ಕೋಲಾರ

ಪರಿಹಾರಧನ ವಿತರಿಸಲು ಆಗ್ರಹ

Published On :

ಕ.ಪ್ರ.ವಾರ್ತೆ  ಮಾಲೂರು  ಸೆ. 16
ತಾಲೂಕಿನ ಮಾಸ್ತಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟ ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಎಂ.ವಿ. ಗೋವಿಂದರಾಜು ಅವರ ಕುಂಟುಂಬಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ಅಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ತಾಲೂಕು ಅಧ್ಯಕ್ಷ ಮಾರ್ಕಂಡಯ್ಯ,  ಬೆಳಗ್ಗಿನ ಜಾವ ಮಾಸ್ತಿಯಲ್ಲಿ ಮನೆ- ಮನೆಗೆ ಪೇಪರ್ ಹಾಕುವ ಗೋವಿಂದ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಸರ್ಕಾರಿ ಹಾಗೂ ಖಾಸಗಿ ಬಸ್‌ಗಳು ಪೈಪೋಟಿ ನಡೆಸುವ ಭರದಲ್ಲಿ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮೃತ ವಿದ್ಯಾರ್ಥಿ ಕುಟುಂಬಕ್ಕೆ ಸೂಕ್ತ ಪರಿಹಾರಧನ ವಿತರಿಸಬೇಕು ಎಂದು ಆಗ್ರಹಿಸಿದರು.
ಗೋಪಿ, ಅರುಣ್‌ಕುಮಾರ್, ಮುನಿರಾಜು, ಶರತ್‌ಕುಮಾರ್, ಶಿವು, ಲೋಕೇಶ್, ಸುಬ್ರಮಣಿ, ರಾಜೇಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.