ಕೋಲಾರ

ಕೊಲೆ ಆರೋಪಿ ಸೆರೆ; ಹೋರಾಟಕ್ಕೆ ಜಯ

Published On :

ಕ.ಪ್ರ.ವಾರ್ತೆ ಕೋಲಾರ ಸೆ.19
ಹೆಂಡತಿ ಮತ್ತು ಮಗುವನ್ನು ಕೊಲೆಗೈದ ಆರೋಪ ಹೊತ್ತಿರುವ ಸರ್ಕಾರಿ ಶಾಲೆಯ ಗ್ರಂಥಪಾಲಕ ಸಂತೋಷ್‌ಕುಮಾರ್ ಅವರನ್ನು ಪ್ರಗತಿಪರ ಸಂಘಟನೆಗಳ ಹೋರಾಟದ ಫಲದಿಂದ ಪೊಲೀಸರು ಬಂಧಿಸಿದ್ದಾರೆಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಬಯ್ಯಾರೆಡ್ಡಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಜುಲೈ 10 ರಂದು ಆರೋಪಿ ಸಂತೋಷ್‌ಕುಮಾರ್ ತನ್ನ ಹೆಂಡತಿ ವೀಣಾ ಮತ್ತು ಮಗಳು ದೀಪ್ತಿಯ ಸಾವಿನ ನಂತರ ತಲೆಮರೆಸಿಕೊಂಡಿದ್ದರು. ಆರೋಪಿ ಬಂಧನಕ್ಕಾಗಿ ಜನವಾದಿ ಮಹಿಳಾ ಸಂಘಟನೆ ಹಾಗೂ ಇನ್ನಿತರ ಪ್ರಗತಿಪರ ಸಂಘಟನೆಗಳು ಕಳೆದ 30 ದಿನಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಳೆ, ಗಾಳಿ, ಚಳಿ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದವು. ಪ್ರಕರಣ ರಾಜ್ಯದ ಗಮನ ಸೆಳೆದಿತ್ತು. ಪೊಲೀಸರು ವಿಳಂಬವಾದರೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಹರ್ಷ ವ್ಯಕ್ತಪಡಿಸಿದರು.
ಆರೋಪಿ ಪ್ರಕರಣ ನಂತರ ಕೋಲಾರದಲ್ಲೇ ಓಡಾಡಿಕೊಂಡು ಇದ್ದರೂ ಪೊಲೀಸರು ಕ್ರಮ ಏಕೆ ಜರುಗಿಸಿಲ್ಲವೆಂಬುದರ ಕುರಿತು ಇಲಾಖೆ ತನಿಖೆ ನಡೆಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
ವೃತ್ತ ನಿರೀಕ್ಷಕರ ಅಮಾನತ್ತಿಗೆ ಆಗ್ರಹ: ಆರೋಪಿಯನ್ನು ಬಂಧಿಸಲು ನಿರ್ಲಕ್ಷ್ಯ ತೋರಿರುವ ವೃತ್ತ ನಿರೀಕ್ಷಕ ಕೆ.ಎನ್. ರಮೇಶ್ ಅವರನ್ನು ಸೇವೆಯಿಂದ ಅಮಾನತುಪಡಿಸಬೇಕು, ಈ ಸಂಬಂಧ ಸೆ.27 ರಂದು ಕೋಲಾರಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ನೀಡುವುದಾಗಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ವಿ. ಗೀತಾ ತಿಳಿಸಿದರು. ಕಳೆದ 30 ದಿನಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನ್ಯಾಯದ ವಿರುದ್ದ ಪ್ರತಿಭಟನೆ  ನಡೆಸುತ್ತಿದ್ದರೂ ಜಿಲ್ಲೆಯ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮೃತರ ಕುಟುಂಬಕ್ಕೆ ಸಾಂತ್ವನ ಹೇಳದೆ ಇರುವುದು ದುರದೃಷ್ಟಕರ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಮುಖಂಡ ಟಿ. ವಿಜಯಕುಮಾರ್, ಸಮತಾ ಸೈನಿಕ ದಳದ ಪಂಡಿತ ಮುನಿವೆಂಕಟಪ್ಪ, ಸಿಪಿಐಎಂ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ಮೃತರ ಕಡೆಯಿಂದ ಬೀರೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.