ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘಕ್ಕೆ ಆಯ್ಕೆ
ಕೋಲಾರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತದ ನೂತನ ಅಧ್ಯಕ್ಷರಾಗಿ ಕೆ.ಎಸ್. ಗಣೇಶ್ ಮತ್ತು ಉಪಾಧ್ಯಕ್ಷರಾಗಿ ಅಬ್ಬಣಿ ಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಮೇಲ್ವಿಚಾರಕ ಹಬೀದ್ ಹುಸೇನ್ ಪ್ರಕಟಿಸಿದರು. ಕೋ.ನಾ. ಮಂಜುನಾಥ್, ಎಚ್.ಎನ್. ಮುರಳೀಧರ್, ಮಾಮಿ ಪ್ರಕಾಶ್, ಕೆ.ಆರ್. ಹರೀಶ್, ಎ. ಸದಾನಂದ, ಎ.ಜಿ. ಸುರೇಶ್ ಕುಮಾರ್, ಎಂ. ವರಲಕ್ಷ್ಮಿ, ಆರ್. ವೆಂಕಟೇಶ್ ಬಾಬಾ, ಎಸ್.ಕೆ. ಚಂದ್ರಶೇಖರ್, ಸಿ.ಜಿ. ಮುರಳಿ ಸಂಘದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಬ್ಯಾಲಹಳ್ಳಿ ಗೋವಿಂದಗೌಡ, ಹಿರಿಯ ಪತ್ರಕರ್ತ ವಾಸುದೇವಹೊಳ್ಳ, ಮಹಮದ್ ಯೂನುಸ್, ವಿಶ್ವಕುಂದಾಪುರ, ಪಾ.ಶ್ರೀ. ಅನಂತರಾಮ್ ಇತರರು ಹಾಜರಿದ್ದು, ನೂತನ ನಿರ್ದೇಶಕರಿಗೆ ಮತ್ತು ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭಕೋರಿದರು. ಭಾನುವಾರ ಸಭೆ: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಆಡಳಿತ ಮಂಡಳಿ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕೋಲಾರದ ಪತ್ರಕರ್ತರ ಭವನದಲ್ಲಿ ಸೆ.29 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಸಹಕಾರ ಸಂಘದ ಸದಸ್ಯರ ಸಭೆಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಎಲ್ಲಾ ಪತ್ರಕರ್ತರ ಉಪಸ್ಥಿತಿಯಲ್ಲಿ ಕರೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

