ಸಾರ್ವಜನಿಕ ಆಸ್ಪತ್ರೆಯಲ್ಲಿ ಶೇ. 40 ವೈದ್ಯರ ಕೊರತೆ
ಕೆಜಿಎಫ್: ರಾಜ್ಯದ ಎಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೇ. 40ರಷ್ಟು ವೈದ್ಯರ ಕೊರತೆಗಳಿದ್ದು, ಆಯಾ ಆಸ್ಪತ್ರೆಗಳಲ್ಲಿ ಇರುವ ವೈದ್ಯರುಗಳೇ ಹೆಚ್ಚು ಪ್ರಾಮಾಣಿಕವಾಗಿ ಕೆಲಸ ಮಾಡಿದಲ್ಲಿ ರೋಗಿಗಳ ಮತ್ತು ಆಸ್ಪತ್ರೆಗೆ ಬರುವ ಸಾರ್ವಜನಿಕರ ಸಮಸ್ಯೆಗಳನ್ನು ನಿಭಾಯಿಸಲು ಸಾಧ್ಯವಾಗುತ್ತದೆ ಎಂದು ಕುಟುಂಬ ಕಲ್ಯಾಣ ಆರೋಗ್ಯ ಸಚಿವ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದರು.
ಕೆಜಿಎಫ್‌ನ ಸಾರ್ವಜನಿಕ ಆಸ್ಪತ್ರೆಗೆ ಗುರುವಾರ ಸಂಜೆ ಭೇಟಿ ನೀಡಿದ್ದ ಅವರು, ಆಸ್ಪತ್ರೆಯ ಎಲ್ಲಾ ರೋಗಿಗಳ ಕೊಠಡಿ, ಔಷಧಿಗಳ ಕೊಠಡಿ, ಶೌಚಾಲಯ, ಅಡುಗೆ ಕೊಣೆ ಸೇರಿದಂತೆ ಇತರೇ ಚಿಕಿತ್ಸಾ ಕೊಠಡಿ, ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ಮತ್ತು ಮಹಿಳಾ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು.
ಇದೇ ವೇಳೆ ಕೋಲಾರ ಜಿಲ್ಲಾ ಹೆಚ್ಚುವರಿ ಆರೋಗ್ಯಾಧಿಕಾರಿ ಡಾ.ಫಯಾಜ್‌ಖಾನ್ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ.ಕಮಲಾಕರ್ ಅವರನ್ನು ಕುರಿತು ಜಿಲ್ಲೆಯ ಮತ್ತು ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಸೇರಿದಂತೆ ಇತರೆ ಸಮಸ್ಯೆ ಬಗೆಹರಿಸಲು ಮತ್ತು ಅಗತ್ಯ ಕ್ರಮ ಕೈಗೊಳ್ಳಲು ತಾವುಗಳು ಖುದ್ದಾಗಿ ಚರ್ಚಿಸಿ ಅಗತ್ಯವಿರುವ ವೈದ್ಯರನ್ನು ವಾರದಲ್ಲಿ ಮೂರು ದಿನಗಳು ಕಾರ್ಯನಿರ್ವಹಿಸಲು ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿಕೊಡಲು ಮುಂದಾಗಬೇಕು. ತಮ್ಮ ವತಿಯಿಂದಾಗುವ ಕೆಲಸಕ್ಕೆ ಸಚಿವರು ಇಲ್ಲಿವರೆಗೆ ಬರಬೇಕಾ ಎಂದು ಪ್ರಶ್ನಿಸಿದರು. ಆಸ್ಪತ್ರೆಗೆ ವೈದ್ಯರ ನೇಮಕ, ಉಪಕರಣಗಳು, ಸಲಕರಣಗಳು ಸೇರಿದಂತೆ ಇತರೆ ಪ್ರಮುಖವಾಗಿ ಬೇಕಾಗಿರುವುದನ್ನು ಪೂರೈಸಲು ಅಗತ್ಯ ಕ್ರಮ ಜರುಗಿಸುವುದಾಗಿ ತಿಳಿಸಿದರು. ಡಿಎಸ್‌ಎಸ್, ಕರ್ನಾಟಕ ಸಮತಾ ಸೈನಿಕ ದಳ ಮುಂತಾದ ಸಂಘದ ವತಿಯಿಂದ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಶಾಸಕ ವೈ.ಸಂಪಂಗಿ, ಎಐಸಿಸಿ ಸದಸ್ಯ ಎನ್. ಶ್ರೀನಿವಾಸ್, ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ರೂಪಾಶಶಿಧರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಆ.ಮು. ಲಕ್ಷ್ಮೀನಾರಾಯಣ, ನಾರಾಯಣರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಧರ್‌ರಾಜ್, ರಾಧಾಕೃಷ್ಣರೆಡ್ಡಿ, ನಗರ ಘಟಕದ ಬಿಜೆಪಿ ಅಧ್ಯಕ್ಷ ಸುರೇಶ್ ನಾರಾಯಣಕುಟ್ಟಿ, ಕಾರ್ಯದರ್ಶಿ ಬಾಟಾ ಗೋಪಾಲ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಮುದಳೈಮುತ್ತು, ಡೇವಿಡ್, ಸಂಪತ್‌ಕುಮಾರ್, ಅಪ್ಪಿರೆಡ್ಡಿ ಸೇರಿದಂತೆ ಇತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

