ಚಿಂತಾಮಣಿಯಲ್ಲಿ ಸರ್ಕಾರಿ ನೌಕರರ ಭವನಕ್ಕೆ ಶಂಕುಸ್ಥಾಪನೆ
ಚಿಂತಾಮಣಿ: ಸರ್ಕಾರಿ ನೌಕರರ ಹಿತಕ್ಕಾಗಿ 60 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೌಕರರ ಭವನಕ್ಕೆ ಇಂದು ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಹಾಗೂ ಶಾಸಕರಾದ ಜೆ.ಕೆ. ಕೃಷ್ಣಾರೆಡ್ಡಿ, ರಾಜಣ್ಣ ಮತ್ತು ಜಿ.ಪಂ. ಅಧ್ಯಕ್ಷ ಎಸ್.ಎನ್. ಚಿನ್ನಪ್ಪ ಶಂಕುಸ್ಥಾಪನೆಗೆ ಚಾಲನೆ ನೀಡಿದರು.
ಅವರು ಗುರುವಾರ ಭಾರತ ರತ್ನ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆಗೆ ಚಾಲನೆ ನೀಡಿದರು.
ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪನವರ ಅನುದಾನ 10 ಲಕ್ಷ, ಸ್ಥಳೀಯ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಅನುದಾನ 10 ಲಕ್ಷ, ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಅನುದಾನ 10 ಲಕ್ಷ, ಶಿಡ್ಲಘಟ್ಟ ಕ್ಷೇತ್ರದ ಶಾಸಕ ಎಂ. ರಾಜಣ್ಣ ಅನುದಾನ 5 ಲಕ್ಷ, ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಅನುದಾನ 5 ಲಕ್ಷ, ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷ ಚಿನ್ನಪ್ಪ ಹಾಗೂ ಸದಸ್ಯರಿಂದ 5 ಲಕ್ಷ ಸುಮಾರು 45 ಲಕ್ಷ ಅನುದಾನವನ್ನು ನೀಡುವುದಾಗಿ ತಿಳಿಸಿದರು.
ತಾಲೂಕು ದಂಡಾಧಿಕಾರಿಗಳಾದ ಎಂ.ಎನ್. ಮಂಜುನಾಥ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವಸಂತ್ಕುಮಾರ್, ಸರ್ಕಾರಿ ನೌಕರರ ತಾಲೂಕು ಅಧ್ಯಕ್ಷ ಜನಾರ್ದನರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ. ರಂಗಯ್ಯ, ಕೋಮುಲ್ ನಿರ್ದೇಶಕ ಟಿ.ಎನ್. ರಾಜಗೋಪಾಲ್, ತಾ.ಪಂ. ಅಧ್ಯಕ್ಷೆ ಮೀನಾ ಶ್ರೀರಾಮರೆಡ್ಡಿ, ಜಿ.ಪಂ. ಸದಸ್ಯ ವೀಣಾ, ನಗರಸಭಾ ಸದಸ್ಯ ಆರ್. ಪ್ರಕಾಶ್, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್, ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.
ಉಪತಹಸಿಲ್ದಾರ್ ಲೋಕಾ ಬಲೆಗೆ
ಚಿಕ್ಕನಾಯಕನಹಳ್ಳಿ: ಕೃಷಿ ಕುಟುಂಬಕ್ಕೆ ಸೇರಿದವರೆಂಬ ಪ್ರಮಾಣ ಪತ್ರನೀಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುವಾಗ ಉಪತಹಸೀಲ್ದಾರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಾಲೂಕಿನ ಹುಳಿಯಾರು ಹೋಬಳಿ ನಾಡಕಚೇರಿ ಉಪತಹಸೀಲ್ದಾರ್ ಬಸವರಾಜು ಕಂದಿಕೆರೆ ಹೋಬಳಿ ಬಡಕೆಗುಡ್ಲು ವಾಸಿ ನವೀನ್ಕುಮಾರ್ ಎಂಬುವರಿಂದ ಕೃಷಿಕುಟುಂಬದ ಪ್ರಮಾಣ ಪತ್ರ ನೀಡಲು ಮೊದಲು 5ಸಾವಿರ ರು.ಗಳಿಗೆ ಬೇಡಿಕೆ ಇಟ್ಟಿದ್ದಾರೆ. ಚೌಕಾಸಿ ಮಾಡಿ 2800 ರು.ಗಳಿಗೆ ಒಪ್ಪಿಸಿದ ನವೀನ್ಕುಮಾರ್ ಲಂಚದ ಹಣವನ್ನು ಪಟ್ಟಣದ ಶ್ರೀದೇವಿ ಹೊಟೇಲ್ಬಳಿ ಕೊಡುವುದಾಗಿ ನಂಬಿಸಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಕ್ರಮಕೈಗೊಂಡ ಲೊಕಾಯುಕ್ತ ಪೊಲೀಸರು ಲೋಕಾಯುಕ್ತ ನೀರಿಕ್ಷರಾದ ಗೌತಮ್ ನೇತೃತ್ವದಲ್ಲಿ ಹೊಂಚು ಹಾಕಿ ಬಸವರಾಜು ಲಂಚ ಸ್ವೀಕರಿಸುವ ವೇಳೆ ಹಣದ ಸಮೇತವಾಗಿ ಹಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

