ಕೋಲಾರ

ಕಾನೂನಿನ ಅರಿವು ನೆರವು ಕಾರ್ಯಕ್ರಮ

Published On :

ಗುಡಿಬಂಡೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನಿನ ಬಗ್ಗೆ ಅರಿವು ನೆರವು ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಜೆಎಂಎಫ್‌ಸಿ ನ್ಯಾಯಾಲಯದ ಸರ್ಕಾರಿ ಸಹಾಯಕ ಅಭಿಯೋಜಕ ಮಧುಸೂದನರಾಮ್ ಇತ್ತೀಚಿಗೆ ವಿದ್ಯಾರ್ಥಿಗಳು ವ್ಯಾಸಂಗ ಬದಿಗಿಟ್ಟು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ನೋವಿನ ಸಂಗತಿ. ವಿದ್ಯಾರ್ಥಿಗಳು ಜೀವನ ಹಾಳು ಮಾಡಿಕೊಳ್ಳದೇ ಒಳ್ಳೆಯ ವಿದ್ಯೆಯನ್ನು ಪಡೆದು ಪೋಷಕರಿಗೆ ಒಳ್ಳೆಯ ಹೆಸರನ್ನು ತರಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ರಾಮನಾಥರೆಡ್ಡಿ, ನಿರ್ಲಕ್ಷತೆಯಿಂದ ವಾಹನಗಳನ್ನು ಚಲಾಯಿಸದೇ ವಾಹನ ಚಾಲನಾ ನಿಯಮಗಳನ್ನು ವಿದ್ಯಾರ್ಥಿಗಳು ಅರಿತು ವಾಹನ ಚಾಲನ ಪರವಾನಿಗೆ ಪಡೆದು ಚಾಲನೆಗೆ ಮುಂದಾಗಬೇಕು. ಇಲ್ಲವಾದಲ್ಲಿ ಸಮಸ್ಯೆಯನ್ನು ಎದುರಿಸುವಂತಾಗುತ್ತದೆ ಎಂದು ಮೋಟಾರು ಕಾಯ್ದೆ ಕುರಿತು ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಕೀಲ ಶಿವಾನಂದರೆಡ್ಡಿ ಮಾತನಾಡಿ, ರ್ಯಾಗಿಂಗ್ ಮತ್ತು ಮಹಿಳಾ ಕಾನೂನು ಉಚಿತ ಸೇವೆಗಳ ಕುರಿತು, ಜಿ.ವಿ. ವಿಶ್ವನಾಥ್ ಸೈಬರ್ ಕ್ರೈಂ, ಮಾದಕ ವಸ್ತುಗಳ ನಿಷೇಧ, ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ವಕೀಲ ಬಿ. ಮೋಹನ್ ಅಪರಾಧ ಕಾನೂನು ಕುರಿತು, ಉಪನ್ಯಾಸಕಿ ತಾರಾಭಾಯಿ ಸಕಾಲ ಕಾನೂನು ಕುರಿತು ಉಪನ್ಯಾಸ ನೀಡಿದರು. ನಂತರ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಅಮರನಾರಾಯಣ, ಶಿಕ್ಷಣ ಸಂಸ್ಥೆಗಳ ಬಗ್ಗೆ ನಾಗರಿಕರಲ್ಲಿ ಇಂದಿಗೂ ಗೌರವವಿದೆ. ಕೆಲವು ಕಿಡಿಗೇಡಿಗಳು ಮಾಡುವ ಚೇಷ್ಟೆಯಿಂದ ಇಡೀ ಸಮಾಜ ತಲೆ ತಗ್ಗಿಸುವಂತೆ ಆಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.