ದೇಗುಲ ಹುಂಡಿ ಒಡೆದು ಲಕ್ಷಾಂತರ ರು. ಕಳವು
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ ಸೆ.15
ಪುರಾಣ ಪ್ರಸಿದ್ಧ ರಂಗನಾಥಸ್ವಾಮಿ ದೇವಾಲಯದ ಹುಂಡಿಯನ್ನು ಒಡೆದು ಅದರಲ್ಲಿದ್ದ ಲಕ್ಷಾಂತರ ರು.ಗಳನ್ನು ಕಳ್ಳತನ ಮಾಡಿಕೊಂಡು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ- ಗೌರಿಬಿದನೂರು ಮಾರ್ಗದಲ್ಲಿರುವ ತಾಲೂಕಿನ ರಂಗಸ್ಥಳ ದೇವಾಲಯವು ಮುಜರಾಯಿ ಇಲಾಖೆಗೆ ಸೇರಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಇಂತಹ ದೇವಾಲಯದ ಚಾವಣಿ ಮೇಲಿದ್ದ ಗವಾಕ್ಷಿಯನ್ನು ಕೆಡವಿ ಕಳ್ಳರು ದೇವಸ್ಥಾನದೊಳಕ್ಕೆ ನುಗ್ಗಿದ್ದಾರೆ. ನಂತರ ಅಲ್ಲಿದ್ದ ಹುಂಡಿಯನ್ನು ಒಡೆದು ಲಕ್ಷಾಂತರ ರು. ಹಣ ದೋಚಿದ್ದು, ಇಲ್ಲಿಯವರೆಗೂ ಕಳ್ಳತನವಾದ ಹಣದ ಮೌಲ್ಯ ನಿಖರವಾಗಿ ತಿಳಿದು ಬಂದಿಲ್ಲ. ಭಾನುವಾರ ಬೆಳಗ್ಗೆ ಎಂದಿನಂತೆ ದೇವಸ್ಥಾನದ ಅರ್ಚಕ ಶೇಷಭಟ್ಟಾಚಾರ್ಯ ಅವರು ದೇವರ ಪೂಜೆಗೆಂದು ಬಾಗಿಲನ್ನು ತೆಗೆದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ತಕ್ಷಣ ಸ್ಥಳೀಯ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ದೇವಯ್ಯ ಮತ್ತು ಗ್ರಾಮಾಂತರ ಠಾಣೆಯ ಪಿಎಸ್ಐ ನಯಾಜ್ ಬೇಗ್ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಶ್ವಾನದಳ ಕರೆಸಲಾಗಿತ್ತು. ಈ ಹಿಂದೆ ಸಹ ಒಮ್ಮೆ ದೇವಾಲಯದಲ್ಲಿ ಕಳ್ಳತನವಾಗಿದ್ದರೂ ಎಚ್ಚೆತ್ತುಕೊಳ್ಳದೆ ಸೂಕ್ತ ಭದ್ರತೆ ಕೈಗೊಳ್ಳಲಾಗಿಲ್ಲ. ಇದನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಕಳೆದ ಕೆಲ ದಿನಗಳಿಂದ ಹೊಂಚು ಹಾಕಿ ಶನಿವಾರ ಮುಂಜಾವಿನಲ್ಲಿ ಕೈಚಳಕ ತೋರಿಸಿ ಹಣ ದೋಚಿದ್ದಾರೆ. ಇತ್ತೀಚೆಗೆ ದೇವಾಲಯಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಹೆಚ್ಚಿನ ಹಣ ಹುಂಡಿಯಲ್ಲಿ ಸಂಗ್ರಹವಾಗಿತ್ತು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

