ಕೋಲಾರ

ಸಚಿವ ಮುನಿಯಪ್ಪರಿಂದ ಕುತಂತ್ರ ರಾಜಕಾರಣ: ಆರೋಪ

Published On :

ಕ.ಪ್ರ.ವಾರ್ತೆ  ಚಿಂತಾಮಣಿ  ಸೆ. 16,
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕುತಂತ್ರ ರಾಜಕಾರಣಿ ಕೆ.ಎಚ್. ಮುನಿಯಪ್ಪ ಅವರ ಗೆಲವಿಗೆ ಬ್ರೇಕ್ ಹಾಕಲು ಬೋವಿ ಸಮುದಾಯದ ತಮ್ಮನ್ನು ಗೆಲ್ಲಿಸಲು ಇಂದಿನಿಂದಲೇ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಮಾಜಿ ಶಾಸಕ ಎಂ. ನಾರಾಯಣಸ್ವಾಮಿ ಮನವಿ ಮಾಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೋವಿ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಸ್ಪರ್ಧಿಸಲು ಬಿಜೆಪಿ ರಾಜ್ಯ ಹಾಗೂ ರಾಷ್ಟ್ರ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದೇನೆ. ದಲಿತ ಕೇರಿಗಳಲ್ಲಿ ಇಂದಿಗೂ ರಸ್ತೆ, ಚರಂಡಿ, ನೀರು ಸೇರಿದಂತೆ ಮೂಲ ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಸಚಿವ ಮುನಿಯಪ್ಪ ಅವರು ಚುನಾವಣೆ ಬಂದಾಗ ಕಾಣಿಸಿಕೊಂಡು ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ದೇಶದ ಪ್ರಧಾನ ಮಂತ್ರಿಯಾಗಲು ಎಲ್ಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಮುಂದಾಗಬೇಕೆಂದು ಹೇಳಿದರು.
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ತಾಲೂಕು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಸತ್ಯನಾರಾಯಣ ಮಹೇಶ್ ಅವರ ಜೊತೆ ಕೆಲವು ಸಮಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.
ಮುಖಂಡರಾದ ಬಿ.ಎನ್. ಶ್ರೀನಿವಾಸಪ್ಪ, ನಾ.ಶಂಕರ್, ಶಿವಣ್ಣ, ವೆಂಕಟರವಣ, ಕಾಗತಿ ನಾಗರಾಜ್, ಬಂಡಕೋಟ ಮುನಿವೆಂಕಟಪ್ಪ, ಕೆಇಬಿ ಮಂಜು, ಮಾಡಿಕೇರಿ ಅರುಣ್,ಪ್ರದೀಪ್, ರಾಂಪುರ ಶ್ರೀನಿವಾಸ್, ವೈಜಕೂರು ಕೃಷ್ಣಪ್ಪ, ಪದ್ಮಮ್ಮ, ಚಂದ್ರಶೇಖರ್, ಹಾದಿಗೆರೆ ತಿಮ್ಮಯ್ಯ ಇತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.