ನಿರ್ವಹಣೆಯಿಲ್ಲದೆ ಸೊರಗಿದ ಮಾಲೂರುಆರೋಗ್ಯ ಕೇಂದ್ರ
ಮಾಲೂರು: ತಾಲೂಕಿನ ಚಿಕ್ಕತಿರುಪತಿ ಗ್ರಾಮದ ಆರೋಗ್ಯ ಉಪ ಕೇಂದ್ರದ ಕಟ್ಟಡ ಸೂಕ್ತ ನಿರ್ವಹಣೆವಿಲ್ಲದೆ ಸಾರ್ವಜನಿಕರ ಉಪಯೋಗಕ್ಕೆ ಬಾರದೆ ಹಾಳು ಕೊಂಪೆಯಾಗುತ್ತಿದೆ. ಪುರಾಣ ಪ್ರಸಿದ್ಧ ಪ್ರಸನ್ನ ವೆಂಕಟೇಶ್ವರಸ್ವಾಮಿ ದೇವಾಲಯವಿರುವ ಚಿಕ್ಕತಿರುಪತಿಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯದಿಂದ ಪ್ರತಿನಿತ್ಯ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದರೂ ಆಸ್ಪತ್ರೆಗೆ ಸೂಕ್ತ ನಿರ್ವಹಣೆ ಇಲ್ಲದಂತಾಗಿದೆ.
50 ಬೆಡ್ನ ಆಸ್ಪತ್ರೆಯ ಅವಶ್ಯಕತೆ ಇದೆ. ಆದರೆ ಇಲ್ಲಿ ಎಎನ್ಎಂ ಕೇಂದ್ರ ಮಾತ್ರ ಸ್ಥಾಪಿಸಲು ತಾಲೂಕು ಆಡಳಿತಕ್ಕೆ ಸಾಧ್ಯವಾಗಿದೆ. ಇಲ್ಲಿ ಒಬ್ಬರು ಆರೋಗ್ಯ ಸಹಾಯಕಿ ಹಾಗೂ ಸಿಬ್ಬಂದಿಯೊಬ್ಬರು ದಿನದ 24 ಗಂಟೆ ಸೇವೆ ಸಲ್ಲಿಸಬೇಕಾಗಿದ್ದು, ಅವರಿಗಾಗಿ ಕ್ವಾರ್ಟರ್ಸ್ ವ್ಯವಸ್ಥೆ ಮಾಡಲಾಗಿದೆ. ಈ ಹಿಂದಿನ ಜಿಲ್ಲಾ ಪಂಚಾಯಿತಿಯ ಆಡಳಿತದಲ್ಲಿ ಈ ಕ್ಷೇತ್ರದ ಸದಸ್ಯ ನಾರಾಯಣಸ್ವಾಮಿ ಅವರು ಸಾವಿರಾರು ರು.ಗಳನ್ನು ಎಎನ್ಎಂ ಕೇಂದ್ರದ ಮೂಲ ಸೌಕರ್ಯದ ಅಭಿವೃದ್ಧಿಗಾಗಿ ಹಣ ಮಂಜೂರು ಮಾಡಿಸಿದ್ದರು. ಕಾಮಗಾರಿ ಪೂರ್ಣಗೊಳದ ಹಿನ್ನೆಲೆಯಲ್ಲಿ ಕಟ್ಟಡದಲ್ಲಿ ವಾಸ ಮಾಡಲು ಅವ್ಯವಸ್ಥೆಯ ನೆಪವೊಡ್ಡಿ ಎಎನ್ಎಂ ಉಪ ಕೇಂದ್ರದಲ್ಲಿ ಸಿಬ್ಬಂದಿ ವಾಸ ಮಾಡಲು ಒಪ್ಪದ ಹಿನ್ನೆಲೆಯಲ್ಲಿ ಆರೋಗ್ಯ ಉಪ ಕೇಂದ್ರ ಸ್ಥಾಪನೆಯ ಉದ್ದೇಶವೇ ಮಣ್ಣುಪಾಲಾಗುತ್ತಿದೆ. ಇಲ್ಲಿನ ಸರ್ಕಾರಿ ಆರೋಗ್ಯ ಸೇವೆ ವಿಫಲತೆಯಿಂದ ಚಿಕ್ಕತಿರುಪತಿಯಲ್ಲಿ ಖಾಸಗಿ ವೈದ್ಯರ ಸೇವೆ ಜೋರಾಗಿ ನಡೆಯುತ್ತಿದೆ. ಗ್ರಾಮಾಂತರ ಪ್ರದೇಶವಾಗಿರುವ ಚಿಕ್ಕತಿರುಪತಿಯಲ್ಲಿ ವೈದ್ಯಕೀಯ ಚಿಕಿತ್ಸೆ ಬೇಕಾಗಿದ್ದರೆ ಬಡವರು ಮಾಲೂರು ಪಟ್ಟಣಕ್ಕೆ ಬರಬೇಕಾಗಿದೆ. ಅಲ್ಲದೆ, ವರ್ಷದಲ್ಲಿ ಎರಡು ಬಾರಿ ತಿಂಗಳಗಟ್ಟಲೆ ಮಹೋತ್ಸವ- ಜಾತ್ರೆಗಳು ನಡೆಯುತ್ತವೆ. ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ಆದರೆ, ಇಂತಹ ಸಂದರ್ಭದಲ್ಲಿ ಆರೋಗ್ಯ ಕೇಂದ್ರ ಮುಚ್ಚಿರುವುದರಿಂದ ರೋಗಿಗಳು ಬಹಳ ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಹಲವು ಬಾರಿ ತಾಲೂಕು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನುವ ಗ್ರಾಮದ ನಿವಾಸಿ ಮೂರ್ತಿ, ಈ ಬಗ್ಗೆ ಶಾಸಕರು ಗಮನಹರಿಸಲಿ ಎಂದು ಮನವಿ ಮಾಡಿದ್ದಾರೆ. ಮೂಲ ಸೌಕರ್ಯ ಕೊರತೆಯಿಂದ ಆರೋಗ್ಯ ಉಪಕೇಂದ್ರ ಸೇವೆ ಸ್ಥಗಿತಗೊಂಡಿದೆ. ಕಟ್ಟಡವು ಮೂಲ ಸೌಕರ್ಯದಿಂದ ವಂಚಿತವಾಗಿದ್ದು, ವಾಸಕ್ಕೆ ಯೋಗ್ಯವಾಗಿಲ್ಲ ಎನ್ನುವ ತಾಲೂಕು ವೈದ್ಯಾಧಿಕಾರಿ ಡಾ.ಅನುರಾಧ ಅವರು ರಸ್ತೆ ಬದಿ ಅಂಗಡಿಯವರು ಉಪಕೇಂದ್ರದ ಕಾಂಪೌಂಡ್ಅನ್ನು ಕೆಡವಿದ್ದಾರೆ ಎಂದಿದ್ದಾರೆ. ಸಂಬಂಧಪಟ್ಟವರು ಕೂಡಲೇ ಕಟ್ಟಡವನ್ನು ದುರಸ್ತಿಗೊಳಿಸಬೇಕೆಂದು ಸಾರ್ವಜನಿಕರು ಕೋರಿದ್ದಾರೆ.
ಸಾರಿಗೆ ಬಸ್ ಡಿಕ್ಕಿ: ಶಾಲೆಗೆ ಹೋಗುತ್ತಿದ್ದ ಬಾಲಕ ಸಾವು
ಕೆಜಿಎಫ್: ಶಾಲೆಗೆ ಹೋಗುತ್ತಿದ್ದ ಬಾಲಕನಿಗೆ ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಬೆಮೆಲ್ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕವರಹಳ್ಳಿ ಗ್ರಾಮದ ನಿವಾಸಿ ಸರಸ್ವತಮ್ಮ ಎಂಬುವರ ಮಗನಾದ ಮನೋಜ್(11) ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಮನೋಜ್ ತನ್ನ ಸ್ನೇಹಿತ ರಾಜು ಎಂಬುವನೊಂದಿಗೆ ಸೈಕಲ್ನ ಹಿಂಬದಿ ಕುಳಿತುಕೊಂಡು ಶಾಲೆಗೆ ಹೋಗುತ್ತಿದ್ದಾಗ ಬ್ಯಾಟರಾಯಣಹಳ್ಳಿ ಗ್ರಾಮದ ಬಳಿ ಎದುರುಗಡೆಯಿಂದ ಬಂದ ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮನೋಜ್ ಕೆಳಗೆ ಬಿದ್ದಿದ್ದು ಬಸ್ನ ಹಿಂಬದಿ ಚಕ್ರ ಹರಿದು ಮನೋಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಸ್ ಚಾಲಕನನ್ನು ಬಂಧಿಸಿ ಬಸ್ನ್ನು ವಶಕ್ಕೆ ತೆಗೆದುಕೊಂಡ ಬೆಮೆಲ್ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

