ಸುದ್ದಿ ಸಂಕ್ಷೇಪ
ಇಂದು ಗುರುಭವನ ಉದ್ಘಾಟನೆ
ಮುಳಬಾಗಲು: 1999ರಲ್ಲಿ ಭೂಮಿಪೂಜೆ ಪೂರ್ಣವಾಗಿ ಅರ್ಥಿಕ ಬಿಕ್ಕಟ್ಟಿನಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟಣದ ಗುರುಭವನ ಕಾಮಗಾರಿ ಪೂರ್ಣಗೊಂಡಿದ್ದು, ಸೆ. 16ರಂದು ಉದ್ಫಾಟನೆಯಾಗಲಿದೆ. ಪಟ್ಟಣದ ನೇತಾಜಿ ಕ್ರೀಡಾಂಗಣದಲ್ಲಿ 55 ಲಕ್ಷ ವೆಚ್ಚದ ಈ ಗುರುಭವನ ಸುಸಜ್ಜಿತವಾಗಿ ನಿರ್ಮಾಣವಾಗಿದೆ. ವಿಧಾನಸಭೆ ಅಧ್ಯಕ್ಷರಾಗಿದ್ದ ಎಂ.ವಿ. ವೆಂಕಟಪ್ಪ 2001ರಲ್ಲಿ ಭೂಮಿಪೂಜೆ ಮಾಡಿದ್ದರು. ಆದರೆ, ಕಾಮಗಾರಿಗಳು ಆರಂಭವಾಗಲಿಲ್ಲ. ತಾಲೂಕಿನಲ್ಲಿ ಎರಡು ಸಾವಿರಕ್ಕೂ ಹೆಚ್ಚಿನ ಶಿಕ್ಷಕರಿದ್ದಾರೆ. ಗುರುಭವನ ನಿರ್ಮಾಣದಿಂದ ಶಿಕ್ಷಕರ ಹಲವಾರು ವರ್ಷಗಳ ಕನಸು ನನಸಾಗಲಿದೆ ಎಂದು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ವಿ ಜಗನ್ನಾಥ್ ತಿಳಿಸಿದರು.
ಇಂದು ಜನವಾದಿ ಜಿಲ್ಲಾ ಸಮ್ಮೇಳನ
ಕೋಲಾರ: ನಗರದ ಲಯನ್ಸ್ ಕ್ಲಬ್ನಲ್ಲಿ ಜಿಲ್ಲಾಮಟ್ಟದ ಜನವಾದಿ ಮಹಿಳಾ ಸಂಘಟನೆಯ ಸಮ್ಮೇಳನವನ್ನು ಸೋಮವಾರ ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ವಿಮಲ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ಹಾಗೂ ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆಂದು ಜಿಲ್ಲಾ ಕಾರ್ಯದರ್ಶಿ ವಿ.ಗೀತಾ ತಿಳಿಸಿದ್ದಾರೆ.
ಜೀವನದಲ್ಲಿ ಜಿಗುಪ್ಸೆಯಿಂದ ವ್ಯಕ್ತಿ ಆತ್ಮಹತ್ಯೆ
ಕೋಲಾರ: ನಗರದ ಪಿಸಿ ಬಡಾವಣೆಯ ನಿವಾಸಿ ರವೀಂದ್ರ(42) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡತಿ ಮತ್ತು ರವೀಂದ್ರ ನಡುವೆ ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಇಲ್ಲದ ಕಾರಣ ಹೆಂಡತಿ ವಿವಾಹ ವಿಚ್ಚೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅರ್ಜಿದಾರರ ಮನವಿ ಪುರಸ್ಕರಿಸಿ ವಿವಾಹ ವಿಚ್ಚೇದನಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ರವೀಂದ್ರ ಬೇಸತ್ತು ಭಾನುವಾರ ಅಂತರಗಂಗೆ ಬೆಟ್ಟದ ತೊಪ್ಪಲಿನ ಖಾದ್ರಿಪುರದ ಸಮೀಪ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮೃತರಿಗೆ 12 ವರ್ಷ ವಯಸ್ಸಿನ ಒಂದು ಗಂಡು ಹಾಗೂ 6 ವರ್ಷದ ಒಂದು ಹೆಣ್ಣು ಮಗುವಿದೆ. ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲು ಆಗಿದ್ದು ತನಿಖೆ ಮುಂದುವರಿದಿದೆ.
