ಕೋಲಾರ

ಕೋಮುವಾದಿಗಳಿಗೆ ತಕ್ಕ ಪಾಠ ಕಲಿಸಿ: ಸಿದ್ದರಾಮಯ್ಯ

Published On :

ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಸೆ.20
ಜಾತ್ಯತೀತ ಎಂದೇಳಿಕೊಂಡು ಕೋಮುವಾದಿಗಳ ಜತೆಗೆ ಸೇರಿದ ಜೆಡಿಎಸ್ ಮತ್ತು ಭ್ರಷ್ಟಾಚಾರದ ಆಡಳಿತ ನಡೆಸಿದ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಸುಭದ್ರ ಆಡಳಿತ ನಡೆಸಲು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದು ಜನರ ವಿಶ್ವಾಸ ಉಳಿಸಿಕೊಂಡಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಪಕ್ಷದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜೆಡಿಎಸ್ ಜಾತ್ಯತೀತ ಸೋಗಿನಲ್ಲಿ ರಾಜಕೀಯ ಮಾಡಿದರೆ, ಕೋಮುವಾದಿ ಬಿಜೆಪಿ ಭ್ರಷ್ಟ ಆಡಳಿತಕ್ಕೆ ಒತ್ತು ಕೊಟ್ಟಿತ್ತು. ಈ ಕಾರಣದಿಂದ ಜನರ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಿದರು. ಈ ಬಾರಿ ರಾಜ್ಯದಲ್ಲಿ ಸಂಪೂರ್ಣ ಬಹುಮತದ ಯಾವುದೇ ಸರ್ಕಾರ ಅಧಿಕಾರಕ್ಕೆ ಬಾರದೇ ಸಮ್ಮಿಶ್ರ ಸರ್ಕಾರ ಬರುತ್ತದೆ ಎಂಬ ಹುಸಿ ಸಮೀಕ್ಷಾ ವರದಿಗಳನ್ನು ಜನ ಸುಳ್ಳಾನ್ನಾಗಿಸಿದರು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಆಂಜಿನಪ್ಪ ಮಾತನಾಡಿ, ಜಿಲ್ಲೆಗೆ ಶಾಶ್ವತ ನೀರಾವರಿ ಸೌಲಭ್ಯವನ್ನು ಒದಗಿಸಬೇಕು. ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದರು.
ಸಚಿವರಾದ ರಾಮಲಿಂಗಾರೆಡ್ಡಿ, ಶ್ರೀನಿವಾಸ್ ಪ್ರಸಾದ್, ದಿನೇಶ್ ಗುಂಡೂರಾವ್, ಶಾಸಕ ಡಾ. ಕೆ. ಸುಧಾಕರ್, ಮಾಜಿ ಶಾಸಕ ಎನ್. ಸಂಪಂಗಿ ಮುಂತಾದವರು ಉಪಸ್ಥಿತರಿದ್ದರು.

ಈ ಬಾರಿ ರಾಜ್ಯದಲ್ಲಿ ಸಂಪೂರ್ಣ ಬಹುಮತದ ಯಾವುದೇ ಸರ್ಕಾರ ಅಧಿಕಾರಕ್ಕೆ ಬಾರದೇ ಸಮ್ಮಿಶ್ರ ಸರ್ಕಾರ ಬರುತ್ತದೆ ಎಂಬ ಹುಸಿ ಸಮೀಕ್ಷಾ ವರದಿಗಳನ್ನು ಜನ ಸುಳ್ಳಾನ್ನಾಗಿಸಿದರು
- ಸಿದ್ದರಾಮಯ್ಯ, ಸಿಎಂ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.