ಹಿಂದಿ ಭಾಷೆಗೆ ತಾರತಮ್ಯ ಸಲ್ಲ: ಕೆ.ಜಿ. ರಂಗಯ್ಯ
ಕ.ಪ್ರ.ವಾರ್ತೆ ಚಿಂತಾಮಣಿ ಸೆ. 22
ಹಿಂದಿಯನ್ನು ಬೇರೆ ಭಾಷೆಗಳಂತೆ ತಾರತಮ್ಯ ಮಾಡದೇ ಶಿಕ್ಷಕರು ಒತ್ತು ನೀಡಿ ಹಿಂದಿ ಭಾಷೆಯಲ್ಲಿ ಪದವೀಧರರನ್ನಾಗಿ ಮಾಡಲು ಮುಂದಾಗಬೇಕೆಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ. ರಂಗಯ್ಯ ಮನವಿ ಮಾಡಿದರು.
ಪಟ್ಟಣದ ಡಿಲಿಜಿಯನ್ಸ್ ಸಂಯುಕ್ತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ ಮತ್ತು ಕಾರ್ಯಾಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಾಷೆ ಸಾಹಿತ್ಯದ ಬಗ್ಗೆ ಅರಿವು ಮೂಡಿಸಿ. ಹಿಂದಿ ಭಾಷೆ ಉಳಿಸಿ ಬೆಳೆಸಲು ಶಿಕ್ಷಕರು ಒತ್ತು ನೀಡಬೇಕೆಂದು ಹೇಳಿದರು.
ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್. ಮಂಜುನಾಥ್ ಮಾತನಾಡಿ, ಹಿಂದಿ ಭಾಷೆ ಕಲಿಯುವುದರಿಂದ ದೇಶದ ಸಮಸ್ತ ರಾಜ್ಯಗಳಲ್ಲಿಯೂ ಸುಗಮವಾಗಿ ವ್ಯವಹರಿಸಬಹುದಾಗಿದೆ ಎಂದು ಹೇಳಿದರು.
ಹಿಂದಿ ಶಿಕ್ಷಕರ ಸಮಸ್ಯೆಗಳಿಗೆ ಮತ್ತು ಸಂಘಕ್ಕೆ ಸದಾ ಸಹಕಾರ ನೀಡುವುದಾಗಿ ತಿಳಿಸಿದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಜನಾರ್ದನರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಹಿಂದಿ ಭಾಷೆ ಕಲಿಯಲು ಹೆಚ್ಚು ಆಸಕ್ತಿ ತೋರಬೇಕು ಎಂದು ಆಶಿಸಿದರು.
ಹಿಂದಿ ಭಾಷಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸುಬ್ಬಾರೆಡ್ಡಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ ಆರ್. ವೆಂಕಟರಮಣರೆಡ್ಡಿ, ಕೋಲಾರ ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಡಿಲಿಜಿಯನ್ಸ್ ಸಂಯುಕ್ತ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎಂ.ಆರ್. ಅಂಬಿಕ, ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ನಾರಾಯಣಸ್ವಾಮಿ, ಬಿಇಒ ಕಚೇರಿ ಇಸಿಒಗಳಾದ ಚಿಕ್ಕವೆಂಕಟರವಣಪ್ಪ ಮತ್ತು ವಿ. ನಿರ್ಮಲ ಅವರು ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ತಾಲೂಕು ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ವತಿಯಿಂದ ಸ್ವಯಂ ನಿವೃತ್ತಿ ಹೊಂದಿದ ವರಲಕ್ಷ್ಮಿ, ರಾಜ್ಯ ಹಿಂದಿ ಭಾಷಾ ಸಂಘದ ಖಜಾಂಚಿಗಳಾದ ಎಚ್.ಎನ್. ದೇವರಾಜ್, ಆದರ್ಶ ಶಿಕ್ಷಕ ಪ್ರಶಸ್ತಿ ವಿಜೇತ ಆರ್. ಜನಾರ್ದನ್, ನೂತನವಾಗಿ ಆಯ್ಕೆಯಾದ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಹಿರಿಯ ಉಪಾಧ್ಯಕ್ಷ ಆರ್. ವೆಂಕಟರಮಣರೆಡ್ಡಿ, ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್ ಮಂಜುನಾಥ್ ಮತ್ತು ತಾಲೂಕು ನೌಕರರ ಸಂಘದ ಅಧ್ಯಕ್ಷ ಬಿ. ಜನಾರ್ದನ್‌ರೆಡ್ಡಿ ಅವರನ್ನು ಸನ್ಮಾನಿಸಲಾಯಿತು.
ಡಿಲಿಜಿಯನ್ಸ್ ಸಂಯುಕ್ತ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎಂ.ಆರ್. ಅಂಬಿಕ, ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ನಾರಾಯಣಸ್ವಾಮಿ, ಬಿಇಒ ಕಚೇರಿ ಇಸಿಒಗಳಾದ ಚಿಕ್ಕವೆಂಕಟರವಣಪ್ಪ ಮತ್ತು ವಿ. ನಿರ್ಮಲ, ತಾಲೂಕು ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರ ಸಿಂಗ್, ಸಂಪನ್ಮೂಲ ವ್ಯಕ್ತಿಗಳಾಗಿ ಎಚ್. ಎನ್. ದೇವರಾಜ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

