ವಿದ್ಯೆ ಕಲಿಸಿದ ಗುರುವನ್ನು ಮರೆಯಬೇಡಿ: ನಾರಾಯಣಪ್ಪ
ಕ.ಪ್ರ.ವಾರ್ತೆ ಕೋಲಾರ ಸೆ. 17
ವಿದ್ಯೆ ಕಲಿಸಿದ ಗುರುವನ್ನು ಮತ್ತು ಶಾಲೆಯನ್ನು ಮರೆಯಬಾರದು ಹಾಗೆಯೇ ಒಬ್ಬ ಪರಿಣಿತ ಶಿಕ್ಷಕರಾಗಬೇಕಾದರೆ ಆಳವಾದ ಅಧ್ಯಯನ ಹಾಗೂ ಪಾಂಡಿತ್ಯ ಸಂಪಾದನೆ ಮಾಡಬೇಕು ಎಂದು ಕಸಾಪ ತಾಲೂಕು ಅಧ್ಯಕ್ಷ ನಾರಾಯಣಪ್ಪ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜಕಲ್ಲಹಳ್ಳಿ ಸರ್ಕಾರಿ ಪ್ರಾಥಮಿಕ ಪ್ರೌಢಶಾಲೆ ಸಹಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕನ್ನಡನಾಡು, ನುಡಿ, ಗಡಿ, ಸಂಸ್ಕೃತಿ- ಸಾಹಿತ್ಯ ವಿಚಾರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬದ್ಧವಾಗಿದ್ದು, ಸಾಹಿತ್ಯ ಸೊಗಡನ್ನು ಹಳ್ಳಿ- ಹಳ್ಳಿಗೂ, ಮನೆ- ಮನೆಗೂ ತಲುಪಿಸುವ ಕಾರ್ಯಕ್ರಮಗಳನ್ನು ಗ್ರಾಮಾಂತರ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.
ಮೊರಾರ್ಜಿ ದೇಸಾಯ ವಸತಿ ಶಾಲೆಯ ಪ್ರಾಂಶುಪಾಲ ಜಿ.ಆರ್. ಶಂಕರೇಗೌಡ ಮಾತನಾಡಿ, ಗುರು- ಶಿಷ್ಯರ ಸಂಬಂಧಕ್ಕೆ ರಾಮಕೃಷ್ಣ ಪರಮಹಂಸ ಮತ್ತು ಸ್ವಾಮಿ ವಿವೇಕಾನಂದರು ಸಾಕ್ಷಿಭೂತರಾಗಿದ್ದಾರೆ ಎಂದು ಹೇಳಿದ ಅವರು, ಮೊದಲು ನಮ್ಮ ತಾಯಿಯನ್ನು ಮತ್ತು ಕನ್ನಡ ಭಾಷೆ ಗೌರವಿಸಬೇಕೆಂದು ಎಂದರು.
ವಿಶೇಷ ಆಹ್ವಾನಿತರಾದ ನೆಲವಾಗಿಲು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎನ್.ಎಸ್. ಮಂಜುನಾಥ ಅವರು ರಾಷ್ಟ್ರ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬಿ.ಎಂ. ಹನುಮಂತಪ್ಪ ಅವರನ್ನು ಸನ್ಮಾನಿಸಿ ಮಾತನಾಡಿ, ಶಿಕ್ಷಕರ ದಿನಾಚರಣೆಯ ಮಹತ್ವ ಮತ್ತು ರಾಧಾಕೃಷ್ಣ ಅವರ ದಕ್ಷತೆ, ಶಿಸ್ತು ಮತ್ತು ಜೀವನಶೈಲಿ ಬಗ್ಗೆ ತಿಳಿಸಿದರು.
ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕ ಕೆ.ವಿ. ವೆಂಕಟೇಶ್ಬಾಬು ವಹಿಸಿದ್ದರು. ವಿದ್ಯಾರ್ಥಿಗಳಾದ ಸಂಧ್ಯಾ ಮತ್ತು ಅಂಬಿಕಾ ಶಿಕ್ಷಕರ ದಿನಾಚರಣೆ ಕುರಿತು ಮಾತನಾಡಿದರು. ವಿವಿಧ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಎಸ್ಡಿಎಂಸಿ ಅಧ್ಯಕ್ಷರಾದ ಕೆ.ಎನ್. ವೆಂಕಟೇಶ್, ಸರ್ವಮಂಗಳ ಇದ್ದರು. ಸಹ ಶಿಕ್ಷಕ ಎಸ್. ರಾಘವೇಂದ್ರ ಸ್ವಾಗತಿಸಿ, ಪದ್ಮಾವತಿ ನಿರೂಪಿಸಿ, ಸಿ.ಮಂಜುನಾಥ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

