ಕೋಲಾರ

ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ

Published On :

ಚಿಂತಾಮಣಿ: ಪಟ್ಟಣದ ದೊಡ್ಡಪೇಟೆ, ಜೆ.ಜೆ. ಕಾಲೋನಿ, ನಕ್ಕುಂದಿಪೇಟೆ ಮಾರ್ಗವಾಗಿ ಗ್ರಾಮೀಣ ಪ್ರದೇಶಗಳಿಗೆ ಹೋಗುವ ರಸ್ತೆಯನ್ನು ಅಗಲೀಕರಣಗೊಳಿಸಲು ಆಗ್ರಹಿಸಿ ನಾಗರಿಕರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಈ ಗ್ರಾಮಗಳಿಗೆ ಹೋಗುವ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಪಟ್ಟಣದ ಆಜಾದ್ ಚೌಕ ವೃತ್ತದಿಂದ ತಮಟೆ ಬಾರಿಸುತ್ತಾ ನಗರಸಭೆ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿದರು.
ನಗರಸಭೆಗೆ ಮುತ್ತಿಗೆ: ಕಳೆದ ಹಲವು ತಿಂಗಳ ಹಿಂದೆಯೇ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ರಸ್ತೆ ಅಗಲೀಕರಣಗೊಳಿಸುವಂತೆ ಕೋರಿದರೂ ಅಧಿಕಾರಿಗಳ ಬೇಜವಾಬ್ದಾರಿತನ ತೋರಿ 60 ಅಡಿಯ ರಸ್ತೆಯನ್ನು 18 ಅಡಿಗೆ ಇಳಿಸುತ್ತಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು.
ಸರ್ಕಾರಿ ನಕ್ಷೆಯ ಪ್ರಕಾರ ರಸ್ತೆ ಸುಗುಮವಾಗಿ ಸಂಚರಿಸಲು 60 ಅಡಿಗಳಾಗಿದ್ದು, ಅದರ ಪ್ರಕಾರವೇ ರಸ್ತೆ ಕಾಮಗಾರಿ ಮಾಡುವಂತೆ ಒತ್ತಾಯಿಸಿದ ಧರಣಿ ನಿರತರು ಪಟ್ಟು ಹಿಡಿದರು. ಅಧಿಕಾರಿಗಳು ಸಾರ್ವಜನಿಕರ ಹಿತಾಸಕ್ತಿ ಕಾಪಾಡದೆ ಸರ್ಕಾರದ ಅನುದಾನವನ್ನು ವ್ಯರ್ಥ ಮಾಡಲು ರಸ್ತೆ ಬಳಿಯೇ ಚರಂಡಿ ನಿರ್ಮಿಸಿ ಸಾರ್ವಜನಿಕರ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ನಗರಸಭೆ ಅಧಿಕಾರಿಗಳ ವಿರುದ್ಧ ಆರೋಪಿಸಿದರು. ಧರಣಿ ನಿರತರನ್ನು ಸಮಾದಾನಪಡಿಸಲು ಯತ್ನಿಸಿದ ಅಧಿಕಾರಿಗಳು ಮನವೊಲಿಸುವಲ್ಲಿ ವಿಫಲರಾಗಿದ್ದು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಸರ್ಕಾರಿ ನಕ್ಷೆಯಂತೆ ರಸ್ತೆ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದರು. ವಕೀಲ ಅನ್ವರ್, ನಗರಸಭಾ ಸದಸ್ಯ ಡಿ. ಸಾದಪ್ಪ, ಶಂಕರ್, ಆವುಲ ಕಿಟ್ಟಣ್ಣ, ಸುಬ್ರಮಣಿಸ್ವಾಮಿ, ಗೋಪಾಲಕೃಷ್ಣ, ತ್ಯಾಗರಾಜ್, ನಾಗರಾಜ್, ಶ್ರೀನಿವಾಸರೆಡ್ಡಿ, ಶ್ರೀರಾಮರೆಡ್ಡಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.