ ತಾಲೂಕು ಬಿಜೆಪಿ ಘಟಕದಿಂದ ಹಮ್ಮಿಕೊಂಡಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಮೋದಿ ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ದೇಶಕ್ಕೆ ಅವರ ಆಡಳಿತದ ಅನಿವಾರ್ಯತೆಯಿದೆ.
 ಅವರ ಆಯ್ಕೆಯಿಂದ ಪಕ್ಷದ ಕಾರ್ಯಕರ್ತರಲ್ಲಿ ಹಾಗೂ ಯುವಜನತೆಯಲ್ಲಿ ಸಂಚಲನ ಮೂಡಿಸಿದೆ. ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆ ಹೆಚ್ಚಲಿದೆ ಎಂದರು.
ವಿಜಯೋತ್ಸವದಲ್ಲಿ ಕೋಮುಲ್ ಮಾಜಿ ಅಧ್ಯಕ್ಷ ಎಸ್. ರಮೇಶ್, ಜಿಪಂ ಮಾಜಿ ಅಧ್ಯಕ್ಷ ಸಿ.ಆರ್. ನರಸಿಂಹಮೂರ್ತಿ, ಪುರಸಭಾ ಸದಸ್ಯ ಮಾರ್ಕೆಟ್ ಮೋಹನ್, ಜೆ.ವಿ. ಹನುಮೇಗೌಡ, ನಾಮಗೊಂಡ್ಲು ಬೇಕರಿ ಜಯರಾಮರೆಡ್ಡಿ, ರಮೇಶ್‌ರಾವ್, ಕೆ.ವಿ.ಕೃಷ್ಣಮೂರ್ತಿ, ಡಿಪಾಳ್ಯ ಶಶಿಧರ್, ಸೊಸೈಟಿ ರಾಮಾಂಜಿ, ಜಯಣ್ಣ, ಪ್ರಧಾನ ಕಾರ್ಯದರ್ಶಿ ಮುರಳಿಧರ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.