ಕೋಲಾರ

ಕೆಜಿಎಫ್ ಆಸ್ಪತ್ರೆಗೆ ನಾರಾಯಣರೆಡ್ಡಿ ಭೇಟಿ, ಸಮಸ್ಯೆಗಳ ಬಗ್ಗೆ ಚರ್ಚೆ

Published On :

ಕೆಜಿಎಫ್: ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲ ಸೌಕರ್ಯ ಮತ್ತು ಸಲಕರಣೆಗಳು ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಲು ಕಾಂಗ್ರೆಸ್ ಮುಖಂಡರು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯ ವೈದ್ಯಾಧಿಕಾರಿ ಡಾ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು.  ಈ ವೇಳೆ ಡಾ.ಶಿವಕುಮಾರ್ ಮಾತನಾಡಿ ಆಸ್ಪತ್ರೆಗೆ ಕುಡಿಯುವ ನೀರಿನ ಸಮಸ್ಯೆಯಿದ್ದು ಕೊಳವೆ ಬಾವಿ ಕೊರೆಸಬೇಕು, ರೋಗಿಗಳಿಗೆ ಮೂಲ ಸೌಲಭ್ಯ ಕಲ್ಪಿಸಬೇಕು, ಆಸ್ಪತ್ರೆಗೆ ಅಗತ್ಯವಿರುವ ವೈದ್ಯರನ್ನು ನೇಮಿಸಬೇಕು, ಆಸ್ಪತ್ರೆಗೆ ಸಲಕರಣಗಳು ಮತ್ತು ಉಪಕರಣಗಳು ಸೇರಿದಂತೆ ಇತರೆ ಬೇಡಿಕೆಗಳ ಪಟ್ಟಿಯನ್ನು ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸಲ್ಲಿಸಿರುವುದಾಗಿ ತಿಳಿಸಿದರು. ಅದೇ ರೀತಿ ಜಿಲ್ಲಾ ಪಂಚಾಯಿತಿ ನಾರಾಯಣರೆಡ್ಡಿ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಿ. ಜಯಪಾಲ್ ಮಾತನಾಡಿ ಕೆಜಿಎಫ್ ನಗರ ಮತ್ತು ಗ್ರಾಮೀಣ ಪ್ರದೇಶದ ಸಾವಿರಾರು ರೋಗಿಗಳು ಹಾಗೂ ಸಾರ್ವಜನಿಕರಿಗೆ ನೂರಾರು ವರ್ಷಗಳ ಸೇವೆಸಲ್ಲಿಸುತ್ತಿರುವ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ಯಾವುದೇ ಮೂಲ ಸೌಲಭ್ಯಗಳು, ಮತ್ತು ಅಗತ್ಯವಿರುವ ವೈದ್ಯರ ಕೊರತೆಯಿಂದಾಗಿ ಜನರು ಪರದಾಡುವಂತಾಗಿತ್ತು ಈ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸುವ ಕುರಿತು ರಾಜ್ಯ ಸರ್ಕಾರದ ಗಣನಕ್ಕೆ ಮತ್ತು ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಅತಿ ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ನಗರಸಭೆ ಸದಸ್ಯರಾದ ರಮೇಶ್, ಕೆ.ಸಿ. ಮುರಳೀ ಸೇರಿದಂತೆ ಇತರೆ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.