ಕೋಲಾರ

ನೀರಿನ ಅನುದಾನ ಸದ್ಬಳಕೆಯಾಗಲಿ: ಚಿನ್ನಪ್ಪ

Published On :

ಕ.ಪ್ರ. ವಾರ್ತೆ, ಶಿಡ್ಲಘಟ್ಟ, ಸೆ.18
ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸರ್ಕಾರದಿಂದ ಬರುತ್ತಿರುವ ಅನುದಾನ ಸದ್ಬಳಕೆ ಮಾಡಿಕೊಂಡು ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪ ಸೂಚಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶಿಲನಾ ಸಭೆಯಲ್ಲಿ ಮಾತನಾಡಿದರು. ತಾಲೂಕಿನಾದ್ಯಂತ ಕುಡಿಯುವ ನೀರಿಗಾಗಿ ಕೊರೆದಿರುವ ಕೊಳವೆ ಬಾವಿಗಳು, ಪ್ರಸ್ತುತ ಉಪಯೋಗವಾಗುತ್ತಿರುವ ಕೊಳವೆಬಾವಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ರೇಷ್ಮೆ ಇಲಾಖೆಯ ರೇಷ್ಮೆ ವಿಸ್ತರಣಾಧಿಕಾರಿ ಚಂದ್ರಪ್ಪ ಮಾತನಾಡಿ, ಇಲಾಖೆಯಿಂದ ರೈತರಿಗೆ ಅನುಕೂಲವಾಗುವಂತೆ ದ್ವಿತಳಿ ಗೂಡಿಗೆ ಪ್ರೋತ್ಸಾಹಧನ ಪ್ರತಿ ಕೆಜಿಗೆ 40, ಮಿಶ್ರತಳಿ ಗೂಡಿಗೆ 10 ರಂತೆ ರೈತರಿಗೆ ನೀಡಲಾಗುತ್ತಿದೆ. ಕಳೆದ ವರ್ಷ 778 ಜನ ರೈತರಿಗೆ ಈ ಸೌಲಭ್ಯ ನೀಡಲಾಗಿದೆ ಎಂದರು.
ಅಸಮಾಧಾನ: ತಾಲೂಕಿನಲ್ಲಿ ರೇಷ್ಮೆ ಬೆಳೆಗಾರರ ಕುಟುಂಬ ಸದಸ್ಯರಿಗೆ ಅನುಕೂಲ ಕಲ್ಪಿಸುವ ಆರೋಗ್ಯ ವಿಮೆ ಯೋಜನೆಯ ಅನುಷ್ಠಾನಗೊಳಿಸುವುದರಲ್ಲಿ ವಿಫಲರಾಗಿರುವ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯವೈಖರಿ ವಿರುದ್ಧ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷ ಚಿನ್ನಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ಜಿಪಂ ಸದಸ್ಯರಾದ, ಎಸ್.ಎಂ. ನಾರಾಯಣಸ್ವಾಮಿ, ಶಿವಲೀಲಾರಾಜಣ್ಣ, ಶೋಭಾ ಜೈಪ್ರಕಾಶ್, ತಾಪಂ ಅಧ್ಯಕ್ಷ ಯರಬಚ್ಚಪ್ಪ, ಉಪಾಧ್ಯಕ್ಷೆ ಸರಸ್ವತಮ್ಮ ತಮ್ಮಣ್ಣ, ಜಿಪಂ ಯೋಜನಾ ನಿರ್ದೇಶಕ ವೆಂಕಟರವಣಪ್ಪ, ತಾಪಂ ಕಾರ್ಯನಿರ್ವಹಣಾಧಿಕಾರಿ ದೇವರಾಜಗೌಡ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.