ಪ್ರತಿಯೊಬ್ಬರಿಗೂ ಬಿಪಿಎಲ್ ಕಾರ್ಡ್ ನೀಡಿ
ಕ.ಪ್ರ. ವಾರ್ತೆ, ಬಾಗೇಪಲ್ಲಿ, ಸೆ.15
ದೇಶದ ಪ್ರತಿಯೊಬ್ಬರಿಗೂ ಬಿಪಿಎಲ್ ಕಾರ್ಡ್ಗಳನ್ನು ನೀಡುವಂತೆ ರಾಜ್ಯ ಜನವಾದಿ ಮಹಿಳಾ ಸಂಘಟನೆಯ ಉಪಾಧ್ಯಕ್ಷೆ ಕೆ.ಎಸ್. ವಿಮಲ ಸರ್ಕಾರವನ್ನು ಒತ್ತಾಯಿಸಿದರು.
ಪಟ್ಟಣದ ಕನ್ನಿಕಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಜನವಾದಿ ಮಹಿಳಾ ಸಂಘಟನೆ ಏರ್ಪಡಿಸಿದ್ದ ತಾಲೂಕು ಮಟ್ಟದ 2ನೇ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಲಕ್ಷಾಂತರ ಟನ್ಗಳಷ್ಟು ಅಕ್ಕಿ, ರಾಗಿ ಮತ್ತು ಜೋಳ ಸೇರಿದಂತೆ ಅನೇಕ ಆಹಾರ ಪದಾರ್ಥಗಳು ಆಹಾರ ಇಲಾಖೆಗಳ ಗೋದಾಮುಗಳಲ್ಲಿ ಹುಳುಗಳು ತಿನ್ನುತ್ತಿವೆ. ಈ ಆಹಾರವನ್ನು ಪುಕ್ಕಟೆಯಾಗಿ ದೇಶದ ಜನರಿಗೆ ಸರ್ಕಾರ ವಿತರಣೆ ಮಾಡಬಹುದು. ಆದರೆ, ಸರ್ಕಾರ ಎಪಿಎಲ್, ಬಿಪಿಎಲ್, ಅಂತ್ಯೋದಯ ಎಂಬ ಹೆಸರಿನಲ್ಲಿ ಬಡವರನ್ನು ವಿಂಗಡಿಸದೆ ದುಡಿಯುವ ಪ್ರತಿಯೊಬ್ಬರಿಗೂ ರೇಷನ್ ನೀಡುವಂತೆ ಒತ್ತಾಯಿಸಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಒಂದು ರುಪಾಯಿಗೆ ಒಂದು ಕೆಜಿ ಅಕ್ಕಿಯಂತೆ 30 ಕೆಜಿ ಅಕ್ಕಿಯನ್ನು ಬಡವರಿಗೆ ನೀಡುತ್ತಿದೆಯಾದರೂ ಕೆಲವು ದಲ್ಲಾಳಿಗಳು ಬಡವರಿಗೆ 300 ನೀಡಿ ಖರೀದಿಸಿ ಹೆಚ್ಚಿನ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡುವ ಮೂಲಕ ಬಡವರ ಬಾಯಿಗೆ ಮಣ್ಣು ಹಾಕುವ ಕೆಲಸವನ್ನು ಮಾಡುತ್ತಿದ್ದಾರೆ. ಅಂತಹ ದಲ್ಲಾಳಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುಬೇಕಾಗಿದೆ ಎಂದರು.
ಒಂದು ರುಪಾಯಿಗೆ ಕೆಜಿ ಅಕ್ಕಿ ನೀಡಬೇಕೆಂದು ಜನವಾದಿ ಮಹಿಳಾ ಸಂಘಟನೆ ಕಳೆದ 20 ವರ್ಷಗಳಿಂದ ಸತತವಾಗಿ ಹೋರಾಟ ಮಾಡಿಕೊಂಡು ಬಂದಿರು ಫಲವೇ ಇಂದು ಸಿದ್ದರಾಮಯ್ಯ ಅವರ ಸರ್ಕಾರ ನೀಡುತ್ತಿರುವ ಈ ಯೋಜನೆ. ಈ ಯೋಜನೆಯಲ್ಲಿ ಕೇವಲ ಅಕ್ಕಿಯನ್ನು ಮಾತ್ರ ಕಡಿಮೆ ಬೆಲೆ ನೀಡಿದ ಸರ್ಕಾರ ಉಳಿದ ದಿನನಿತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಇದರಿಂದ ಜನರಿಗೆ ಆಗುವ ಪ್ರಯೋಜನವಾದರೂ ಏನು ದೇಶದಲ್ಲಿರುವ ಅಸಂಖ್ಯಾತ ದುಡಿದು, ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬಡವರ ಬಗ್ಗೆ ಯೋಚನೆ ಮಾಡದೆ ಕೇವಲ 30 ಕೆಜಿ ಅಕ್ಕಿಗೆ 30 ಗಳಿಗೆ ನೀಡಿದ ಮಾತ್ರಕ್ಕೆ ಬಡತನ ನಿರ್ಮೂಲನೆ ಮಾಡಲು ಸಾಧ್ಯವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ನಮ್ಮ ದೇಶದಲ್ಲಿ ಇತ್ತೀಚೆಗೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆದರೆ, ಆತ್ಯಾರವೆಸಗಿರುವವರ ಮೇಲೆ ಕ್ರಮ ಕೈಗೊಳ್ಳಲು ಸರ್ಕಾರ ವಿಫಲವಾಗಿವೆ ಎಂದು ಆರೋಪಿಸಿದ ಅವರು, ದೆಹಲಿ, ಮುಂಬೈ, ಬೆಂಗಳೂರುನಂತಹ ಮಹಾನಗರಗಳಲ್ಲಿ ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರಗಳ ಸುದ್ದಿ ದಿನ ಬೆಳಗಾದರೆ ಹೊರ ಬರುತ್ತೆ. ಅದೇ ರೀತಿಯಲ್ಲಿ ದೇಶದ ಗ್ರಾಮೀಣ ಸೇರಿದಂತೆ ಪಟ್ಟಣ ಪ್ರದೇಶಗಳಲ್ಲಿ ನಡೆಯುತ್ತಿರುವ ಅತ್ಯಾಚಾರಗಳು ಬೆಳಕಿಗೆ ಬರುತ್ತಿಲ್ಲವಾದ್ದರಿಂದ ಇನ್ನಷ್ಟು ದೌರ್ಜನ್ಯಗಳು ಅತ್ಯಾಚಾರ ಎಸಗುವವರು ಲೀಲಾಜಾಲವಾಗಿ ಈ ಪ್ರಕರಣಗಳಿಂದ ಹಾಗೂ ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.
ಜಿಪಂ ಮಾಜಿ ಉಪಾಧ್ಯಕ್ಷೆ ಬಿ.ಸಾವಿತ್ರಮ್ಮ, ಜಿಪಂ ಸದಸ್ಯೆ ನಾರಾಯಣಮ್ಮ, ಜಹೀನಾ ಬೀ, ಪವಿತ್ರಾ, ತಾಪಂ ಮಾಜಿ ಅಧ್ಯಕ್ಷೆ ಶೋಭಾರಾಣಿ ಮಂಜುನಾಥರೆಡ್ಡಿ, ಶೋಭಾ, ಬಿ.ಬಿ. ಜ್ಯೋತಿ, ತಾಪಂ ಅಧ್ಯಕ್ಷೆ ಮುನಿರತ್ನಮ್ಮ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

