ಶಿರಾ ವಿವಿಧೆಡೆ ಅವಘಡ: ಮೂವರ ಸಾವು
ಶಿರಾ: ತಾಲೂಕಿನ ವಿವಿಧೆಡೆ ಅವಘಡಗಳು ನಡೆದು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಪ.ನಾ.ಹಳ್ಳಿ- ಈಜಲು ಹೋದ ಬಾಲಕನೊಬ್ಬ ನೀರುಪಾಲಾದ ಘಟನೆ ತಾಲೂಕಿನ ಚಿಕ್ಕಬಾಣಗೆರೆಯಲ್ಲಿ ನಡೆದಿದೆ.
ಗ್ರಾಮದ ತಿಪ್ಪೇಸ್ವಾಮಿ ಎಂಬುವರ ಮಗ ಹರ್ಷ (15) ತನ್ನ ಸ್ನೇಹಿತರೊಂದಿಗೆ ನೀರು ತುಂಬಿದ ಗೋಕಟ್ಟೆ ನೋಡಲು ಹೋದವನು ಈಜಾಡುವ ಆಸೆಯಿಂದ ನೀರಿಗೆ ಇಳಿದಿದ್ದು, ಗುಂಡಿಯ ತಳದಲ್ಲಿದ್ದ ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡು ಹೊರಬರಲಾಗದೆ ಮುಳುಗಿ ಮೃತಪಟ್ಟಿದ್ದಾನೆ.
ತಾಲೂಕಿನ ಪಟ್ಟನಾಯಕನಹಳ್ಳಿ ಠಾಣಾಧಿಕಾರಿ ನದಾಫ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪಘಾತ: ಅಪರಿಚಿತ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಟಾಟಾ ವಾಹನ ಟ್ರಕ್ ಚಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟ ಘಟನೆ ಕಳ್ಳಂಬೆಳ್ಳ ಸಮೀಪದ ರಾ.ಹೆ. 4 ರಲ್ಲಿ ನಡೆದಿದೆ.
ಮೃತನನ್ನು ಚಿಕ್ಕಬಳ್ಳಾಪುರ ತಾಲೂಕಿನ ಟಿ.ವಿ.ಕುಮಾರ್ ಎಂದು ಗುರುತಿಸಿದ್ದು ಕಾಟನ್ ಬಾಕ್ಸ್‌ಗಳನ್ನು
ಹೊತ್ತೊಯುತ್ತಿದ್ದ ಟ್ರಕ್ ಬೆಂಗಳೂರಿಗೆ ಹೋಗುತ್ತಿತ್ತು. ಈ ಘಟನೆಯಲ್ಲಿ ಕ್ಲೀನರ್ ಬಾಬು ಕಾಲಿಗೆ ಪೆಟ್ಟು ಬಿದ್ದಿದೆ. ಕಳ್ಳಂಬೆಳ್ಳ ಠಾಣಾಧಿಕಾರಿ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
ಡಿಕ್ಕಿ ಸಾವು: ರಸ್ತೆಯಲ್ಲಿ ಹೋಗುತ್ತಿದ್ದವನಿಗೆ ಅಪರಿಚಿತ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ರಾ.ಹೆ.4 ರ ತರೂರು ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿ ನಾಗರಾಜ (26) ಎಂದು ತಿಳಿದು ಬಂದಿದ್ದು ಸ್ಥಳಕ್ಕೆ ಕಳ್ಳಂಬೆಳ್ಳ ಠಾಣಾಧಿಕಾರಿಗಳು ಭೇಟಿ ನೀಡಿ ಕೇಸು ದಾಖಲಿಸಿಕೊಂಡಿದ್ದಾರೆ.
ಕಾರು- ಬೈಕ್ ಡಿಕ್ಕಿ: ಸವಾರ ಸಾವು
ಕೋಲಾರ: ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎನ್. ಎಚ್- 4, ಬೆಂಗಳೂರು-ಚೈನ್ ಕೆಂದಟ್ಟಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ತಾಲೂಕಿನ ವೆಂಕಟಾಪುರ ಗ್ರಾಮದ ವಾಸಿ ಆಂಜಿನಪ್ಪ ಮೃತಪಟ್ಟ ದುರ್ದೈವಿ. ನರಸಾಪುರದಿಂದ ತಮ್ಮ ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

