ವಿಕಲಚೇತನರಿಗೆ ಅ.5 ರಂದು ಉದ್ಯೋಗ ಮೇಳ
ಕೋಲಾರ: ಲಿಯೋನಾರ್ಡ್ ಚೆಶೈರ್ ಗ್ಲೋಬಲ್ ಅಲೈಯನ್ಸ್ ಅಂಗ ಸಂಸ್ಥೆಯಾಗ ಚೆಶೈರ್ ಸಂಸ್ಥೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದಲ್ಲಿ ಅ.5ರಂದು ಶನಿವಾರ ನಗರದಲ್ಲಿ ವಿಕಲಚೇತನರಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಚೆಶೈರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಅನುರಾಧ ಪಾಟೀಲ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೆಶೈರ್ ಎಂಬುದು ಎನ್ಜಿಓ. 2008ರಿಂದ ಅಂಗವಿಕಲರ ಜೀವನೋಪಾಯಕ್ಕಾಗಿ ದಾರಿ ತೋರಿಸುತ್ತಾ ಸಹಾಯ ಹಸ್ತವನ್ನು ನೀಡುತ್ತಾ ಬಂದಿದೆ. ಬೆಂಗಳೂರು, ಕೋಲಾರ, ತುಮಕೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಸತತವಾಗಿ 18ರಿಂದ 35 ವಯಸ್ಸಿನ ದೈಹಿಕ, ಶ್ರವಣದೋಷವುಳ್ಳ ಅಂಗವಿಕಲ ಯುವಕ-ಯುವತಿಯರಿಗೆ ಅವರ ಆಸಕ್ತಿ,ಅವಶ್ಯಕತೆ, ದೈಹಿಕ ಸಾಮರ್ಥ್ಯ ಆಧಾರದ ಮೇಲೆ ಉಚಿತ ತರಬೇತಿಗಳನ್ನು ನೀಡುತ್ತಿದೆ. ಶಿಕ್ಷಣ ಮತ್ತು ಕೌಶಲ್ಯಕ್ಕೆ ತಕ್ಕಂತೆ ವಿವಿಧ ಉದ್ಯೋಗಾವಕಾಶಗಳನ್ನು ದೊರಕಿಸಿ ಕೊಟ್ಟು, ಅವರ ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬಂದು ಎಲ್ಲರಂತೆ ಸ್ವಾವಲಂಬನೆ ಜೀವನ ನಡೆಸಲು ಅವಕಾಶ ಕಲ್ಪಿಸುವಂತೆ ಮಾಡುವುದು ಚೆಶೈರ್ ಸಂಸ್ಥೆಯ ಉದ್ದೇಶವಾಗಿದೆ ಎಂದು ವಿವರಿಸಿದರು.
ಚೆಶೈರ್ ಸಂಸ್ಥೆಯ ಉದ್ಯೋಗಾಧಿಕಾರಿ ಸೈಯದ್ ಮಾತನಾಡಿ, ವಿಕಲಚೇತನರ ಉದ್ಯೋಗ ಮೇಳದಲ್ಲಿ ಸುಮಾರು 15 ಕಂಪನಿಗಳಿಗೆ ಆಹ್ವಾನ ನೀಡಲಾಗಿದೆ. ಜಿಲ್ಲೆಯವರು ಮಾತ್ರವಲ್ಲದೆ ಹೊರಗಿವರು ಸಹ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದೆಂದು ತಿಳಿಸಿದರು.
ಕಳೆದ ವರ್ಷ ಕೋಲಾರ ಮತ್ತು ಬಂಗಾರಪೇಟೆಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ 170 ಮಂದಿ ವಿಕಲಚೇತನರು ಭಾಗವಹಿಸಿದ್ದರು. ಸುಮಾರು 108 ಮಂದಿಗೆ ವಿವಿಧ ಕಡೆ ಉದ್ಯೋಗ ಸಿಕ್ಕಿದೆ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಆಯ್ಕೆಯಾದವರಲ್ಲಿ ಸ್ಥಳೀಯ ಉದ್ದಿಮೆಗಳಲ್ಲಿ ಕೆಲಸ ಮಾಡುವವರಿಗೆ ಅವರ ಕೋರಿಕೆ ಮೇರೆಗೆ ಇಲ್ಲೇ ಕೆಲಸ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಎಂಜನಿಯರಿಂಗ್ ಹಾಗೂ ಇನ್ನಿತರ ಉನ್ನತ ಶಿಕ್ಷಣ ಪಡೆವರಿಗೆ ಬೆಂಗಳೂರು ಮತ್ತಿತರ ಕಡೆ ಆರ್ಹತೆಗೆ ತಕ್ಕ ಉದ್ಯೋಗ ಸಿಗುವ ಸಾಧ್ಯತೆಗಳಿವೆ ಎಂದು ಉದ್ಯೋಗ ಮೇಳದ ಜಿಲ್ಲಾ ಸಂಯೋಜಕ ಶ್ರೀನಾಥ್ ವಿವರಿಸಿದರು.
ಜಿಲ್ಲಾ ಉದ್ಯೋಗಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಅ.5ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂತರಗಂಗೆ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ವಿಕಲಚೇತನರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು. ಇಲ್ಲವೇ ದೂ. 08152-2220242 ಅಥವಾ 9901081481 ಸಂಪರ್ಕಿಸಲು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

