ಕೋಲಾರ

ಜೆ. ನರಸಿಂಹಸ್ವಾಮಿ ಕೈ ಹಿಡಿಯಲು ಯತ್ನ

Published On :

ಬೆಂಗಳೂರು: ಆಪರೇಶನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿರುವ ಆರ್.ಜಾಲಪ್ಪ ಅವರ ಪುತ್ರ ಜೆ.ನರಸಿಂಹಸ್ವಾಮಿ ಅವರನ್ನು ಮತ್ತೆ ಪಕ್ಷಕ್ಕೆ ಕರೆ ತರುವುದಕ್ಕೆ ಕಾಂಗ್ರೆಸ್‌ನ ಒಂದು ವಲಯದಲ್ಲಿ ಭಾರಿ ಪ್ರಯತ್ನ ಆರಂಭಗೊಂಡಿದೆ. ಕಳೆದ ಬಾರಿ ದೊಡ್ಡಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದಿದ್ದ ನರಸಿಂಹಸ್ವಾಮಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿದ್ದರು. ಮಾತ್ರವಲ್ಲ ಬಿಜೆಪಿಯಿಂದ ಸ್ಪರ್ಧಿಸಿ ಮರು ಆಯ್ಕೆಗೊಂಡಿದ್ದರು. ಅವರಿಗೆ ಕೊಳಚೆ ನಿರ್ಮೂಲನೆ ಮಂಡಳಿ ಅಧ್ಯಕ್ಷಗಿರಿಯನ್ನು ನೀಡಲಾಗಿತ್ತು. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಯಡಿಯೂರಪ್ಪನವರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಅವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದರು. ಆದರೆ ಈಗ ಅವರನ್ನು ಮರಳಿ ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಪಕ್ಷದ ಒಂದು ವರ್ಗ ಪ್ರಯತ್ನ ನಡೆಸಿದೆ. ಜಾಲಪ್ಪನವರು ಪಕ್ಷಕ್ಕೆ ನೀಡಿದ ಕೊಡುಗೆಯನ್ನು ಗಮನದಲ್ಲಿರಿಸಿಕೊಂಡು ಅವರ ಪುತ್ರನಿಗೆ ಅವಕಾಶ ಕಲ್ಪಿಸಬೇಕು ಎಂಬ ವಾದವನ್ನು ಮುಂದಿಟ್ಟಿದೆ. ಮಾತ್ರವಲ್ಲ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರು ಒಂದೊಮ್ಮೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ತ್ಯಜಿಸಿ ಮಂಗಳೂರಿನತ್ತ ಮುಖಮಾಡಿದರೆ ಆ ಕ್ಷೇತ್ರದಿಂದ ಕಣಕ್ಕಿಳಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಕಾಂಗ್ರೆಸ್‌ನ ಇನ್ನೊಂದು ವರ್ಗ ಆಪರೇಷನ್ ಕಮಲಕ್ಕೆ ಒಳಗಾದವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.