ಕೋಲಾರ

ಫಲಿತಾಂಶ ಪ್ರಕಟಿಸಲು ಆಗ್ರಹಿಸಿ ಪ್ರತಿಭಟನೆ

Published On :

ಕ.ಪ್ರ. ವಾರ್ತೆ, ಕೆಜಿಎಫ್, ಸೆ.16
ಬೆಂಗಳೂರು ವಿವಿ ಹಲವು ಪದವಿ ತರಗತಿಗಳ ಫಲಿತಾಂಶ ಪ್ರಕಟಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕೆಜಿಎಫ್‌ನ ನಾಡ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪರೀಕ್ಷೆ ಮುಗಿದು ಕಾಲೇಜುಗಳು ಪ್ರಾರಂಭವಾಗಿ 3 ತಿಂಗಳು ಕಳೆಯುತ್ತಿದ್ದರೂ ಬಿಬಿಎಂ 2ನೇ ಸೆಮಿಸ್ಟರ್ ಫಲಿತಾಂಶ ಹೊರತುಪಡಿಸಿ ಬಿಕಾಂ, ಬಿಎ, ಬಿಎಸ್ಸಿ 2ನೇ ಸೆಮಿಸ್ಟರ್ ಮತ್ತು 4ನೇ ಸೆಮಿಸ್ಟರ್ ಫಲಿತಾಂಶವನ್ನು ಬೆಂಗಳೂರು ವಿವಿ ಪ್ರಕಟಿಸದೆ ವಿಳಂಬ ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಎಬಿವಿಪಿ ಕಾರ್ಯಕರ್ತರು ಆರೋಪಿಸಿದರು.
ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸದ ದೃಷ್ಟಿಯಿಂದ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು ಎಂದು ಒತ್ತಾಯಿಸಿ ಜಿಲ್ಲಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವುದಾಗಿ ಎಬಿವಿಪಿ ಜಿಲ್ಲಾ ಸಂಚಾಲಕ ಸುನಿಲ್‌ಕುಮಾರ್ ತಿಳಿಸಿದರು. ಮನವಿ ಪತ್ರವನ್ನು ನಾಡ ಕಚೇರಿ ಉಪ ತಹಸೀಲ್ದಾರ್ ಇನಾಯತ್ತುಲ್ಲಾಖಾನ್ ಅವರಿಗೆ ಸಲ್ಲಿಸಿದರು.
ಸುಬ್ರಮಣಿ, ದಿಲೀಪ್, ಅಭಿಷೇಕ್, ನವೀನ್, ಗಂಗಾಧರ್, ಹರೀಶ್, ಅನಿಲ್, ಮಹೇಶ್, ಹನುಮಂತು, ಗಂಗಾಧರ್, ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.