ಗುರುಭವನ ಉದ್ಘಾಟನೆ
ಕ.ಪ್ರ. ವಾರ್ತೆ, ಮುಳಬಾಗಲು, ಸೆ.16
ಭಾರತೀಯ ಸಂಸ್ಕೃತಿಯಲ್ಲಿ ಗುರುಗಳ ಸ್ಥಾನ ಅತಿ ಮಹತ್ತರವಾದುದೆಂದು ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಗುರುಭವನ ಉದ್ಫಾಟಿಸಿ ಮಾತನಾಡಿದರು. ಗುರುಭವನದ ಕಾಪೌಂಡ್ ನಿರ್ಮಾಣಕ್ಕೆ ತಮ್ಮ ನಿಧಿಯಿಂದ 5 ಲಕ್ಷ ನೀಡುವುದಾಗಿ ತಿಳಿಸಿದರು.
ನಂಗಲಿಯಿಂದ ಆಂಧ್ರಕ್ಕೆ ಹೊಂದಿಕೊಂಡಿರುವ ಹೆದ್ದಾರಿಯನ್ನು ನಾಲ್ಕು ಪಥದಲ್ಲಿ ಚಿತ್ತೂರು ನಗರದವರೆಗೂ ವಿಸ್ತರಿಸಲಾಗುವುದು, ನಂತರ ವಿಸ್ತರಣೆ ತಿರುಪತಿವರೆಗೂ ಮುಂದುವರಿಸಲಾಗುವುದು ಎಂದರು. ರೇಲ್ವೆ ಕೋಚ್ ಫ್ಯಾಕ್ಟರಿಯನ್ನು ಶ್ರೀನಿವಾಸಪುರ ಪಟ್ಟಣದ ಬಳಿ ಪ್ರಾರಂಭಿಸಲಾಗುವುದು ಎಂದರು. ಶಾಸಕ ಕೊತ್ತೂರು ಮಂಜುನಾಥ್ ಅಧ್ಯಕ್ಷತೆ ವಹಿಸಿ ತಾಲೂಕನ್ನು ಶೈಕ್ಷಣಿಕವಾಗಿ ರಾಜ್ಯದಲ್ಲಿಯೇ ಒಂದನೇ ಸ್ಥಾನಕ್ಕೆ ತರಲು ಶಿಕ್ಷಕರು ಶ್ರಮಿಸಲು ಕೋರಿದರು. ಜಿಪಂ ಅಧ್ಯಕ್ಷ ತೂಪಲ್ಲಿ ನಾರಾಯಣಸ್ಸಾಮಿ, ಉಪಾಧ್ಯಕ್ಷ ಅಲುವೇಲಮ್ಮ, ತಾಪಂ ಅಧ್ಯಕ್ಷೆ ಸುಬ್ಬಮ್ಮ, ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಜಗದೀಶ್, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ವಿ. ಜಗನ್ನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜ್, ಉತ್ತನೂರು ಶ್ರೀನಿವಾಸ್, ಕೃಷ್ಣಯ್ಯಶೆಟ್ಟಿ, ಕೆ.ವಿ. ರಾಮಪ್ರಸಾದ್ ಮುಂತಾದವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

