'ಉಚಿತ ತರಬೇತಿ ಸದ್ಬಳಕೆ ಮಾಡಿಕೊಳ್ಳಿ'
ಗುಡಿಬಂಡೆ: ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿನ ನಿರುದ್ಯೋಗಿಗಳು ಸರ್ಕಾರದಿಂದ ದೊರೆಯುವ ಉಚಿತ ತರಬೇತಿಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಯಂ ಉದ್ಯೋಗಿಗಳಾಗಬೇಕೆಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಸಮುದಾಯ ಅಭಿವೃದ್ಧಿ ತಜ್ಞ ವೆಂಕಟಾಚಲಪತಿ ಸಲಹೆ ನೀಡಿದರು.
ಪಟ್ಟಣದ ಗಾಯತ್ರಿ ಪ್ರಸಾಧ ಭವನದಲ್ಲಿ ಪೌರಾಡಳಿತ ನಿರ್ದೇಶನಾಲಯ ಹಾಗೂ ಪ.ಪಂ ವತಿಯಿಂದ ಸ್ವರ್ಣ ಜಯಂತಿ ಶಹರಿ ರೋಜಗಾರ್ ಯೋಜನೆಯ ಉಪ ಕಾರ್ಯಕ್ರಮದ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಮಾರ್ಗದರ್ಶನ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಅವರು ಪಟ್ಟಣ ವ್ಯಾಪ್ತಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿನ ನಿರುದ್ಯೋಗಿಗಳಿಗೆ ಸ್ಥಳೀಯ ಪ.ಪಂ. ವತಿಯಿಂದ 14 ತರಭೇತಿಗಳನ್ನು ನೀಡುತ್ತಿದ್ದು, ಈ ತರಬೇತಿಗಳನ್ನು ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಬೇಕೆಂದರು.
ನಂತರ ಮಾತನಾಡಿದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಪೊನ್ನಪ್ಪ ಯುವಕ ಯುವತಿಯರಿಗೆ ಅದರಲ್ಲೂ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ತಮ್ಮ ತರಬೇತಿ ಸಂಸ್ಥೆಯ ಮೂಲಕ 60 ಕ್ಕೂ ಮೇಲ್ಪಟ್ಟು ತರಬೇತಿ ನೀಡುತ್ತಿದ್ದು, ಈ ತರಬೇತಿಯಲ್ಲಿ ಉಚಿತವಾಗಿ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ನಂತರ ತರಭೇತಿ ಪೂರ್ಣಗೊಂಡ ನಂತರ ಪ್ರಮಾಣಪತ್ರವನ್ನು ಸಹ ನೀಡಲಾಗುವುದು ಇದರ ಜೊತೆಗೆ ಲೀಡ್ ಬ್ಯಾಂಕ್ ಸಹಕಾರದಿಂದ ಸಾಲ ಸೌಲಭ್ಯವನ್ನು ಕಲ್ಪಿಸಲಾಗುವುದೆಂದರು. ನಂತರ ಮಾತನಾಡಿದ ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘದ ಅಧ್ಯಕ್ಷ ಜಿ.ವಿ. ವಿಶ್ವನಾಥ್ ತಾಲೂಕಿನಲ್ಲಿ ಯಾವುದೇ ಕೈಗಾರಿಕೆ ಹಾಗೂ ಹೆಚ್ಚಿನ ಸಂಖ್ಯೆ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ವ್ಯವಸ್ಥೆಯಿಲ್ಲ. ಇಂತಹ ಸಂದರ್ಭದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿನ ನಿರುದ್ಯೋಗಿ ಅಥವಾ ಉದ್ಯೋಗಗಳನ್ನು ಸೃಷ್ಟಿಸಿಕೊಳ್ಳಲು ಸಹಕಾರಿ ಎಂದರು.
ಈ ವೇಳೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಮಂಜುನಾಥ್, ಪ.ಪಂ. ಮುಖ್ಯಾಧಿಕಾರಿ ಶ್ರೀರಾಮರೆಡ್ಡಿ, ಉಪನ್ಯಾಸಕ ಬಾಬು, ಪ.ಪಂ. ಸಿಡಿಎಸ್ ಅಧ್ಯಕ್ಷೆ ರಾಜೇಶ್ವರಿ, ಸಮುದಾಯ ಸಂಘಟಕಿ ಸುಧಾ, ಪತ್ರಕರ್ತರ ಸಂಘದ ಅಧ್ಯಕ್ಷ ಜೆ. ವೆಂಕಟರಾಯಪ್ಪ, ಪ.ಪಂ. ಲೆಕ್ಕಾಧಿಕಾರಿ ಜಯರಾಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

