25ರಂದೇ ನಗರಕ್ಕೆ ಮುಖ್ಯಮಂತ್ರಿ
ಕ.ಪ್ರ.ವಾರ್ತೆ ಕೋಲಾರ ಸೆ. 22
ಈ ತಿಂಗಳ 27ಕ್ಕೆ ಜಿಲ್ಲೆಗೆ ಭೇಟಿ ನೀಡಬೇಕಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ. 25ರ ಬುಧವಾರ ಜಿಲ್ಲೆಗೆ ಆಗಮಿಸಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಸೆ. 25ರಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಕನಕದಾಸರ ಅಧ್ಯಯನ ಪೀಠ ಹಾಗೂ ಸಂಶೋಧನಾ ಕೇಂದ್ರ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿರುವ ಕಾಲುದಾರಿ ಸಂತ ಪರಂಪರೆ ಹಾಗೂ ಕನಕದಾಸರು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳಬೇಕಾದ ಹಿನ್ನೆಲೆಯಲ್ಲಿ ಸೆ. 27ರ ಕಾರ್ಯಕ್ರಮ ರದ್ದಾಗಿದೆ.
ಮುಖ್ಯಮಂತ್ರಿಗಳು ಸೆ. 25ರಂದು ಬೆಳಗ್ಗೆ 10.30ಕ್ಕೆ ವೇಮಗಲ್‌ಗೆ ಆಗಮಿಸಿ ವೇಮಗಲ್ ಕೈಗಾರಿಕಾ ಕೇಂದ್ರ ಹಾಗೂ ಕೋಲಾರದಲ್ಲಿ 45 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಜಿಲ್ಲಾಡಳಿತ ಸೌಧಕ್ಕೆ ಶಂಕುಸ್ಥಾಪನೆ ನೆರವೇರಿಸುವರು.
ಇದೇ ಸಂದರ್ಭದಲ್ಲಿ ವೇಮಗಲ್ ಗ್ರಾಮದಲ್ಲಿ ನಿರ್ಮಿಸಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ, ಸ್ಟೇಡಿಯಂ, ಪರಿಶಿಷ್ಟ ಜಾತಿ ವರ್ಗಗಳ ವಿದ್ಯಾರ್ಥಿನಿಲಯ ಕಟ್ಟಡಗಳನ್ನು ಲೋಕಾರ್ಪಣೆ ಸೇರಿದಂತೆ ಮತ್ತಿತರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.
ಇದಾದ ನಂತರ ಕೋಲಾರ ಜಿಲ್ಲಾ ಪಂಚಾಯತಿ ಕಚೇರಿಗೆ ಆಗಮಿಸಿ ಮಧ್ಯಾಹ್ನ 3 ಗಂಟೆಯವರೆಗೂ ಸಾರ್ವಜನಿಕರ ಅಹವಾಲು ಸ್ವೀಕರಿಸುವರು. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಸಕರು, ಜಿಪಂ, ತಾಪಂ, ಗ್ರಾಪಂ ಸೇರಿದಂತೆ ಜನಪ್ರತಿನಿಧಿಗಳೊಂದಿಗೆ ಜಿಲ್ಲೆಯ ಅಭಿವೃದ್ಧಿ, ಆಡಳಿತದ ಕುರಿತು ಸಮಾಲೋಚನೆ ನಡೆಸಿದ ಬಳಿಕ ಸಂಜೆ 4.15ಕ್ಕೆ ಟಿ. ಚನ್ನಯ್ಯ ರಂಗಮಂದಿರದಲ್ಲಿ ಕನಕದಾಸರ ಅಧ್ಯಯನಪೀಠ ಹಾಗೂ ಸಂಶೋಧನಾ ಕೇಂದ್ರ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿರುವ ಕಾಲುದಾರಿ ಸಂತಪರಂಪರೆ ಹಾಗೂ ಕನಕದಾಸರು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಅದೇ ದಿನ ಸಂಜೆ 5.15ಕ್ಕೆ ನಗರ ಹೊರವಲಯದ ಸಾಯಿ ನಾರಾಯಣಿ ಕನ್ವೆನ್ ಷನ್ ಹಾಲ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು 6.30 ಗಂಟೆಗೆ ಬೆಂಗಳೂರಿಗೆ ಹಿಂದಿರುಗುವರು ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

