ಕೋಲಾರ

ಕೋಲಾರ ಎಪಿಎಂಸಿ ಅಭಿವೃದ್ಧಿಗೆ ಸಹಕಾರ: ಜಿಲ್ಲಾಧಿಕಾರಿ ಭರವಸೆ

Published On :

ಕೋಲಾರ: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವುದಕ್ಕೆ ಸಮಿತಿಯ ಆಡಳಿತ ವರ್ಗ ಹೆಚ್ಚಿನ ಶ್ರಮ ವಹಿಸಬೇಕಾಗಿದೆ. ಈ ಕೆಲಸಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿ ಡಿ.ಕೆ. ರವಿ ತಿಳಿಸಿದರು.
ಎಪಿಎಂಸಿ ಆಡಳಿತ ಮಂಡಳಿಯ ಮನವಿ ಮೇರೆಗೆ ಶುಕ್ರವಾರ ಬೆಳಿಗ್ಗೆ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಿ.ಕೆ. ರವಿ ಅವರು ಮಾರುಕಟ್ಟೆಯಲ್ಲಿ ನಡೆಸುತ್ತಿರುವ ವಹಿವಾಟಿನ ಬಗ್ಗೆ ಆಡಳಿತ ಮಂಡಳಿಯೊಂದಿಗೆ ಸುದೀರ್ಘವಾಗಿ ಚರ್ಚಿಸಿದರು.
ದೂರದ ಊರುಗಳಿಂದ ತರಕಾರಿಗಳನ್ನು ಮಾರುಕಟ್ಟೆಗೆ ತರುವ ರೈತರಿಗೆ ಮಾರುಕಟ್ಟೆ ಆವರಣದಲ್ಲಿ ಕುಡಿಯುವ ನೀರು ಸೇರಿದಂತೆ ಎಲ್ಲಾ ರೀತಿಯ ಮೂಲ ಸೌಲಭ್ಯಗಳನ್ನು ಒದಗಿಸಿಕೊಡುವುದರ ಕಡೆ ಗಮನ ಹರಿಸಬೇಕೆಂದು ಸೂಚಿಸಿದರು.
ಎಪಿಎಂಸಿ ಅಧ್ಯಕ್ಷೆ ರಾಜರಾಜೇಶ್ವರಿ ಮಾತನಾಡಿದರು. ಉಪಾಧ್ಯಕ್ಷ ವಡಗೂರು ರಾಮು, ನಿರ್ದೇಶಕರಾದ ಬಣಕನಹಳ್ಳಿ ನಟರಾಜ್, ಹೊಳಿಲಿ ಪ್ರಕಾಶ್, ಈರಪ್ಪ, ಗೋಪಾಲಪ್ಪ, ರಮೇಶ್, ನಾರಾಯಣಸ್ವಾಮಿ, ಪಾಲಾಕ್ಷಗೌಡ ಮತ್ತು ಆರ್.ಎ.ಪಿ ನಾರಾಯಣಸ್ವಾಮಿ, ಸುಧಾಕರ್ ಗೌಡ ಮತ್ತಿತರರು ಇದ್ದರು.

ಮುನಿಯಪ್ಪರಿಂದ ಸಚಿವೆ ಉಮಾಶ್ರೀಗೆ ಸನ್ಮಾನ
ಕೋಲಾರ: ಜಿಲ್ಲೆಗೆ ಭೇಟಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಉಮಾಶ್ರೀ ಅವರನ್ನು ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಸನ್ಮಾನಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಸಚಿವೆ ಉಮಾಶ್ರೀ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪನವರು, ಉಮಾಶ್ರೀ ಅವರಿಗೆ ಶಾಲು ಹೊದಿಸಿ ಶ್ರೀ ವೆಂಕಟೇಶ್ವರ ಸ್ವಾಮಿಯ ವಿಗ್ರಹವನ್ನು ನೆನಪಿನ ಕಾಣಿಕೆಯಾಗಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಸಹಾಯ ಮತ್ತು ಸ್ತ್ರೀಶಕ್ತಿ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಸಾಲದ ತಿರುವಳಿ ಪ್ರಮಾಣ ಶೇ. 90 ರಷ್ಟಿದೆ.  ಕೇಂದ್ರ ಸರ್ಕಾರವೂ ಮಹಿಳೆ ಮಕ್ಕಳ ಅಭಿವೃದ್ಧಿಗಾಗಿ ಪೌಷ್ಟಿಕ ಆಹಾರ ಹಾಗೂ ಸಹಾಯಧನ ನೀಡುತ್ತಿದೆ ಎಂದರು.
ಬ್ಯಾಂಕ್‌ಗಳಿಗೂ ಸಾಲ ಸೌಲಭ್ಯವನ್ನು ಸ್ತ್ರೀಶಕ್ತಿ ಸಂಘಗಳಿಗೆ ನೀಡಲು ಆದೇಶಿಸಲಾಗಿದೆ. ಕೇಂದ್ರದಿಂದ ಹೆಚ್ಚಿನ ಆರ್ಥಿಕ ನೆರವನ್ನು ನೀಡಲು ಪ್ರಸ್ತಾವನೆ ಕಳುಹಿಸಿದರೆ ಅದನ್ನು ಕೇಂದ್ರದಿಂದ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು. ಬಂಗಾರಪೇಟೆ ಶಾಸಕ ಕೆ.ಎಂ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಡಿ.ಕೆ.ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕಿ ಗುರ್ನೀತ್ ತೇಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.