ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಆಗ್ರಹ
ಕ. ಪ್ರ. ವಾರ್ತೆ, ಚಿಂತಾಮಣಿ, ಸೆ.15
ಅತಿಥಿ ಉಪನ್ಯಾಸಕರ ಸಂಬಳವನ್ನು 15 ಸಾವಿರದಿಂದ 20 ಸಾವಿರದವರೆಗೂ ಏರಿಸುವಂತೆ ವಿಧಾನಪರಿಷತ್ ಸದಸ್ಯ ಹಾಗೂ ಮುಖ್ಯ ಸಚೇತಕರು ಆಗಿರುವ ಡಾ.ಶಿವಯೋಗಿಸ್ವಾವು ಸರ್ಕಾರವನ್ನು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಪನ್ಯಾಸಕರ ಭದ್ರತೆ ಸೇರಿದಂತೆ ಇನ್ನೂ ಹಲವಾರು ಬೇಡಿಕೆಗಳು ಈಡೇರಿಸಲು ಸಂಬಂಧಪಟ್ಟ ಅಧಿಕಾರಿಗಳ ಹಾಗೂ ಸರ್ಕಾರದ ಜೊತೆ ಮಾತನಾಡಿ ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆಂದು ಹೇಳಿದರು.
ಸ್ವಾಗತ: ಬಿಜೆಪಿ ತತ್ವ- ಸಿದ್ಧಾಂತಗಳು ಮೈಗೂಡಿಸಿಕೊಂಡಿರುವ ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿರುವುದು ಸ್ವಾಗತಾರ್ಹ. ಮೋದಿಯೇ ಪ್ರಧಾನಿ ಸ್ಥಾನಕ್ಕೆ ಅರ್ಹರು ಎಂದರು.
ಶಾಲೆಗಳಿಗೆ ಭೇಟಿ: ಇದಕ್ಕೂ ಮುನ್ನ ತಾಲೂಕಿನ ದೊಡ್ಡಬೊಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆ ಹಾಗೂ ಪಟ್ಟಣದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಮತ್ತು ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜು, ವೆಂಕಟಾದ್ರಿ ಕಾಲೇಜುಗಳಿಗೆ ಡಾ. ಶಿವಯೋಗಿಸ್ವಾವು ಭೇಟಿ ನೀಡಿ ಶಾಲಾ ಕಾಲೇಜು ಮೂಲ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಜೊತೆ ಚರ್ಚಿಸಿದರು.
ಬಿಜೆಪಿ ರಾಜ್ಯಕಾರ್ಯಕಾರಿಣಿ ಸಮಿತಿ ಸದಸ್ಯ ಸತ್ಯನಾರಾಯಣ ಮಹೇಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಜನಾರ್ದನರೆಡ್ಡಿ, ರಾಜ್ಯ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ವೆಂಕಟೇಶ್ ಶೌರ್ಯ, ತಾಲೂಕು ಅಧ್ಯಕ್ಷ ನಾ.ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್, ಮುಖಂಡರಾದ ಬಿ.ಎನ್. ಶ್ರೀನಿವಾಸಪ್ಪ, ಮಾಡಿಕೆರೆ ಅರುಣಕುಮಾರ್, ಶಿವಣ್ಣ, ಕುರುಟಹಳ್ಳಿ ಮಂಜು, ವೆಂಕಟರವಣ, ಮುನಿಯಪ್ಪ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

