ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ
ಚಿಂತಾಮಣಿ: ಜನಸಾಮ್ಯಾನರ ನಿತ್ಯ ವಸ್ತುಗಳ ಬೆಲೆ ದಿನೇ ದಿನೇ ಏರಿಕೆ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಧಿಕ್ಕರಿಸಿ ಜನರು ಪರ್ಯಾಯವಾಗಿ ಎಡ ಪಕ್ಷಗಳನ್ನು ಸ್ವೀಕರಿಸಲಿದ್ದಾರೆಂದು ಸಿಪಿಎಂ ಜಿಲ್ಲಾ ಮುಖಂಡ ಎಂ. ಗೋಪಿನಾಥ್ ಕರೆ ನೀಡಿದರು.
ಪಟ್ಟಣಕ್ಕೆ ಆಗಮಿಸಿದ ಸಿಪಿಐ ಜಾಥಾ ವಾಹನವನ್ನು ಸ್ವಾಗತಿಸಿ ನಂತರ ಪಟ್ಟಣದ ಗುರು ಭವನ ಮುಂಭಾಗದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಸಂವಿಧಾನದ ಜಾತ್ಯತೀತ ಆಶಯಗಳಿಗೆ ತಕ್ಕಂತೆ ಪ್ರಭುತ್ವ ಮತ್ತು ಧರ್ಮವನ್ನು ಪ್ರತ್ಯೇಕಿಸುವುದು, ಕೋಮುವಾದಿ ಶಕ್ತಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ದಿಟ್ಟ ಹಾಗೂ ದೃಢ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಗೋಫಿನಾಥ್ ಆರೋಪಿಸಿದರು. ಜನರ ಪರಿಸ್ಥಿತಿ ಸಂಕಷ್ಟದಲ್ಲಿರುವಾಗಲೇ ಯುಪಿಎ ಸರ್ಕಾರ ನೈಸರ್ಗಿಕ ಸಂಪನ್ಮೂಲಗಳಾದ ಭೂಮಿ, ಅದಿರು, ಅನಿಲ ಮತ್ತು ತರಂಗಾಂತರ ಮೊದಲಾದವುಗಳನ್ನು ಲೂಟಿ ಮಾಡಲು ಕಾರ್ಪೋರೇಟ್ ಮತ್ತು ದೊಡ್ಡ ಬಂಡವಾಳದಾರರಿಗೆ ಮುಕ್ತ ಅವಕಾಶ ನೀಡಿದೆ, ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಹೇಳಿದರು. ನಂತರ ರೈತ ಮುಖಂಡ ಲಕ್ಷ್ಮಿನಾರಾಯಣರೆಡ್ಡಿ ಮಾತನಾಡುತ್ತಾ ಕಾಂಗ್ರೆಸ್ ಮತ್ತು ಬಿ.ಜೆ.ಪಿ ವೇದಿಕೆಗಳನ್ನು ತಿರಸ್ಕರಿಸಿ ಪರ್ಯಾಯ ವೇದಿಕೆಯನ್ನು ಬಲಪಡಿಸಲು ಜನರು ಬರುವ ಲೋಕಸಭಾ ಚುನಾವಣೆಯಲ್ಲಿ ಎಡಪಕ್ಷಗಳನ್ನು ಸ್ವಾಗತಿಸಲಿದ್ದಾರೆಂದು ಹೇಳಿದರು. ಈ ಸಂದರ್ಭದಲ್ಲಿ ಸಿ.ಪಿ.ಎಂ ಮುಖಂಡರಾದ ಬಾಬಾಜಾನ್, ಬಾಬುರೆಡ್ಡಿ, ಕೃಷ್ಣಾರೆಡ್ಡಿ, ಗೋಪಸಂದ್ರ ಶ್ರೀನಿವಾಸರೆಡ್ಡಿ ಮತ್ತು ಜಹೀರ್ ಪಾಷ ಸೇರಿದಂತೆ ಇನ್ನೂ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

