ರಸ್ತೆ ಬದಿ ವ್ಯಾಪಾರಸ್ಥರ ತೆರವು ಯತ್ನ: ತೀವ್ರ ವಿರೋಧ
ಬಂಗಾರಪೇಟೆ: ಪಟ್ಟಣದ ಬಜಾರ್ ರಸ್ತೆಯ ವ್ಯಾಪಾರಸ್ಥರು ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದು ಅವರನ್ನು ತೆರವುಗೊಳಿಸುವ ಕಾರ್ಯಕ್ಕೆ ಪುರಸಭೆ ಮುಂದಾಗಿದ್ದು, ಇದಕ್ಕೆ ವ್ಯಾಪಾರಸ್ಥರಿಂದ ವಿರೋಧವ್ಯಕ್ತವಾಗಿ ಪುರಸಭೆ ಸಿಬ್ಬಂದಿ ಹಾಗೂ ವ್ಯಾಪಾರಸ್ಥರ ನಡುವೆ ಮಾತಿನ ಚಕಮಕಿ ನಡೆದು ಕೆಲ ಕಾಲ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು.
ಈ ರಸ್ತೆಯ ಚರಂಡಿಗಳ ಮೇಲೂ ವ್ಯಾಪಾರ ಮಾಡಲಾಗುತ್ತಿದೆ. ಪಾದಚಾರಿಗಳಿಗೆ ಓಡಾಡಲು ಜಾಗವೇ ಇಲ್ಲದಂತಾಗಿದೆ. ಇದರ ಮಧ್ಯ ರಸ್ತೆ ಮೇಲೆಯೂ ಸಣ್ಣ ವ್ಯಾಪಾರಸ್ಥರು ತಳ್ಳುವ ಗಾಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದು ಇದರಿಂದ ಪಾದಚಾರಿಗಳಿಗೆ ಹಾಗೂ ವಾಹನ ಸವಾರರಿಗೆ ಪ್ರತಿದಿನ ಕಿರಿಕಿರಿ ಉಂಟಾಗುತ್ತಿತ್ತು. ಈ ಬಗ್ಗೆ ಸಾರ್ವಜನಿಕರು ಪುರಸಭೆ ಹಾಗೂ ಶಾಸಕರ ಗಮನಕ್ಕೆ ತಂದರೂ ಪ್ರಯೋಜನವಾಗಿರಲಿಲ್ಲ.
ಕಳೆದ ಎರಡು ದಿನಗಳ ಹಿಂದೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಪಟ್ಟಣದಲ್ಲಿ ಬೈಕಿನಲ್ಲಿ ಪ್ರದಕ್ಷಿಣೆ ಕೈಗೊಂಡು ನಾಗರಿಕರ ಸಮಸ್ಯೆ ಆಲಿಸಿದರು. ಈ ವೇಳೆ ನಾಗರಿಕರು ಬಜಾರ್ ರಸ್ತೆಯ ತೊಂದರೆ ಶಾಸಕರಿಗೆ ಮನದಟ್ಟು ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ಶಾಸಕರು ತೆರವುಗೊಳಿಸುವಂತೆ ಮುಖ್ಯಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದರು. ಹಾಗಾಗಿ ಆರೋಗ್ಯ ನಿರೀಕ್ಷಕ ಗೋವಿಂದರಾಜು ಹಾಗೂ ಪರಿಸರ ಅಭಿಯಂತರ ತೀರ್ಥಪ್ರಸಾದ್ ತೆರವುಗೊಳಿಸಲು ಮುಂದಾದಾಗ ವ್ಯಾಪಾರಸ್ಥರಿಂದ ವಿರೋಧ ವ್ಯಕ್ತವಾಯಿತಲ್ಲದೆ ಅಧಿಕಾರಿಗಳನ್ನೇ ದಬಾಯಿಸಿದಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಅಧಿಕಾರಿಗಳ ಮೇಲೆ ದಬ್ಬಾಳಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸುರೇಶ್ ಎಂಬವರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ.
ಬಾಲಕಿ ಸಾವು; ಅಧಿಕಾರಿಗಳ ಭೇಟಿ
ಮುಳಬಾಗಲು: ಡೆಂಘೀ ಜ್ವರದ ಹಿನ್ನಲೆಯಲ್ಲಿ ಗುರುವಾರ ಬಾಲಕಿಯೊಬ್ಬಳು ಮೃತಳಾದ ಹಿನ್ನಲೆಯಲ್ಲಿ ತಾಪಂ ಅಧ್ಯಕ್ಷೆ ಸುಬ್ಬಮ್ಮ, ಉಪಾಧ್ಯಕ್ಷ ರಾಜಪ್ಪ ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ. ರಮಾಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ನೈರ್ಮಲ್ಯಕ್ಕಾಗಿ ತಾಪಂನಿಂದ ಹತ್ತು ಸಾವಿರರು.ಗಳು ಮಂಜೂರಾಗಿದ್ದು, ಕೇವಲ ರು. 2 ಸಾವಿರ ನೀಡಿರುವ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್ ವಿರುದ್ಧ ತಾಪಂ ಉಪಾಧ್ಯಕ್ಷ ರಾಜಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ತಾಪಂ ಅಧಿಕಾರಿ ಡಾ. ರಮಾನಂದ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್, ಗ್ರಾಪಂ ಸದಸ್ಯ ಚೋಟಿಸಾಬ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

