ಎಪಿಎಂಸಿ ಅಧ್ಯಕ್ಷರ ಕಾರು ಚಾಲಕನ ಮೇಲೆ ಹಲ್ಲೆ
ಕೋಲಾರ: ಕೋಲಾರ ಎಪಿಎಂಸಿ ಅಧ್ಯಕ್ಷರ ಕಾರಿನ ಚಾಲಕನ ಮೇಲೆ ಗುಂಪೊಂದು ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ನಡೆಸಿ ಕಾರಿನ ಗಾಜುಗಳನ್ನು ಜಖಂಗೊಳಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಎಪಿಎಂಸಿ ಅಧ್ಯಕ್ಷರಿಗೆ ಸರ್ಕಾರ ನೀಡಿರುವ ಕಾರಿನ ಚಾಲಕ ಕುರ್ಕಿ ಮಂಜುನಾಥ್ ಹಲ್ಲೆಗೆ ಒಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಂಗಾರಪೇಟೆ ವೃತ್ತದ ಕಡೆಯಿಂದ ಸರ್ವಜ್ಞ ಪಾರ್ಕಿನ ಸಮೀಪ ಗುಂಪು ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿರುವುದಾಗಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಕಾರಿನ ಚಾಲಕ ಬೈಕಿಗೆ ತಾಕಿಸಿ ವಾಹನ ನಿಲ್ಲಿಸದೆ ಮುಂದೆ ಹೋದನೆಂಬ ಕಾರಣಕ್ಕೆ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿರುವುದಲ್ಲದೆ, ಕಾರಿನ ಗಾಡುಗಳನ್ನು ದ್ವಂಸಗೊಳಿಸಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆ ನಡೆಸಿದವರು ಕುರುಬರ ಪೇಟೆಯ ಬುಜ್ಜಿ ಮತ್ತವರ ಸಹಚರರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಸಿಪಿಐ ರಮೇಶ್ ಗುಂಪನ್ನು ಚದುರಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಇಬ್ಬರು ಮಕ್ಕಳ ಸಾವು
ಕೋಲಾರ: ಮಳೆರಾಯನನ್ನು ಕೆರೆಯಲ್ಲಿ ವಿಸರ್ಜನೆ ಮಾಡಲು ಹೋಗಿದ್ದ ಇಬ್ಬರು ಶಾಲಾ ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಬೆಗ್ಲಿ ಹೊಸಹಳ್ಳಿ ಕೆರೆಯಲ್ಲಿ ಶನಿವಾರ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಬೆಗ್ಲಿ ಬೆಣಜೇನಹಳ್ಳಿಯ ಕಿಶೋರ್ (10) ಮತ್ತು ಬೆಗ್ಲಿಹೊಸಹಳ್ಳಿಯ ಅಕ್ಷಯ್ (10) ಎಂದು ಗುರುತಿಸಲಾಗಿದೆ.
ಶಾಲೆ ಮುಗಿಸಿ ವಾಪಸ್ ಹೋಗುವಾಗ ಮಳೆರಾಯನನ್ನು ಹೊತ್ತು ಆಟವಾಡಿ ಮಳೆರಾಯನನ್ನು ನೀರಿನಲ್ಲಿ ವಿಸರ್ಜನೆ ಮಾಡಲು ಸಂಜೆ ಕೆರೆಗೆ ಹೋಗಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ಹೂಳಿನಲ್ಲಿ ಸಿಕ್ಕಿಕೊಂಡು ಮೇಲೆ ಬರಲಾಗದೆ ಮೃತಪಟ್ಟಿದ್ದಾರೆ. ್ಲ ಮಕ್ಕಳ ಶವವನ್ನು ಶವ ಪರೀಕ್ಷೆಗೆ ಒಳಪಡಿಸುವುದು ಬೇಡವೆಂದು ಗ್ರಾಮಸ್ಥರು ನಿರ್ಧರಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ವಿಷಯ ತಿಳಿದ ಗ್ರಾಮಾಂತರ ಪೊಲೀಸರು ಗ್ರಾಮಕ್ಕೆ ತೆರಳಿ ಮಾಹಿತಿ ಸಂಗ್ರಹಣೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

