ಏಕರೂಪ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಕೆಜಿಎಫ್: ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಏಕರೂಪ ಸಮಾನ ಶಿಕ್ಷಣ ಮತ್ತು ಸಮಾನ ಶಾಲೆಗಳ ಶಿಕ್ಷಣ ನೀತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕೆಜಿಎಫ್ ಘಟಕದ ಜಯಕರ್ನಾಟಕ ಸಂಘದ ವತಿಯಿಂದ ನಾಡ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಬಡಕುಟುಂಬದ ಮಕ್ಕಳು ಮಾತೃಭಾಷಾ ಮಾಧ್ಯಮದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿದ್ದರೆ ಶ್ರೀಮಂತ ಮಕ್ಕಳು ಆಂಗ್ಲಭಾಷಾ ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ ಆದರೆ ಜಗತ್ತಿನ ಅನೇಕ ಶಿಕ್ಷಣ ತಜ್ಞರು ಪ್ರತಿಪಾದಿಸುವುದೇನೆಂದರೆ ಎಲ್ಲಾ ಮಕ್ಕಳು ತಮ್ಮ ನೆರೆ-ಹೊರೆಯ ಸಮಾನ ಶಾಲೆಗಳಲ್ಲಿ ಮಾತೃಭಾಷಾ ಮಾಧ್ಯಮದ ಮೂಲಕ ಸಮಾನ ಗುಣಮಟ್ಟದ ಶಿಕ್ಷಣ ಪಡೆದರೆ ಮಾತ್ರ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಸಿಕ್ಕಂತೆ ಆಗುತ್ತದೆ ಆದ್ದರಿಂತ ಏಕರೂಪ ಸಮಾನ ಶಿಕ್ಷಣ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಎ. ಚಂದರ್ ಇತ್ತೀಚಿನ ದಿನಗಳಲ್ಲಿ ಶಿಕ್ಷಣವನ್ನು ಮಾರಾಟ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದ್ದು ಗುಣಮಟ್ಟದ ಶಿಕ್ಷಣದ ಕೊರತೆ ಎಲ್ಲಾಡೆ ಎದ್ದು ಕಾಣುತ್ತಿದೆ. ವಿವಿಧ ರೀತಿಯ ಶಿಕ್ಷಣದ ವ್ಯವಸ್ಥೆಯಿಂದ ನಮ್ಮ ದೇಶದ ನಾಡಿನ ಏಕತೆಗೆ ಧಕ್ಕೆ ಉಂಟಾಗುತ್ತಿದೆ ಇಂತಹ ತಾರತಮ್ಯ ಹೋಗಲಾಡಿಸಬೇಕೆಂದರೆ ಪ್ರಜಾಪ್ರಭುತ್ವ ಅಭಿವೃದ್ಧಿಯಾಗಬೇಕು ಎಂದರೆ ಶಿಕ್ಷಣ ವ್ಯವಸ್ಥೆಯಲ್ಲಿ ಯಾವುದೇ ಬೇದ ಭಾವ ಇಲ್ಲದೆ ಶ್ರೀಮಂತರಿಗೂ ಮತ್ತು ಬಡವರಿಗೂ ಏಕರೂಪ ಸಮಾನ ಶಿಕ್ಷಣ ಜಾರಿಗೆ ತರಬೇಕು ಎಂದರು. ಉಪತಹಸೀಲ್ದಾರ್ ಇನಾಯತ್ತುಲ್ಲಾಖಾನ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷ ಶಂಸುದ್ದೀನ್, ಕಾರ್ಯಾಧ್ಯಕ್ಷ ಮಕ್ಸೂದ್ ಉಮ್ರಾನ್, ಶಶಿಧರ್, ಆನಂದಾಚಾರಿ, ಜಶ್ವಂತ್, ಬಾಬು, ರವೀಂದ್ರಕುಮಾರ್, ಕುಮಾರ್, ನಸೀರ್‌ಅಹಮದ್, ವೆಂಕಟೇಶ್, ಶ್ರೀನಿವಾಸರೆಡ್ಡಿ, ಅಬ್ದುಲ್‌ಶಫಿ, ಮನೋಹರನ್, ಸೈಯದ್‌ಅಪ್ಸರ್ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