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು
ಚಿಂತಾಮಣಿ: ಕುಟುಂಬ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗೌಡನಹಳ್ಳಿ ಗ್ರಾಮದ ತಿಪ್ಪಣ್ಣ(35) ಎಂಬಾತನು ಕುಟುಂಬ ಕಲಹದಿಂದ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮೈಮೇಲೆ ಸೀಮೆಎಣ್ಣೆಯನ್ನು ಶನಿವಾರ ಮಧ್ಯಾಹ್ನ ಹಾಕಿಕೊಂಡ ಪರಿಣಾಮ ಸುಟ್ಟ ಗಾಯಗಳಿಂದ ಸಾವು ಬದುಕಿನ ಜೊತೆ ಹೋರಾಟ ನಡೆಸುತ್ತಿದ.್ದ ಈತನನ್ನು ಕೂಡಲೇ ಚಿಕಿತ್ಸೆಗೆಗಾಗಿ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾನೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿದ್ಯಾರ್ಥಿವೇತನ ವಿತರಣೆ
ಮುಳಬಾಗಲು: ಗಾಣಿಗ ಜನಾಂಗದ ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬರಲು ತಂದೆ- ತಾಯಿಗಳು ಪ್ರೋತ್ಸಾಹ ನೀಡಲು ಮುಂದಾಗಬೇಕೆಂದು ಶಾಸಕ ಕೊತ್ತೂರು ಮಂಜುನಾಥ್ ಮನವಿ ಮಾಡಿದರು.
ಪಟ್ಟಣದ ಗಾಣಿಗರ ಸಮುದಾಯ ಭವನದಲ್ಲಿ ಭಾನುವಾರ ಜ್ಯೋತಿನಗರ ಪಚ್ಚಗಿರಿ ಹನುಮಪ್ಪಶೆಟ್ಟೆ ಅವರ 62ನೇ ಮತ್ತು ಅಚ್ಚಮ್ಮನವರ 5ನೇ ವಾರ್ಷಿಕೋತ್ಸವ ಹಾಗೂ ಗಾಣಿಗ ಜನಾಂಗದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿ, ಗಾಣಿಗ ಜನಾಂಗದವರು ಅತಿ ಹಿಂದುಳಿಗ ಜನಾಂಗವಾಗಿದ್ದು, ಜನಾಂಗದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು. 200 ವಿದ್ಯಾರ್ಥಿಗಳಿಗೆ ಜ್ಯೋತಿನಗರ ಪಚ್ಚಗಿರಿ ಹನುಮಪ್ಪಶೆಟ್ಟಿ ಮತ್ತು ಅಚ್ಚಮ್ಮ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ನೀಡಲಾಯಿತು. ಭಾವನ ಚಾರಿಟಬಲ್ ಟ್ರಸ್ಟ್ ವತಿಯಿಂದ ನೋಟ್ಪುಸ್ತಕ ವಿತರಿಸಲಾಯಿತು. ಅವಣಿ ನಾಗೇಂದ್ರ, ತಾಯಲೂರು ಗೋಪಿ, ಜೆ.ಎಸ್. ಮಂಜುನಾಥ್, ಲಕ್ಷ್ಮಿಪತಿ, ಎಂ.ಜೆ. ಮಲ್ಲಿಕಾರ್ಜುನ್, ಪುರಸಭೆ ಸದಸ್ಯ ಮಂಜುನಾಥ್, ತಾಯಲೂರು ರಮೇಶ್ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

