ಕೋಲಾರ

ಆರೋಗ್ಯ ಕೇಂದ್ರಕ್ಕೆ ಶೀಘ್ರ ಸೌಕರ್ಯ

Published On :

ಕ.ಪ್ರ.ವಾರ್ತೆ ಮಾಲೂರು ಸೆ.20
ತಾಲೂಕಿನ ಚಿಕ್ಕತಿರುಪತಿಯಲ್ಲಿನ ಆರೋಗ್ಯ ಕೇಂದ್ರವು ಮುಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಕನ್ನಡಪ್ರಭ ವರದಿಯು ಶುಕ್ರವಾರ ನಡೆದ ತಾಪಂ ಸಭೆಯಲ್ಲಿ ಪ್ರತಿಧ್ವನಿಸಿತು.
ವರದಿಯನ್ನು ಪ್ರಸ್ತಾಪಿಸಿದ ಸದಸ್ಯ ಎಸ್.ವಿ. ಲೋಕೇಶ್, ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಚಿಕ್ಕತಿರುಪತಿಯಲ್ಲಿ ನಿತ್ಯ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಆರೋಗ್ಯ ಕೇಂದ್ರದ ಸೇವೆ ಅತಿ ಜರೂರಾಗಿ ಬೇಕಾಗಿದೆ. ಗ್ರಾಮೀಣ ಭಾಗದ ಜನರು ಆಸ್ಪತ್ರೆಯ ಸೇವೆಯಿಂದ ವಂಚಿತರಾಗುತ್ತಿದ್ದಾರೆ. ಆರೋಗ್ಯ ಇಲಾಖೆಯ ಈ ರೀತಿಯ ನಿರ್ಲಕ್ಷ್ಯ ಸಲ್ಲ ಎಂದರು. ಸದಸ್ಯರ ಮಾತಿಗೆ ಸ್ಪಂದಿಸಿದ ತಾಲೂಕು ವೈದ್ಯಾಧಿಕಾರಿ ಡಾ.ಅನುರಾಧ, ಚಿಕ್ಕತಿರುಪತಿ ಸೇರಿದಂತೆ ತಾಲೂಕಿನ ಹಲವೆಡೆ ಉಪ ಆರೋಗ್ಯ ಕೇಂದ್ರಗಳ ಕಟ್ಟಡಗಳು ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದು, ರಿಪೇರಿಗಾಗಿ ಜಿಲ್ಲಾ ಪಂಚಾಯಿತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗುವ ನಿರೀಕ್ಷೆ ಇದೆ ಎಂದರು.

ಇಂದು ಹಿಂದಿ ದಿನಾಚರಣೆ
ಚಿಂತಾಮಣಿ: ರಾಜ್ಯ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ವತಿಯಿಂದ ಚಿಂತಾಮಣಿ ತಾಲೂಕು ಘಟಕ ಮತ್ತು ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಸೆ. 21ರಂದು ಶನಿವಾರ ಪಟ್ಟಣದ ಡಿಲಿಜನ್ ಸಂಯುಕ್ತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ ಮತ್ತು ಕಾರ್ಯಾಗಾರ ಆಯೋಜಿಸಲಾಗಿದೆ.  ಸದರಿ ಕಾರ್ಯಾಗಾರದಲ್ಲಿ ತಾಲೂಕಿನ ಎಲ್ಲಾ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರು ಭಾಗವಹಿಸಲು ಒಒಡಿ ಸೌಲಭ್ಯವಿದ್ದು, ತಪ್ಪದೆ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನಿತರಹಿತ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ. ಆದೇಶ ಪತ್ರ ತಲುಪದಿದ್ದಲ್ಲಿ ರಾಮಚಂದ್ರಸಿಂಗ್ ಅಧ್ಯಕ್ಷರು, ತಾಲೂಕು ಘಟಕ(ಮೊ. 9743892550) ಸಂಪರ್ಕಿಸಲು ಕೋರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.