ಪತ್ನಿ ಹತ್ಯಗೈದ ಆರೋಪಿಗೆ ಜಾಮೀನು ನಕಾರ
ಬೆಂಗಳೂರು: ಮದುವೆಯಾಗಿ ಮೂರು ತಿಂಗಳಲ್ಲೇ ವರದಕ್ಷಿಣೆ ಕಿರುಕುಳ ನೀಡಿ ಆಕೆಯನ್ನು ಹತ್ಯಗೈದ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ವೆಂಕಟೇಶ್ ಎಂಬಾತ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ನ್ಯಾ.ಎನ್.ಆನಂದ್ ಅವರಿದ್ದ ಏಕಸದಸ್ಯ ಪೀಠ, ವಿವಾಹವಾಗಿ ಮೂರು ತಿಂಗಳಿಗೆ ಪತ್ನಿಗೆ ಚಿತ್ರಹಿಂಸೆ ನೀಡಿ ಅಮಾನುಷವಾಗಿ ಹತ್ಯೆಗೈಯ್ಯಲಾಗಿದ್ದು, ಇಂತಹ ವ್ಯಕ್ತಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಬಾಗೇಪಲ್ಲಿ ತಾಲೂಕಿನ ರಾಮೋಜಿಪಲ್ಲಿ ಗ್ರಾಮದ ವೆಂಕಟೇಶ್ 2013ರಲ್ಲಿ ಅಶ್ವಿನಿ ಎಂಬಾಕೆಯನ್ನು ವಿವಾಹವಾಗಿದ್ದ. ಆದರೆ, ವಿವಾಹವಾದ ಮೂರೇ ತಿಂಗಳಲ್ಲಿ ಆಕೆಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡಲಾರಂಭಿಸಿದ. ಇದರಿಂದ ಗಂಡ, ಹೆಂಡತಿಯ ನಡುವೆ ತೀವ್ರ ವಾಗ್ವಾದ ಏರ್ಪಟ್ಟಿತ್ತು. ಕೋಪಗೊಂಡಿದ್ದ ವೆಂಕಟೇಶ್ 2013ರ ಫೆಬ್ರವರಿ 25ರಂದು ಚಾಕುವಿನಿಂದ ಆಕೆಯ ಕೈಯಲ್ಲಿನ ನರ ಕತ್ತರಿಸಿದ್ದನು. ನಂತರ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಸುಡಲು ಯತ್ನಿಸಿದ್ದ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಅಶ್ವಿನಿಯನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಸುಮಾರು 20 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಅಶ್ವಿನಿ ಚೇತರಿಸಿಕೊಳ್ಳದೆ ಕೊನೆಯುಸಿರೆಳೆದಿದ್ದಳು.
ಕಾಲು ಬಾಯಿ ರೋಗ; ಲಸಿಕೆ ಹಾಕಿಸಲು ಕರೆ
ಕೋಲಾರ: ಜಿಲ್ಲಾ ಹಾಲು ಒಕ್ಕೂಟ ಕೋಚಿಮುಲ್ವ್ಯಾಪ್ತಿಯ ಗ್ರಾಮಗಳಲ್ಲಿ ಕಾಲುಬಾಯಿ ಜ್ವರ ವ್ಯಾಪಕವಾಗಿ ಹರಡಿತ್ತಿರುವ ಹಿನ್ನೆಲೆಯಲ್ಲಿ ಪಶು ಸಂಗೋಪನಾ ಇಲಾಖೆಯ ಸಹಯೋಗದೊಂದಿಗೆ ಈಗಾಗಲೇ ಸಾಮೂಹಿಕ ಚುಚ್ಚುಮದ್ದಿನ ಕಾರ್ಯಕ್ರಮ ಅನುಷ್ಠಾನದಲ್ಲಿದ್ದು ಕಾಲು ಮತ್ತು ಬಾಯಿ ಜ್ವರ ಉಲ್ಬಣವಾಗಿರುವ ಪ್ರದೇಶದಲ್ಲಿ ರೈತರು ಇದರ ಪ್ರಯೋಜನ ಪಡೆಯುವಂತೆ ಕೋಚಿಮುಲ್ ನಿರ್ವಾಹಕ ನಿರ್ದೇಶಕ ಎಂ. ಹನಿಮೇಶ್ ತಿಳಿಸಿದ್ದಾರೆ. ವೈರಾಣುಗಳಿಂದ ಉಂಟಾಗುವ ಕಾಲು ಮತ್ತು ಬಾಯಿ ಜ್ವರ ತಡೆಯಲು ಲಸಿಕೆಯನ್ನು ಗ್ರಾಮಗಳಲ್ಲಿ ಕಡ್ಡಾಯವಾಗಿ ಹಾಕಿಸಲು ರೈತರಿಗೆ ಮನವಿ ಮಾಡಿರುವ ಅವರು, ಗಂಟಲು ಬೇನೆ ರೋಗ ಕಾಣಿಸಿಕೊಂಡ ಗ್ರಾಮಗಳಲ್ಲೂ ಸದರಿ ಕಾಯಿಲೆಗೆ ಪಶುಪಾಲನಾ ಇಲಾಖಾ ವತಿಯಿಂದ ಲಸಿಕೆ ಕಾರ್ಯಕ್ರಮ ಜಾರಿಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಹಕಾರ ಸಂಘಗಳ ಆಡಳಿತ ವರ್ಗ ಹಾಗೂ ಸಿಬ್ಬಂದಿ ರೋಗ ನಿಯಂತ್ರಿಸಲು ಮರಣ ಹೊಂದಿದ ರಾಸುಗಳನ್ನು ಗ್ರಾಮ ವ್ಯಾಪ್ತಿಯಲ್ಲಿ ಬಸಾಡದೆ ಕಡ್ಡಾಯವಾಗಿ ಮೇಲ್ಬಾಗದಲ್ಲಿ ಸುಣ್ಣದ ಪುಡಿಯನ್ನು ಉದರಿಸುವುದರೊಂದಿಗೆ ಮಣ್ಣಿನಲ್ಲಿ ಹೂತು ಹಾಕಿ ಕ್ರಮ ಜರುಗಿಸುಸುವುದಕ್ಕೆ ತಗಲುವ ವೆಚ್ಚವನ್ನು ಸಂಘದಿಂದ ಭರಿಸಿಕೊಳ್ಳುವಂತೆ ಸೂಚಿಸಿದ್ದಾರೆ. ರೋಗ ನಿಯಂತ್ರಣ ಹಾಗೂ ರಾಸುಗಳ ಚಿಕಿತ್ಸೆಗಾಗಿ ಹೆಚ್ಚಿನ ಮಾಹಿತಿಯನ್ನು ತಾಲೂಕು ವ್ಯಾಪ್ತಿಯಲ್ಲಿ ಒಕ್ಕೂಟದ ಶಿಬಿರ ಕಚೇರಿ ಹಾಗೂ ಸಂಬಂಧಿಸಿದ ಪಶುಪಾಲನಾ ಇಲಾಖೆಯ ಪಶು ಆಸ್ಪತ್ರೆಗಳನ್ನು ಸಂಪರ್ಕಿಸಲು ತಿಳಿಸಿದ್ದಾರೆ.
ಪ್ರತಿಭೆಯಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ: ಸುಧಾಕರ್
ಚಿಕ್ಕಬಳ್ಳಾಪುರ: ವಿದ್ಯಾರ್ಥಿ ಜೀವನ ಮಹತ್ತರ ಘಟ್ಟವಾಗಿದ್ದು ತಮ್ಮ ಪ್ರತಿಭೆಯಿಂದ ಸಾಧಕರಾಗಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಶಾಸಕ ಸುಧಾಕರ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಲಕ್ಕಮ್ಮ ದೊಡ್ಡಮುನಿಯಪ್ಪ ಕಲ್ಯಾಣ ಮಂಟಪದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಆಯೋಜಿಸಿದ್ದ 2013-14 ನೇ ಸಾಲಿನ ಕಾಲೇಜು ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ವಿದ್ಯಾರ್ಥಿಗಳು ಜವಾಬ್ದಾರಿಯಿಂದ ನಡೆದುಕೊಂಡು ಸರ್ವಾಂಗೀಣ ಅಭಿವೃದ್ಧಿ ಸಾಧಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದರು. ವಿಧಾನಪರಿಷತ್ ಸದಸ್ಯ ಮುಮ್ತಾಜ್ ಅಲಿಖಾನ್ ಮಾತನಾಡಿ, ಪುರುಷರಿಗಿಂತ ಮಹಿಳೆಯರು ಕಮ್ಮಿ ಇಲ್ಲ. ಸಮಾಜದಲ್ಲಿ ಹೆಚ್ಚಿನ ಸಾಧನೆ ಮಹಿಳೆಯರಿಂದಾಗುತ್ತಿದೆ ಎಂದರು.ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 650 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದರೂ ಕೊಠಡಿಗಳ ಸಮಸ್ಯೆ ಕಾಡುತ್ತಿದೆ. ಅಲ್ಲದೇ ಕಾಲೇಜಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕೆಂದು ಪ್ರಾಸ್ತಾವಿಕ ನುಡಿಗಳನ್ನಾಡಿದ ಉಪನ್ಯಾಸಕಿ ಎಚ್. ಗೀತಾ ಮನವಿ ಮಾಡಿದರು. ಜಿಪಂ ಅಧ್ಯಕ್ಷ ಚಿನ್ನಪ್ಪ, ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ, ಪ್ರಾಂಶುಪಾಲ ಎಂ.ನಾರಾಯಣಸ್ವಾಮಿ, ಪ್ರೊ.ಅಬ್ದುಲ್ಹಮೀದ್ ಉಪಸ್ಥಿತರಿದ್ದರು.
ದಲಿತರಿಗೆ ಕಾಮಗಾರಿ ನೀಡಲು ಸಿದ್ಧತೆ: ಸಿಎಂ
ಕೋಲಾರ: ದಲಿತರಿಗೆ ತುಂಡು ಗುತ್ತಿಗೆ ಅನುಪಾತದಲ್ಲಿ 5 ಲಕ್ಷ ಕಾಮಗಾರಿಗಳನ್ನು ನೇರವಾಗಿ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಗುರುವಾರ ಸಂಜೆ ನಗರದಲ್ಲಿ ಕೋಲಾರ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾರೋಹಳ್ಳಿ ವಿ. ನಾರಾಯಣಸ್ವಾಮಿ ರವರು ನೀಡಿದ ಮನವಿಯನ್ನು ಸ್ವೀಕರಿಸಿ ಮೇಲಿನಂತೆ ಅವರು ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

